ಸಂಜೀವಿನಿ ನೌಕರರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಚಿವ ಶರಣಪ್ರಕಾಶ ಪಾಟೀಲ್ ಗೆ ಮನವಿ

0
23

ಕಲಬುರಗಿ: ಬಿಟ್ಟಿ ಚಾಕರಿ ತೊಲಗಿಸಿ! ಸಮಾನ ವೇತನ ಒದಗಿಸಿ ಎಂದು ಕರ್ನಾಟಕ ರಾಜ್ಯ ಸಂಜೀವಿನಿ ನೌಕರರ ಹಾಗೂ ಫಲಾನುಭವಿಗಳ ಸಂಘ ವತಿಯಿಂದ ಕೌಶಲ್ಯಾಭಿವೃದ್ಧಿ ಸಚಿವ ಶರಣಪ್ರಕಾಶ ಪಾಟೀಲ್ ಅವರಿಗೆ ಸಂಘದ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಮನವಿ ಸಲ್ಲಿಸಿದ್ದಾರೆ.

ಮಹಿಳಾ ಸಬಲೀಕರಣ ಬಲಗೊಳಿಸಲು ಹಾಗೂ ಅಲ್ಲಿ ದುಡಿಯುವವರಿಗೆ ನೆರವಾಗಲೂ ಸಂಜೀವಿನಿ ನೌಕರರಿಗೆ ನೇಮಕಾತಿಯ ಆದೇಶ ನೀಡಲು ಬಾಕಿ ಉಳಿಸಿಕೊಂಡಿರುವ ಗೌರವಧನ ಅಥವಾ ವೇತನವನ್ನು ಬ್ಯಾಂಕ್ ಖಾತೆಗೆ ಜಮಾ  ಹಾಗೂ ಗಣತಿ ಕಾರ್ಯದಲ್ಲಿ ತೊಡಗಿದ್ದ ದಿನ ಭತ್ಯೆ 500 ರೂ. ಗಳಂತೆ ಎಲ್ಲಾ ದಿನಗಳಿಗೆ ಹಣವನ್ನ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು.

Contact Your\'s Advertisement; 9902492681

ರಾಜ್ಯದಾದ್ಯಂತ, ಪ್ರತಿ ಗ್ರಾಮ ಪಂಚಾಯತ್ ಮಟ್ಟದಲ್ಲಿಯೂ ಶೌಚಾಲಯ ಹಾಗೂ ಪೀಠೋಪಕರಣ ಹಾಗೂ ಗಣಕಯಂತ್ರಗಳ ಸಹಿತ ಕಛೇರಿಗಳನ್ನು  ಒದಗಿಸಬೇಕು,  ತಕ್ಷಣದಿಂದಲೇ ಪುಸ್ತಕ ಬರಹಗಾರರ ವೇತನ 15,000 ರೂ.ಗಳಿಗೆ ಮತ್ತು ಸಂಪನ್ಮೂಲ ಸಹಾಯಕರಿಗೆ ಕನಿಷ್ಠ 13,000 ರೂ., ವಿವಿಧ ಸಖಿ ಕಾರ್ಯಕರ್ತರಿಗೆ 8,000 ವೇತನವನ್ನು ಹೆಚ್ಚಿಸಬೇಕು ಎಂದು ಮನವಿ ನೀಡಿ ಆಗ್ರಹಿಸಿದರು.

ಪ್ರಯಾಣ ಹಾಗೂ ದಿನ ಭತ್ಯೆಗಳನ್ನು ಮತ್ತು ಮೊಬೈಲ್ ಗಳು ಹಾಗೂ ಅವುಗಳಿಗೆ ಅಗತ್ಯವಾದ ಉಚಿತ ಕರೆನ್ಸಿ, ಭವಿಷ್ಯ ನಿಧಿ ಯೋಜನೆ ಮತ್ತು ಇಎಎಸ್‍ಐ ಸೌಲಭ್ಯ ಜಾರಿಗೊಳಿಸಬೇಕು. ಉಚಿತ ವಿಮಾ ಸೌಲಭ್ಯ,  ಮಹಿಳಾ ಸಬಲೀಕರಣಕ್ಕಾಗಿ ಪಂಚಾಯತ್ ಹಾಗೂ ವಾರ್ಡ ಮಟ್ಟಗಳ ಕಛೇರಿಗಳಲ್ಲಿ ಕಾರ್ಯ ನಿರ್ವಹಿಸುವ ಪುಸ್ತಕ ಬರಹಗಾರರು ಮತ್ತು ಮಹಿಳೆಯರ ನಡುವೆ ನೇರ ಕಾರ್ಯ ನಿರ್ವಹಿಸುವ ಸಂಪನ್ಮೂಲ ವ್ಯಕ್ತಿ ಸಹಾಯಕರನ್ನು ಸರಕಾರಿ ನೌಕರರೆಂದು ಪರಿಗಣಿಸಿ ವೇತನವನ್ನು ನಿಗದಿಸಬೇಕು.  ಅಲ್ಲಿಯವರೆಗೆ  ಕನಿಷ್ಠ ವೇತನ ಒದಗಿಸಬೇಕು ಎಂದು ಸಚಿವರಿಗೆ ಕೋರಿದರು.

ಮಹಿಳಾ ಒಕ್ಕೂಟದ ಹಾಗೂ ಸ್ವ ಸಹಾಯ ಗುಂಪುಗಳ ಪ್ರತಿನಿಧಿಗಳಿಗೆ ಮಾಸಿಕ ಪೆÇ್ರೀತ್ಸಾಹ ಧನವನ್ನು ತಲಾ 2,000 ರೂ. ಸ್ವ ಸಹಾಯಗುಂಪುಗಳಿಗೆ ಅವಶ್ಯ ವಿರುವಷ್ಠು ಐದು ವರ್ಷಗಳ ಕಾಲ ಬಡ್ಡಿ ರಹಿತ ಸಾಲ,  ಮಹಿಳೆಯರ ಜನ ಸಂಖ್ಯೆಗನುಗುಣವಾಗಿ ಬಜೆಟ್ ಅನುದಾನವನ್ನು ಮೀಸಲಿಡಬೇಕು. ಒಂಟಿ ಮಹಿಳೆಯರು, ಗಂಡ ಸತ್ತ ಮಹಿಳೆಯರು, ಪರಿತ್ಯಕ್ತ ಮಹಿಳೆಯರು, ಅಂಗವಿಕಲ ಮಹಿಳೆಯರುಗಳಿಗೆ ಕನಿಷ್ಟ ಮಾಸಿಕ 5,000 ರೂಗಳ ನೆರವು ನೀಡಬೇಕು. ಗಂಡ ಸತ್ತ ಹಾಗೂ ಅಂಗವಿಕಲ ಮತ್ತು ದೇವದಾಸಿ ಯುವ ಮಹಿಳೆಯರ ಮರು ಮದುವೆಗೆ ಪೆÇ್ರೀತ್ಸಾಹ ಧನವನ್ನು ಒದಗಿಸಬೇಕು ಎಂದು ಮನವಿ ಪತ್ರದ ಮೂಲಕ ಆಗ್ರಹಿಸಿದ್ದಾರೆ.

ಈ ವೇಳೆಯಲ್ಲಿ ಸಂಘದ ಗೌರವಾಧ್ಯಕ್ಷರಾದ ಶಾಂತಾ ಘಂಟಿ, ಸಲಹೆಗಾರರಾದ ಕೆ ನೀಲಾ, ಜಿಲ್ಲಾ ಅಧ್ಯಕ್ಷ ನಂದಾದೇವಿ ಮಂಗೊಂಡಿ, ಜಿಲ್ಲಾ ಕಾರ್ಯದರ್ಶಿ ಚಂದ್ರಕಲಾ ಸೇರಿದಂತೆ ಹಲವರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here