ಕಲಬುರಗಿ: ಕಠಿಣ ಶ್ರಮ ಮತ್ತು ಆತ್ಮವಿಶ್ವಾಸದಿಂದ ಪ್ರತಿಯೊಬ್ಬ ರೋಗಿಯನ್ನು ಪರೀಕ್ಷಿಸಿ, ಸೂಕ್ತ ಚಿಕಿತ್ಸೆ ನೀಡಿ ರೋಗಿಗೆ ಪುನರ್ಜನ್ಮ ನೀಡುವ ವೈದ್ಯರು ದೇವರಿಗೆ ಸಮಾನ ಎಂದು ಉಪನ್ಯಾಸಕ ದೇವಿಂದ್ರಪ್ಪ ವಿಶ್ವಕರ್ಮ ಹೇಳಿದರು.
ಅವರು ಕಲಬುರಗಿಯ ಕರುಣೇಶ್ವರ ನಗರದಲ್ಲಿರುವ ವಿಶ್ವನಾಥ ಶೈಕ್ಷಣಿಕ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯಲ್ಲಿ ಆಯೋಜಿಸಿದ್ದ ವೈದ್ಯರ ದಿನಾಚಾರಣೆಯ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸಕರಾಗಿ, ಭಾಗವಹಿಸಿ ಮಾತನಾಡಿದ ಅವರು ವೈದ್ಯಕೀಯ ವೃತ್ತಿ ಎನ್ನುವುದು ಅತ್ಯಂತ ಪವಿತ್ರವಾದದ್ದು. ಕಷ್ಟಕರ ಸನ್ನಿವೇಶದಲ್ಲಿ ಸಮಚಿತ್ತವನ್ನು ಕಾಪಾಡಿಕೊಂಡು ರೋಗಿಗಳ ಜೀವ ಉಳಿಸುವ ಅತ್ಯಂತ ಜವಾಬ್ದಾರಿಯುತ ಕಾರ್ಯವನ್ನು ಸಮಾಜದಲ್ಲಿ ವೈದ್ಯರು ನಿರ್ವಹಿಸುತ್ತಿದ್ದಾರೆ.
ಎಷ್ಟೇ ಒತ್ತಡದಲ್ಲಿ ಕೆಲಸ ಮಾಡಿದರೂ ತಾವು ಚಿಕಿತ್ಸೆ ನೀಡಿದ ರೋಗಿ ಆರೋಗ್ಯಕರವಾಗಿ ಓಡಾಡುವುದನ್ನು ನೋಡಿದರೆ ಸಾಕು ವೈದ್ಯರು ಸಂತೃಪ್ತಿ ಹೊಂದುತ್ತಾರೆ. ಜೀವನದಲ್ಲಿ ಮುಖ್ಯವಾದದ್ದು ಆರೋಗ್ಯವೇ ಹೊರತು, ಹಣವಲ್ಲ. ವೈದ್ಯರಾದವರಿಗೆ ಕರುಣೆ ಮಾತ್ರ ಮುಖ್ಯವಲ್ಲ. ಸಹಾನುಭೂತಿಯೂ ಅಷ್ಟೇ ಮುಖ್ಯ. ರೋಗಿಗಳ ಭಾವನೆಗಳಿಗೆ ಸ್ಪಂದಿಸಿದಾಗ ಮಾತ್ರ ಸಮಾಜದಲ್ಲಿ ವೈದ್ಯರಿಗೆ ಬೆಲೆ ಸಿಗುತ್ತದೆ. ಈ ನಿಟ್ಟಿನಲ್ಲಿ ವೈದ್ಯರು ಮೊದಲು ರೋಗಿಗಳ ಆರೋಗ್ಯ ಸಮಸ್ಯೆಗಳನ್ನು ಆಲಿಸಿ ಉತ್ತಮ ಚಿಕಿತ್ಸೆ ನೀಡಬೇಕು.
ವೈದ್ಯರು ವಾಣಿಜೋದ್ದೇಶಕ್ಕಾಗಿ ಆರೋಗ್ಯ ಸೇವೆ ನೀಡದೇ ಜನರ ಆರೋಗ್ಯ ದೃಷ್ಟಿಯಿಂದ ಸೇವೆ ನೀಡುವ ಮನೋಭಾವ ಹೊಂದಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಸಿದ್ದು, ಧನುಷ್, ವಿನಾಯಕ, ಬಿಂದುಶ್ರೀ ಸೇರಿ ಮುಂತಾದವರು ಹಾಜರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…