ಕಲಬುರಗಿ: ಅಕ್ರಮವಾಗಿ ನಕಲಿ ಗುಟ್ಕಾ ತಯಾರು ಮಾಡುತ್ತಿದ್ದ ಅಡ್ಡೆಯ ಮೇಲೆ ಭಾನುವಾರ ಪೊಲೀಸರ ದಾಳಿ ನಡೆಸಿ 28 ಜನನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕಲಬುರಗಿ ಸಬ್ ಅರ್ಬನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ನಗರದ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ದಾಲ್‌ಮಿಲ್‌ನಲ್ಲಿ ಮಾಣಿಕ್‌ಚಂದ್ ಕಂಪನಿ ಹೆಸರಿನ ನಕಲಿ ಗುಟ್ಕಾ ತಯಾರು ಮಾಡಿ ಮಾರಾಟ ಮಾಡುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ಪೊಲೀಸರು ತಂಡ ದಾಳಿ ನಡೆಸಿದ್ದಾರೆ. ದಾಳಿ ವೇಳೆ ಅಪಾರ ಪ್ರಮಾಣದ ಗುಟ್ಕಾ, ಗುಟ್ಕಾ ತಯಾರು ಮಾಡುವ ಯಂತ್ರ, ಪ್ಯಾಕಿಂಗ್ ಬಾಕ್ಸ್ ಮತ್ತು ಮಾಣಿಕ್ ಚಂದ್ ಹೆಸರಿನ ಕಾಗದಗಳು ಜಪ್ತಿ ಮಾಡಿದ್ದಾರೆ.
ಯುಪಿ ಬಿಹಾರ್, ಮಧ್ಯಪ್ರದೇಶದಿಂದ ಬಂದು ಘಟಕದಲ್ಲಿ ಕೆಲಸ ಮಾಡುತ್ತಿದ್ದ 28 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಮಾಣಿಕ್‌ಚಂದ್ ಗುಟ್ಕಾ ತಯಾರು ಮಾಡಿ ಹೊರದೇಶಕ್ಕೆ ರವಾನೆ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
ತಂಬಾಕು ಮಿಶ್ರಿತ ಗುಟ್ಕಾ ಬ್ಯಾನ್ ಇದ್ರು ಇಲ್ಲಿ ತಂಬಾಕು ಮಿಶ್ರಿತ ಗುಟ್ಕಾ ತಯಾರಿಸುತ್ತಿದ್ದರು ಎಂದು ಹೇಳಲಾಗಿದೆ. ಈ ಕುರಿತಂತೆ ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…