ಮುಂಗಾರು ಹಿನ್ನೆಡೆ ಹಿನ್ನೆಲೆ: ಮುನ್ನೆಚ್ಚರಿಕೆ ಕೈಗೊಳ್ಳಲು ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

0
23

ಕಲಬುರಗಿ: ಜಿಲ್ಲೆಯಲ್ಲಿ ಮುಂಗಾರು ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಬೀಳದೆ ಇರುವುದರಿಂದಾಗಿ ಬರದ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜನರಿಗೆ ಕುಡಿಯುವ ನೀರು ಜೊತೆಗೆ ಜಾನುವಾರುಗಳಿಗೂ ಸಹ ಕುಡಿಯುವ ನೀರು ಮತ್ತು ಅಗತ್ಯ ಪ್ರಮಾಣದಲ್ಲಿ ಮೇವು ಸಂಗ್ರಹಣೆಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಹೇಳಿದರು.

ಕಂದಾಯ ಸಚಿವ ಕೃಷ್ಣ ಭೈರೇಗೌಡ ನೇತೃತ್ವದ ಸಚಿವ ಸಂಪುಟದ ಉಪಸಮಿತಿಯ ಸಭೆಯಲ್ಲಿ ಭಾಗವಹಿಸಿ ರಾಜ್ಯದಲ್ಲಿ ನಿರ್ಮಾಣವಾಗಿರುವ ಬರ ಸೇರಿದಂತೆ ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಚರ್ಚಿಸಿ ಅವರು ಮಾತನಾಡುತ್ತಿದ್ದರು.

Contact Your\'s Advertisement; 9902492681

ರಾಜ್ಯದಲ್ಲಿನ ಬರ, ಪ್ರವಾಹ ಮತ್ತು ಇತರೆ ನೈಸರ್ಗಿಕ ವಿಕೋಪಗಳಿಂದ ಉದ್ಭವಿಸಬಹುದಾದ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಅಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಲು ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಸಚಿವ ಸಂಪುಟ ಉಪ ಸಮಿತಿ ಸಭೆ ಇಂದು ಬೆಂಗಳೂರಿನಲ್ಲಿ ನಡೆಯಿತು.

ಕಲಬುರಗಿ ಜಿಲ್ಲೆಯಲ್ಲಿ ಈ ಸಲ ಮುಂಗಾರು ಮಳೆ ಸಮರ್ಪಕವಾಗಿ ಬೀಳದಿರುವ ಹಿನ್ನೆಲೆಯಲ್ಲಿ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದಾದ ಸನ್ನಿವೇಶವಿದ್ದು, ಅಗತ್ಯ ಕ್ರಮ ಕೈಗೊಳುವ ಮೂಲಕ ಜನರಿಗೆ ಹಾಗೂ ಜಾನುವಾರುಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಪೂರ್ವತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಜೊತೆಗೆ ಜಾನುವಾರುಗಳಿಗೆ ಬೇಕಾಗುವ ಅಗತ್ಯ ಮೇವು ಸಂಗ್ರಹಣೆಗೆ ಕ್ರಮ ಕೈಗೊಳ್ಳಲು ಸಹ ಸೂಚಿಸಲಾಗಿದೆ ಎಂದು ಸಚಿವರು ಹೇಳಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here