ಬಳ್ಳಾರಿ: ಶಿವಶರಣ ಶ್ರೀ ಹಡಪದ ಅಪ್ಪಣ್ಣ ಜಯಂತ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ಸೋಮವಾರ ಬೆಳಗ್ಗೆ ವಿವಿಧ ಜಾನಪದ ಕಲಾ ತಂಡಗಳೊಂದಿಗೆ ಭವ್ಯ ಮೆರವಣಿಗೆಯು ವಿಜೃಂಭಣೆಯಿಂದ ನಡೆಯಿತು.
ಬಳ್ಳಾರಿ ಮಹಾನಗರ ಪಾಲಿಕೆಯ ಮಹಾಪೌರರಾದ ಡಿ.ತ್ರಿವೇಣಿ ಅವರು ಶಿವಶರಣ ಶ್ರೀ ಹಡಪದ ಅಪ್ಪಣ್ಣ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆÉ ಮಾಡಿ, ಭವ್ಯ ಮೆರವಣಿಗೆಗೆ ಚಾಲನೆ ನೀಡಿದರು.
ಭವ್ಯ ಮೆರವಣಿಗೆಯಲ್ಲಿ ವಿವಿಧ ಜಾನಪದ ಕಲಾತಂಡಗಳು ಹಾಗೂ ಕಳಸ-ಕುಂಭ ಹೊತ್ತ ಮಹಿಳೆಯರು ಗಮನ ಸೆಳೆದರು.
ಶಿವಶರಣ ಶ್ರೀ ಹಡಪದ ಅಪ್ಪಣ್ಣ ಜಯಂತ್ಯೋತ್ಸವದ ಭವ್ಯ ಮೆರವಣಿಗೆಯು ಹೆಚ್.ಆರ್.ಗವಿಯಪ್ಪ ವೃತ್ತದಿಂದ ಆರಂಭವಾಗಿ ರೈಲ್ವೆ ನಿಲ್ದಾಣದ ಮಾರ್ಗದಿಂದ ಗಡಿಗಿ ಚೆನ್ನಪ್ಪ ವೃತ್ತದ ಮೂಲಕ ಡಾ.ರಾಜ್‍ಕುಮಾರ್ ರಸ್ತೆಯ ಬಿಡಿಎಎ ಪುಟ್ಬಾಲ್ ಮೈದಾನದ ವೇದಿಕೆ ಸಭಾಂಗಣದವರೆಗೆ ನಡೆಯಿತು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಜುಬೇರಾ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಎಸ್.ಆರ್.ಸುರೇಶ್ ಬಾಬು ಸೇರಿದಂತೆ ಹಡಪದ ಸಮುದಾಯದ ಮುಖಂಡರು ಇದ್ದರು.
——–
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…