ಬಿಸಿ ಬಿಸಿ ಸುದ್ದಿ

ಬೆಂಗಳೂರಿಗೆ ನೂತನ ಹೊಸ 2 ರೈಲು ಪ್ರಾರಂಭಿಸಿ

ಕಲಬುರಗಿ: ನಗರದಿಂದ ಬೆಂಗಳೂರಿಗೆ ನೂತನ ಹೊಸ 2 ರೈಲು (ಬೆಳಿಗ್ಗೆ ಹಾಗೂ ಸಾಯಂಕಾಲ) ಪ್ರಾರಂಭಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ನೇತೃತ್ವದಲ್ಲಿ ನಗರದ ರೈಲು ನಿಲ್ದಾಣದಲ್ಲಿ ಎದುರು ಪ್ರತಿಭಟನೆ ನಡೆಸಿ ರೇಲ್ವೆ ಮುಖ್ಯ ಪ್ರಬಂಧಕರಿಗೆ ಮನವಿ ಸಲ್ಲಿಸಲಾಯಿತು.

ಕಲಬುರಗಿ ಜಿಲ್ಲೆ ಹಾಗೂ ನಗರವು ತುಂಬಾ ಬೃಹದಾಕಾರವಾಗಿ ಬೆಳೆದಿದ್ದು, ಜನಸಂಖ್ಯೆಯಲ್ಲಿಯೂ ಕೂಡಾ ಏರಿಕೆಯಾಗಿದ್ದು, ಸದ್ಯ ಚಲಿಸುವ ರೈಲುಗಳಲ್ಲಿ ಸ್ಥಳಾವಕಾಶ ವಿಲ್ಲದೇ ಬೆಂಗಳೂರಿಗೆ ಹೋಗಲು ಪ್ರಯಾಣಿಕರಿಗೆ ತುಂಬಾ ತೊಂದರೆಯಾಗುತ್ತಿದೆ. ಅದರಂತೆ ಬೆಂಗಳೂರಿಗೆ ಹೋಗಲು ಕಲಬುರಗಿಯಿಂದ ಸಾಕಷ್ಟು ಜನ ವ್ಯಾಪಾರಿಗಳೂ, ರಾಯಕೀಯ ವ್ಯಕ್ತಿಗಳು, ಐಟಿಬಿಟಿ ಉದ್ಯೋಗಿಗಳು ಹಾಗೂ ಇನ್ನಿತರರು ಗಣನೀಯವಾಗಿ ಹೋಗುತ್ತಿದ್ದಾರೆ. ಇದರಿಂದಾಗಿ ಸಕಾಲದಲ್ಲಿ ಪ್ರಯಾಣಿಸಲು ತುಂಬಾ ತೊಂದರೆಯಾಗುತ್ತಿದೆ.

ಅದರಂತೆ ಹಗಲು ಹೊತ್ತಿನಲ್ಲಿ ಬೆಂಗಳೂರಿಗೆ ಪ್ರಯಾಣಿಸಲು ಕೇವಲ ಒಂದು ರೈಲು ಇದ್ದು. ಅದು ಕೂಡಾ ತುಂಬಾ ಜನದಟ್ಟಣೆಯಿಂದ ಕೂಡಿರುತ್ತದೆ. ಆದ್ದರಿಂದ ದಯಾಳುಗಳಾದ ತಾವುಗಳು ನಮ್ಮ ಮನವಿ ಪತ್ರವನ್ನು ಸಹಾನುಭೂತಿಯಿಂದ ಹಾಗೂ ಮಾನವೀಯತೆಯಿಂದ ಪರಿಗಣಿಸಿ, ಕೂಡಲೇ ಕಲಬುರಿಗಿಯಿಂದ ಬೆಂಗಳೂರಿಗೆ ನೂತನವಾಗಿ 2 ಹೊಸ ರೈಲು (ಬೆಳಿಗ್ಗೆ) ಹಾಗೂ (1 ರಾತ್ರಿ) ಕೂಡಲೇ ಪ್ರಾರಂಭಿಸಲು ಕ್ರಮ ಕೈಕೊಳ್ಳಬೇಕು. ಒಂದು ವೇಳೆ ನಮ್ಮ ಮನವಿಯನ್ನು 1 ತಿಂಗಳ ಒಳಗಾಗಿ ಪರಿಗಣಿಸದೇ ಇದ್ದರೆ ನಮ್ಮ ಸಂಘಟನೆವತಿಯಿಂದ ತಮ್ಮ ರೈಲು ನಿಲ್ದಾಣದಲ್ಲಿ ರೈಲು ರೋಕೊ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಈರಣ್ಣಾ ಅಲ್ದೆ, ನಿಸಾರ ಅಹ್ಮದ್, ಕಲ್ಯಾಣಿ ತಳವಾರ, ಧರ್ಮಸಿಂಗ ತಿವಾರಿ, ಉಸ್ಮಾನ ಸಾಬ್, ವಿಠ್ಠಲ ಪೂಜಾರಿ, ದೇವಿಂದ್ರ, ಶರಣಪ್ಪ, ಶಿವಲಿಂಗ, ಅಲ್ಲಿಸಾಬ್, ಶೋಭಾ, ಮಲ್ಲಿಕಾರ್ಜುನ, ಪ್ರಭು ಸೇರಿದಂತೆ ಇತರರು ಇದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

20 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago