ಜಿಲ್ಲೆಯನ್ನು ಬರಗಾಲ ಪೀಡಿತ ಎಂದು ಘೋಷಿಸಲು ಹಣಮಂತ್ರಾಯ ಒತ್ತಾಯ

0
15

ಸುರಪುರ: ಜಿಲ್ಲೆಯ ಸುರಪುರ ಮತ್ತು ಹುಣಸಗಿ ತಾಲೂಕುಗಳು ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಮುಂಗಾರು ಮಳೆ ಬಾರದೇ ರೈತರು ಸಂಕಷ್ಟದಲ್ಲಿದ್ದು ಕೂಡಲೇ ಸರಕಾರ ಯಾದಗಿರಿ ಜಿಲ್ಲೆಯನ್ನು ಬರಗಾಲ ಪೀಡಿತ ಜಿಲ್ಲೆ ಎಂದು ಘೋಷಿಸಬೇಕು ಮತ್ತು ರೈತರಿಗೆ ಪರಿಹಾರ ನೀಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಸಮಿತಿ ಅಧ್ಯಕ್ಷ ಹಣಮಂತರಾಯ ಮಡಿವಾಳ ಚಂದಲಾಪುರ ಒತ್ತಾಯಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಈಗಾಗಲೇ ಜೂನ್ ತಿಂಗಳು ಕಳೆದು ಜುಲೈ ತಿಂಗಳಿಗೆ ಕಾಲಿಟ್ಟಿದ್ದು ಜಿಲ್ಲೆಯಲ್ಲಿ ಈವರೆಗೂ ಮುಂಗಾರು ಮಳೆ ಬಾರದೇ ಕೈಕೊಟ್ಟಿದ್ದು ರೈತರು ತಮ್ಮ ಭೂಮಿಯನ್ನು ಹದ ಮಾಡಿಕೊಂಡು ಸಾಲ ತೆಗೆದು ಬೀಜ ಮತ್ತು ಗೊಬ್ಬರ ಖರೀದಿಸಿ ಇಟ್ಟುಕೊಂಡಿದ್ದು ಮಳೆಗಾಗಿ ಆಕಾಶದ ಕಡೆಗೆ ನೋಡುತ್ತಿದ್ದು ಮುಂಗಾರು ಹಂಗಾಮಿನಲ್ಲಿ ಮಳೆ ಬಾರದೇ ರೈತಾಪಿ ವರ್ಗದವರು ತೀವ್ರ ಸಂಕಷ್ಟದಲ್ಲಿದ್ದಾರೆ ಕೂಡಲೇ ಸರಕಾರ ಯಾದಗಿರಿ ಜಿಲ್ಲೆಯನ್ನು ಬರಗಾಲ ಪೀಡಿತ ಜಿಲ್ಲೆ ಎಂದು ಘೋಷಿಸಬೇಕು ಹಾಗೂ ರೈತರಿಗೆ ಪರಿಹಾರ ವಿತರಣೆಗೆ ಮುಂದಾಗಬೇಕು ಎಂದು ಸರಕಾರವನ್ನು ಒತ್ತಾಯಿಸಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here