8 ರಂದು ಕಲಬುರಗಿ ಕಸಾಪ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

0
237

ಕಲಬುರಗಿ: ಕನ್ನಡ ಮನಸ್ಸುಗಳನ್ನು ಒಂದುಗೂಡಿಸಲು ಕನ್ನಡ ಸಾಹಿತ್ಯ ಪರಿಷತ್ತು ಶ್ರಮಿಸುತ್ತಿದ್ದು, ಕಸಾಪದಿಂದ ಒಂದು ಕೋಟಿ ಸದಸ್ಯತ್ವದ ಗುರಿ ಹೊತ್ತಿರುವ ಕಸಾಪ ರಾಜ್ಯಾಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಅವರ ಅವರ ಆಶಯದಂತೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಇದೇ 8 ರಂದು ಬೆಳಗ್ಗೆ 11.30 ಕ್ಕೆ ನಗರದ ಕನ್ನಡ ಭವನದಲ್ಲಿ ಕಸಾಪ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದ್ದಾರೆ.

ಕರ್ನಾಟಕ ಸೇರಿದಂತೆ ಕನ್ನಡಿಗರು ದೇಶ-ವಿದೇಶಗಳಲ್ಲಿ ವ್ಯಾಪಿಸಿದ್ದಾರೆ. ಆದರೆ, ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯತ್ವ ಇನ್ನೂ ಕೋಟಿ ಸಂಖ್ಯೆಗೆ ಮುಟ್ಟಿಲ್ಲ. ಕನ್ನಡಾಭಿಮಾನವನ್ನು ಹೊಂದಿರುವ ಜನ ನಮ್ಮಲ್ಲಿ ಹೆಚ್ಚಿದ್ದರೂ ಅವರನ್ನು ಕಸಾಪಕ್ಕೆ ಸದಸ್ಯರನ್ನಾಗಿ ಮಾಡುವಲ್ಲಿ ಯಶಸ್ವಿಯಾಗುತ್ತಿಲ್ಲ.

Contact Your\'s Advertisement; 9902492681

ಹಾಗಾಗಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಪರಿಷತ್ತಿನ ಪ್ರಮುಖ ಪದಾಧಿಕಾರಿಗಳೆಲ್ಲರೂ ಸೇರಿ ಇನ್ನೂ ಮುಂದೆ ಮನೆ, ಶಾಲೆ, ಕಛೇರಿಗಳಿಗೆ ಹೋಗಿ ಅವರನ್ನು ಸದಸ್ಯತ್ವ ನೋಂದಣಿ ಮಾಡಿಸಲಾಗುವುದು.

ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲೆಯಲ್ಲಿ ಹೊಸ ರೂಪ ಪಡೆಯುತ್ತಿದೆ. ಸಾಹಿತ್ಯದ ಒಡನಬಾಟ ಇಲ್ಲದವರಿಗೂ ಸಾಹಿತ್ಯದಲ್ಲಿ ಆಸಕ್ತಿ ಮೂಡಿಸುವ ಕಾರ್ಯವನ್ನು ನಿರಂತರವಾಗಿ ಮಾಡುತ್ತಿದೆ. ಆ ಮೂಲಕ ಪರಿಷತ್ತನ್ನು ಜನಸಾಮಾನ್ಯರ ಪರಿಷತ್ತನ್ನಾಗಿಸುವ ನಿಟ್ಟಿನಲ್ಲಿ ಮುನ್ನಡೆಸಲಾಗುತ್ತಿದೆ ಎಂದು ಅವರು ವಿವರಿಸಿದ್ದಾರೆ.

ಜಿಲ್ಲೆಯ ಕನ್ನಡಾಭಿಮಾನಿಗಳು ಶನಿವಾರದಂದು ಚಾಲನೆ ನೀಡಲಾಗುತ್ತಿರುವ ಪರಿಷತ್ತಿನ ಸದಸ್ಯತ್ವ ಅಭಿಯಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಪರಿಷತ್ತಿಗೆ ಇನ್ನಷ್ಟು ಬಲ ತುಂಬಬೇಕೆಂದು ತೇಗಲತಿಪ್ಪಿ ಮನವಿ ಮಾಡಿಕೊಂಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ – ಮೊ. 98803 49025 ಗೆ ಸಂಪರ್ಕಿಸಬಹುದು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here