ಬಿಸಿ ಬಿಸಿ ಸುದ್ದಿ

ಜಗಜೀವನರಾಮ- ಶ್ಯಾಮ ಪ್ರಸಾದ ಮುಖರ್ಜಿ ದೇಶ ಕಂಡ ಮಹಾನ್ ವ್ಯಕ್ತಿಗಳು

ಶಹಾಬಾದ: ಈ ದೇಶದ ಬಡ ವರ್ಗದ ಜನರ ಹಸಿವನ್ನು ನೀಗಿಸುವ ಮೂಲಕ ಈ ದೇಶದಲ್ಲಿ ನಿರಂತರ ಶಾಂತಿ ದೊರಕುವಂತೆ ಹೋರಾಟ ನಡೆಸಿದ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬುಜಗಜೀವನರಾಮ ಹಾಗೂ ದೇಶಕ್ಕಾಗಿಯೇ ತಮ್ಮ ಜೀವನವನ್ನು ಸವೆದ ಶ್ಯಾಮ ಪ್ರಸಾದ ಮುಖರ್ಜಿ ಇವರು ದೇಶ ಕಂಡು ಮಹಾನ್ ನಾಯಕರು ಎಂದು ಬಿಜೆಪಿ ಮುಖಂಡ ಚಂದ್ರಕಾಂತ ಗೊಬ್ಬೂರಕರ್ ಹೇಳಿದರು.

ಅವರು ಗುರುವಾರ ಡಾ. ಶ್ಯಾಮ ಪ್ರಸಾದ ಮುಖರ್ಜಿ ಜಯಂತಿ ಹಾಗೂ ಡಾ.ಬಾಬುಜಗಜೀವನರಾಮ ಅವರ ಪುಣ್ಯ ಸ್ಮರಣೆ ನಿಮಿತ್ತ ಬಿಜೆಪಿ ಕಚೇರಿಯಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

ದೇಶದಲ್ಲಿ ಆಹಾರದ ಕೊರತೆ ಉಂಟಾದ ಸಮಯದಲ್ಲಿ ಕೃಷಿ ಸಚಿವರಾಗಿದ್ದ ಬಾಬು ಜಗಜೀವನರಾಮ ಅವರು ಜಾರಿಗೆ ತಂದ ಯೋಜನೆಗಳು ಹಸಿರು ಕ್ರಾತಿಗೆ ಕಾರಣವಾದವು. ಜಗಜೀವನರಾಮ ಅವರು ತಮ್ಮ ಜೀವನದಲ್ಲಿ ದೇಶದಲ್ಲಿರುವ ಬಡಜನರ ಏಳಿಗೆಗಾಗಿ ನಿರಂತರ ಹೋರಾಟ ನಡೆಸಿದರಲ್ಲದೇ, ಅಸ್ಪøಶ್ಯತೆಯನ್ನು ಹೋಗಲಾಡಿಸಲು ಗಾಂಧೀಜಿ ಜತೆ ಕೈಗೂಡಿಸಿ ಹೋರಾಟ ಮಾಡಿದ ಮಹಾನ್ ವ್ಯಕ್ತಿ. ಅವರ ತತ್ವ ಆದರ್ಶಗಳನ್ನು ಎಲ್ಲರೂ ಮೈಗೂಡಿಕೊಳ್ಳುವಂತಾಗಬೇಕೆಂದು ಹೇಳಿದರು.

ಮುಖಂಡ ನಿಂಗಣ್ಣ ಹುಳಗೋಳಕರ್ ಮಾತನಾಡಿ, ಶ್ಯಾಮ ಪ್ರಸಾದ ಮುಖರ್ಜಿಯವರು ನೀತಿ, ತತ್ವದ ಆಧಾರದ ಮೇಲೆ ನೆಹರೂ ನೇತೃತ್ವದ ಮಂತ್ರಿ ಮಂಡಲಕ್ಕೆ ರಾಜೀನಾಮೆ ನೀಡಿದರು.ಈ ಮೂಲಕ ಮಂತ್ರಿ ಪದವಿ ತ್ಯಾಗ ಮಾಡಿದ ಸ್ವಾತಂತ್ರ್ಯ ಭಾರತದ ಭಾರತದ ಪ್ರಥಮ ರಾಷ್ಟ್ರ ನಾಯಕ ಶ್ಯಾಮ ಪ್ರಸಾದ ಮುಖರ್ಜಿಯವರು ಎಂದು ಹೇಳಿದರು.

ಮುಖಂಡ ಅರುಣ ಪಟ್ಟಣಕರ್ ಹಾಗೂ ಕನಕಪ್ಪ ದಂಡಗುಲಕರ್ ಮಾತನಾಡಿ, ಸಮಾಜದ ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು. ಅವರು ದೇಶದ ಉಪಪ್ರಧಾನಿಗಳಾಗಿದ್ದ ಸದಂರ್ಭದಲ್ಲಿ ಜಾರಿಗೆ ತಂದ ಹಲವಾರು ಜನಪರ ಕಾರ್ಯಕ್ರಮಗಳು ಇಂದಿಗೂ ಮಾದರಿಯಾಗಿವೆ ಎಂದು ಹೇಳಿದರು.

ದುರ್ಗಪ್ಪ ಪವಾರ, ಮನೋಹರ್ ಮೇತ್ರೆ, ನಾರಾಯಣ ಕಂದಕೂರ, ದೇವೆಂದ್ರಪ್ಪ ಯಲಗೋಡಕರ್, ಭೀಮಯ್ಯ ಗುತ್ತೆದಾರ, ಸಂಜಯ ಸೂಡಿ, ಶಿವಶರಣ ಕರಣಗಿ, ನಾಗರಾಜ ಮುದ್ನಾಳ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

emedialine

Recent Posts

ಬೆಂಗಳೂರು: ಸೇವಾದಳ ಯಂಗ್ ಬ್ರಿಗೇಡ್‌ನಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…

11 hours ago

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

22 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

22 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

1 day ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

1 day ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

1 day ago