ಶಹಾಬಾದ: ತಾಲೂಕಿನ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿರುವ ಡಾ.ರಶೀದ್ ಮರ್ಚಂಟ್ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಹಾಗೂ ಮುಖಂಡರಾದ ದೇವೆಂದ್ರಪ್ಪ ಮರತೂರ, ಮಲ್ಲಿಕಾರ್ಜುನ ಪೂಜಾರಿ ಅವರಿಗೂ ಸೂಕ್ತ ಸ್ಥಾನಮಾನ ನೀಡಬೇಕೆಂದು ಕಾಂಗ್ರೆಸ್ ಮುಖಂಡ ಹಾಗೂ ಕುರುಬ ಸಮಾಜದ ತಾಲೂಕಾಧ್ಯಕ್ಷ ಮಲ್ಕಪ್ಪ ಮುದ್ದಾ ಆಗ್ರಹಿಸಿದ್ದಾರೆ.
ಈ ಕುರಿತು ಗುರುವಾರ ಪ್ರವಾಸಿ ಮಂದಿರದಲ್ಲಿ ಆಯೋಜಿಸಲಾದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಡಾ.ರಶೀದ್ ಅವರು ಸುಮಾರು 4 ದಶಕಗಳಿಂದ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾಗಿ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸುಮಾರು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ವೃತ್ತಿಯಿಂದ ವೈದ್ಯರಾಗಿದ್ದು, ಸಮಾಜದಲ್ಲಿ ಉತ್ತಮ ವ್ಯಕ್ತಿತ್ವವನ್ನು ಹೊಂದಿದ್ದಾರೆ.ಅಲ್ಲದೇ ಬಡರೋಗಿಗಳಿಗೆ ಉಚಿತವಾಗಿ ಚಿಕಿತ್ಸೆ ನೀಡುವ ವೈದ್ಯರೆಂದರೆ ಡಾ.ರಶೀದ್. ಈ ಭಾಗದಲ್ಲಿ ಕಾಂಗ್ರೆಸ್ ಭದ್ರಕೋಟೆಯಾಗಿದೆಯೆಂದರೆ ಇವರ ನಿಸ್ವಾರ್ಥ ಸೇವೆಯಿಂದಲೇ.
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಇರುವುದರಿಂದ ಸುಮಾರು ದಶಕಗಳಿಂದ ಪಕ್ಷಕ್ಕಾಗಿ ದುಡಿದ ಡಾ.ರಶೀದ್ ಮರ್ಚಂಟ್ ಅವರನ್ನು ಗುರುತಿಸಿ, ಅವರಿಗೆ ವಿಧಾನ ಪರಿಷತ್ ಸದಸ್ಯರನ್ನಾಗಿ ಆಯ್ಕೆ ಮಾಡಬೇಕು.ಅಲ್ಲದೇ ಕುರುಬ ಸಮಾಜದ ಮಾಡಿದರೆ ಮುಖಂಡರಾದ ದೇವೆಂದ್ರಪ್ಪ ಮರತೂರ, ಮಲ್ಲಿಕಾರ್ಜುನ ಪೂಜಾರಿ ಅವರು ಕಾಂಗ್ರೆಸ್ ಪಕ್ಷಕ್ಕಾಗಿ ಹಗಲಿರುಳು ಶ್ರಮಿಸಿದ್ದಾರೆ.ಅವರಿಗೂ ಸೂಕ್ತ ಸ್ಥಾನಮಾನ ನೀಡಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಕುರುಬ ಸಮಾಜದ ಮರಲಿಂಗ ಕಮರಡಗಿ, ನಿಂಗಣ್ಣ ಪೂಜಾರಿ, ಶಾಂತಪ್ಪ ಹೊನಗುಂಟಿ, ದಶರಥ ಗಿರಣಿ, ನಿಂಗಣ್ಣ ಭಂಕೂರ, ಸುನೀಲ ಪೂಜಾರಿ ಸಿದ್ದಲಿಂಗ ಮರತೂರ ಇತರರು ಇದ್ದರು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…