ಬಿಸಿ ಬಿಸಿ ಸುದ್ದಿ

ಕಲಬುರಗಿ: ಶಿವಮಂದಿರದಲ್ಲಿ ಮಳೆಗಾಗಿ ಶಿವನಿಗೆ ಜಲಾಭಿಷೇಕ

ಕಲಬುರಗಿ: ನಗರ ಸೇರಿದಂತೆ ಜಿಲ್ಲೆಯಾದ್ಯಂತ ಮಳೆ ಸುರಿದು ಸಮೃದ್ಧ ಬೆಳೆ ‌ಬರಲಿ ಎಂದು ಜಯನಗರ ಶಿವಮಂದಿರದಲ್ಲಿ ಜಯನಗರ ಬಡಾವಣೆಯ ಮಹಿಳಾ ಸದಸ್ಯರು ಇಂದು ಶಿವನಿಗೆ ಜಲಾಭಿಷೇಕ ಮೂಲಕ ವಿಶೇಷ ಪೂಜೆ ಸಲ್ಲಿಸಿದರು.

ಪೂಜೆ ನಂತರ ಬುತ್ತಿ ಭೋಜನ ಕೂಟ ಎರ್ಪಡಿಸಿದ್ದು,ಎಲ್ಲರೂ ಸೇರಿ ಭೋಜನ ಮಾಡಿದ್ದು ವಿಶೇಷವಾಗಿತ್ತು.ಅನೇಕ ವರ್ಷದಿಂದ ಶಿವಮಂದಿರದಲ್ಲಿ ಈ ರೀತಿ ಪೂಜೆ ನಡೆಯುತ್ತಿದೆ.ಮಳೆ ಅಭಾವ ಇದ್ದಾಗ ಪ್ರತಿ ಬಾರಿ ಮಹಿಳಾ ಸದಸ್ಯರು ಜಗದೊಡೆಯ ಶಿವನಿಗೆ ಜಲಾಭಿಷೇಕ ಮಾಡಿ ಮಳೆ ಬರಲಿ ಎಂದು ಪ್ರಾರ್ಥನೆ ಮಾಡುತ್ತಾರೆ.ಶಿವನ ನಾಮ ಜಪಿಸುತ್ತಾರೆ.ನಂತರ ಭಜನೆ ಮಾಡುತ್ತಾರೆ.ಹೀಗೆ ಶಿವನ ಸ್ಮರಣೆ ಮಾಡಿದಾಗಲೆಲ್ಲ ಮಳೆ ಆಗಿದ್ದು,ಈ ಬಾರಿಯೂ ಮಳೆ ಬರುವ ಭರವಸೆ ವ್ಯಕ್ತಪಡಿಸಿದ್ದಾರೆ.

ಈ ಸಂದರ್ಭದಲ್ಲಿ ಜಯನಗರ ಶಿವಮಂದಿರ ಅಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ಲಿಂಗರಾಜ ಸಿರಗಾಪೂರ, ಉಪಾಧ್ಯಕ್ಷ ವಿರೇಶ ದಂಡೋತಿ, ಪ್ರಧಾನ ಕಾರ್ಯದರ್ಶಿ ಸೂರ್ಯಕಾಂತ ಕೆ.ಬಿ, ಕಾರ್ಯದರ್ಶಿ ಶಿವಪುತ್ರಪ್ಪ ಮರಡಿ, ಕೋಶಾಧ್ಯಕ್ಷ ಬಸವರಾಜ ಮಾಗಿ, ಸದಸ್ಯರಾದ ಬಸವರಾಜ ಪುರ್ಮಾ, ಅಶೋಕ ಪಾಟೀಲ, ಮಲ್ಲಯ್ಯ ಸ್ವಾಮಿ, ಶಿವಾನಂದ ಹಾಗರಗಿ, ಮಹಿಳಾ ಸದಸ್ಯರಾದ ಅಂಬಕ್ಕಾ ಪಾಟೀಲ, ಅನುರಾಧ ಕುಮಾರಸ್ವಾಮಿ, ಸುರೇಖಾ ಬಾಲಕೊಂದೆ, ವಿಜಯಾ ದಂಡೋತಿ, ಸುಷ್ಮಾ ಮಾಗಿ, ಗೀತಾ ಲಿಂಗರಾಜ, ಅಶ್ವಿನಿ ಪಾಟೀಲ್, ಶಕುಂತಲಾ ಮರಡಿ, ಶೈಲಜಾ ವಾಲಿ, ಪುರ್ಮಾ, ಲತಾ, ತುಪ್ಪದ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

emedialine

Recent Posts

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

5 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

5 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

7 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

7 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

7 hours ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

7 hours ago