ಬಿಸಿ ಬಿಸಿ ಸುದ್ದಿ

ಆಸಕ್ತಿ, ಶೃದ್ಧೆಯಿಂದ ಕಾರ್ಯನಿರ್ವಹಿಸಿದರೆ ಸಾಧನೆ ಸಾಧ್ಯ; ಖ್ಯಾತ ಚಿತ್ರ ಕಲಾವಿದ ಡಾ.ರೆಹಮಾನ ಪಟೇಲ್‍

ಕಲಬುರಗಿ: ಯಾವುದೇ ಕ್ಷೇತ್ರವಾಗಲಿ ವ್ಯಕ್ತಿ ಶೃದ್ಧೆ, ಆಸಕ್ತಿಯಿಂದ ನಿರಂತರವಾಗಿ ಪ್ರಯತ್ನ ಮಾಡಿದರೆ ಆ ಕ್ಷೇತ್ರದಲ್ಲಿ ಉನ್ನತ ಸಾಧನೆ ಮಾಡಲು ಸಾಧ್ಯವಾಗುತ್ತದೆ. ಚಿತ್ರಕಲೆಯು ಪರಿಣಾಮಕಾರಿಯಾದ ಮಾಧ್ಯಮವಾಗಿದ್ದು, ಅದು ನೈಜ ಸ್ಥಿತಿಯನ್ನು ನೀಡುತ್ತದೆ. ಸಮಾಜದಲ್ಲಿರುವ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಮೂಲಕ, ಅವುಗಳಿಗೆ ಪರಿಹಾರವನ್ನು ಸೂಚಿಸುವ ಕಾರ್ಯ ಮಾಡುತ್ತದೆ ಎಂದು ಖ್ಯಾತ ಚಿತ್ರ ಕಲಾವಿದ ಡಾ.ರೆಹಮಾನ ಪಟೇಲ್ ಹೇಳಿದರು.

ನಗರದ ಎಸ್.ಬಿ.ಕಾಲೇಜು ಎದುರುಗಡೆಯಿರುವ ‘ಕೊಹಿನೂರ ಕಂಪ್ಯೂಟರ ತರಬೇತಿ ಸಂಸ್ಥೆ’ಯಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ‘ರವೀಂದ್ರನಾಥ ಟ್ಯಾಗೋರ್ ರಾಷ್ಟ್ರೀಯ ಪ್ರಶಸ್ತಿ’ ಪುರಸ್ಕøತ ಖ್ಯಾತ ಚಿತ್ರ ಕಲಾವಿದ ಡಾ.ರೆಹಮಾನ ಪಟೇಲ್‍ಗೆ ಶುಕ್ರವಾರ ಏರ್ಪಡಿಸಲಾಗಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಗೌರವ ಸತ್ಕಾರ ಸ್ವೀಕರಿಸಿ ಅವರು ಮಾತನಾಡುತ್ತಿದ್ದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅಂತಾರಾಷ್ಟ್ರೀಯ ಖ್ಯಾತ ಚಿತ್ರ ಕಲಾವಿದ ಡಾ.ಸುಬ್ಬಯ್ಯ ಎಂ.ನೀಲಾ, ಪ್ರತಿಯೊಬ್ಬ ವ್ಯಕ್ತಿಯಲ್ಲಿ ಒಂದು ಪ್ರತಿಭೆ ಅಡಗಿರುತ್ತದೆ. ಅದನ್ನು ಗುರ್ತಿಸಿ, ಪ್ರೋತ್ಸಾಹಿಸಿದರೆ ಬೆಳೆಯಲು ಸಾಧ್ಯವಿದೆ. ಇಂದಿನ ಯಾಂತ್ರಿಕೃತ ಬದುಕಿನ ಜಂಜಾಟದಲ್ಲಿ ಕಳೆದುಹೋಗುತ್ತಿರುವ ಸಂಬಂಧ, ಪರಂಪರೆಯನ್ನು ಬೆಸೆಯುವ ಕೆಲಸ ಕಲೆಗಿದೆ. ಕಲೆಗಳು ಮುಂದಿನ ಪೀಳಿಗೆಯಲ್ಲಿ ಸಂಸ್ಕøತಿಯನ್ನು ಪ್ರತಿಬಿಂಬಿಸುತ್ತದೆ. ಅದು ಜಾತಿ, ಧರ್ಮ, ವ್ಯಾಪ್ತಿ, ಪ್ರದೇಶಗಳನ್ನು ಮೀರಿದ್ದಾಗಿದ್ದು, ಮೌನ ಭಾಷೆಯಾಗಿದೆ ಎಂದು ನುಡಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಬಳಗದ ಅಧ್ಯಕ್ಷ, ಚಿಂತಕ ಎಚ್.ಬಿ.ಪಾಟೀಲ, ಡಾ.ರೆಹಮಾನ ಪಟೇಲ್ ಅವರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಚಿತ್ರಕಲೆ, ಸಂಶೋಧನೆಯಲ್ಲಿ ಉನ್ನತ ಸಾಧನೆ ಮಾಡಿದ್ದಾರೆ. ಅವರು ರಚಿಸಿರುವ ಸಾಮಾಜಿಕ-ಸಾಂಸ್ಕøತಿಕ, ಡೆಕ್ಕನ್ ಇತಿಹಾಸ, ಕಲೆ, ವಾಸ್ತುಶಿಲ್ಪ ಸಂಶೋಧನೆಗಳಿಂದ ವ್ಯಾಪಕವಾಗಿ ಪ್ರಸಿದ್ದಿ ಪಡೆದಿರುವುದು, ಸಾಧನೆ ಮಾಡಿರುವುದನ್ನು ಗುರುತಿಸಿ ಭೋಪಾಲ್‍ನ ‘ರಾಷ್ಟ್ರೀಯ ಕಲಾವಿದರ ಸಂಘ’ವು ರಾಷ್ಟ್ರಮಟ್ಟದ ರವೀಂದ್ರನಾಥ ಟ್ಯಾಗೋರ್ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಪ್ರಸಕ್ತ ಸಾಲಿನಲ್ಲಿ ಈ ಪ್ರಶಸ್ತಿ ದೊರೆತಿರುವುದು ದೇಶದ ನಾಲ್ವರಲ್ಲಿ ಡಾ.ಪಟೇಲ್ ಒಬ್ಬರು ಎಂಬುದು ವಿಶೇಷವಾಗಿದೆ. ತನ್ಮೂಲಕ ನಮ್ಮ ಜಿಲ್ಲೆ, ಕಕ ಭಾಗ ಮತ್ತು ನಾಡಿನ ಕೀರ್ತಿಯನ್ನು ರಾಷ್ಟ್ರಮಟ್ಟದಲ್ಲಿ ಪಸರಿಸುವ ಕೆಲಸ ಮಾಡಿರುವುದು ನಮ್ಮೆಲ್ಲರಿಗೆ ಹೆಮ್ಮೆಯ ಸಂಗತಿಯಾಗಿದೆ ಎಂದು ಅಭಿನಂದಿಸಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಡಾ.ಸತೀಶ್ ಟಿ.ಸಣಮನಿ, ಕಾರ್ಯದರ್ಶಿ ಭೀಮಾಶಂಕರ ಎಸ್.ಘತ್ತರಗಿ, ಚಿತ್ರ ಕಲಾವಿದರಾದ ರೇವಣಸಿದ್ದಪ್ಪ ಹೊಟ್ಟಿ, ಸೈಯದ್ ಮುಸ್ತಫಾ, ಕಸಾಪ ಉತ್ತರ ವಲಯದ ಗೌರವ ಅಧ್ಯಕ್ಷ ಶಿವಯೋಗಪ್ಪ ಬಿರಾದಾರ, ನಿವೃತ್ತ ಮುಖ್ಯ ಶಿಕ್ಷಕ ಬಸಯ್ಯಸ್ವಾಮಿ ಹೊದಲೂರ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಪತ್ರಿಕಾ ಕಾರ್ಯದರ್ಶಿ ದೇವೇಂದ್ರಪ್ಪ ಗಣಮುಖಿ, ಸಂಸ್ಥೆಯ ಉಪನ್ಯಾಸಕಿಯರಾದ ಅಶ್ವಿನಿ ಜೆ. ಪಾಟೀಲ, ಅರ್ಚನಾ ಎಂ.ಹೀರಾಪುರ, ಪ್ರಮುಖರಾದ ಆಕಾಶ ಪಾಟೀಲ, ರಮೀಶಾ, ವಿನಯ, ಅರುಣಕುಮಾರ, ಅನುಷಾ, ಮಹಾಲಕ್ಷ್ಮೀ, ಮಹೇಶ್, ವೈಷ್ಣವಿ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.

emedialine

Recent Posts

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

26 mins ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

28 mins ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

33 mins ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

37 mins ago

ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಬೇಡಿ

ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…

38 mins ago

ಸೇಡಂ: `ಅಮ್ಮ ಪ್ರಶಸ್ತಿ’ ಪ್ರದಾನ ಸಮಾರಂಭ ನಾಳೆ

ಸೇಡಂ (ಕಲಬುರಗಿ);  ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…

1 hour ago