ವಾಡಿ: ರಾಜ್ಯ ಬಜೆಟ್‍ನಲ್ಲಿ ಅವೈಜ್ಞಾನಿಕ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‍ಇಪಿ) ಕೈಬಿಟ್ಟು ರಾಜ್ಯಕ್ಕೆ ಪ್ರತ್ಯೇಕ ನೀತಿಯನ್ನು ಜಾರಿಗೊಳಿಸುವುದಾಗಿ ಪ್ರಕಟಿಸಿರುವ ಮುಖ್ಯಮಂತ್ರಿ ಸಿದ್ರಾಮಯ್ಯನವರ ಕ್ರಮವನ್ನು ಆಲ್ ಇಂಡಿಯಾ ಡೆಮಾಕ್ರೇಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ (ಎಐಡಿಎಸ್‍ಒ) ಸ್ವಾಗತಿಸಿದೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಎಐಡಿಎಸ್‍ಒ ನಗರ ಸಮಿತಿ ಕಾರ್ಯದರ್ಶಿ ಗೋವಿಂದ ಯಳವಾರ, ಸರ್ಕಾರ ಸಾರ್ವಜನಿಕ ಶಿಕ್ಷಣ ಸಂಸ್ಥೆಗಳನ್ನು ಬಲಪಡಿಸಲು ಕಟ್ಟಡ ದುರಸ್ತಿ ಸೇರಿದಂತೆ ಇತರ ಸೌಲಭ್ಯಗಳ ಅಭಿವೃದ್ಧಿಗಾಗಿ ಅನುದಾನ ಘೋಷಿಸಿದೆ. ತಜ್ಞರ ಸಮಿತಿ ನೇಮಕ ಮಾಡಿ ಪಠ್ಯಪುಸ್ತಕ ಪರಿಷ್ಕರಣೆ ಮಾಡುವುದಾಗಿ ಮತ್ತು ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ಅನುದಾನ ಹೆಚ್ಚಿಸಿರುವುದು ಅತ್ಯಂತ ಸ್ವಾಗತಾರ್ಹ ಕ್ರಮವಾಗಿದೆ. ಇದು, ಪಠ್ಯಪುಸ್ತಕ ಪರಿಷ್ಕರಣೆ ಹಾಗೂ ಸಾರ್ವಜನಿಕ ಶಿಕ್ಷಣದ ಉಳಿವಿಗಾಗಿ ಎನ್‍ಇಪಿ ವಿರೋಧಿಸಿ ರಾಜ್ಯದಲ್ಲಿ ಬೆಳೆದ ವಿದ್ಯಾರ್ಥಿ ಹಾಗೂ ಜನ ಚಳುವಳಿಗೆ ಸಂದ ಜಯವಾಗಿದೆ ಎಂದು ಪ್ರತಿಕ್ರೀಯಿಸಿದ್ದಾರೆ.
ರಾಜ್ಯದಲ್ಲಿ ರೂಪಿಸಲಾಗುವ ಹೊಸ ಶಿಕ್ಷಣ ನೀತಿಯು ಶಿಕ್ಷಣದ ಖಾಸಗೀಕರಣ, ವ್ಯಾಪಾರೀಕರಣ, ಕೋಮುವಾದೀಕರಣಕ್ಕೆ ಎಡೆಕೊಡದೆ ಪ್ರಜತಾಂತ್ರಿಕವಾಗಿಯೂ ಮತ್ತು ಧರ್ಮನಿರಪೇಕ್ಷವಾಗಿಯೂ ಇರುವುದೆಂಬ ಅಪೇಕ್ಷೆ ಇದೆ. ಇವುಗಳ ಅನುμÁ್ಠನವನ್ನು ಸರ್ಕಾರವು ಏಕಪಕ್ಷಿಯವಾಗಿ ನಡೆಸದೆ ರಾಜ್ಯದ ಶಿಕ್ಷಣ ತಜ್ಞರು, ಪಾಲಕರು ಹಾಗೂ ವಿದ್ಯಾರ್ಥಿ ಸಂಘಟನೆಗಳನ್ನು ಒಳಗೊಂಡ ಪ್ರಜಾತಾಂತ್ರಿಕ ಪ್ರಕ್ರಿಯೆಯ ಮೂಲಕ ನಡೆಸಬೇಕೆಂದು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.
ವಿದ್ಯಾರ್ಥಿಗಳಿಗೆ ಅನುಕೂಲಕರವಾಗಿದ್ದ ಲ್ಯಾಪ್ ಟಾಪ್, ಸೈಕಲ್ ವಿತರಣೆಯಂತಹ ಕಲ್ಯಾಣ ಯೋಜನೆಗಳಿಗೆ ಅನುದಾನ ಘೋಷಣೆ ಆಗಿಲ್ಲ ಮತ್ತು ಹಿಂದಿನ ಸರ್ಕಾರದ ಬಜೆಟ್ಟಿಗಿಂತ ಈ ಬಜೆಟ್ಟಿನಲ್ಲಿ ಶಿಕ್ಷಣಕ್ಕೆ ಶೇ.1 ರಷ್ಟು ಅನುದಾನ ಕಡಿತಗೊಳಿಸಿರುವುದರ ಬಗ್ಗೆ ಮುಂದಿನ ದಿನಗಳಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕು. ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಬೇಕೆಂಬುದು ವಿದ್ಯಾರ್ಥಿ ಸಮುದಾಯದ ಬಹುದಿನಗಳ ಬೇಡಿಕೆಯಾಗಿತ್ತು. ಹಿಂದುಳಿದ ಮತ್ತು ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ಬರುವ ವಿದ್ಯಾರ್ಥಿಗಳ ಸೌಲಭ್ಯಗಳಿಗೂ ಅನುದಾನದ ಕೊರತೆಯಿದೆ. ವಿದ್ಯಾರ್ಥಿಗಳ ಅವಶ್ಯಕತೆಗಳನ್ನು ಪೂರೈಸಲು ಬಜೆಟ್ಟಿನ ಹೊರತಾಗಿಯೂ ಸರ್ಕಾರವು ಅನುದಾನ ನೀಡುವದೆಂಬ ಭರವಸೆ ನಮಗಿದೆ ಎಂದಿದ್ದಾರೆ.