ಕಲಬುರಗಿ: ರಾಜ್ಯಸರ್ಕಾರ ಮಂಡಿಸಿರುವ ಬಜೆಟ್‍ನಲ್ಲಿ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಮಕ್ಕಳಿಗೆ ಮೊಟ್ಟೆ, ಶೆಂಗಾಚಿಕ್ಕಿ, ಬಾಳೆಹಣ್ಣು ವಿತರಣೆ ಸ್ವಾಗತಾರ್ಹ. ಸಾರ್ವಜನಿಕ ಗ್ರಂಥಾಲಯಗಳಿಗೆ ಪುಸ್ತಕ ಖರೀದಿ, ವಿದ್ಯಾರ್ಥಿಗಾಗಿ ತೋಟಗಾರಿಕೆ ಯೋಜನೆ, ಮಕ್ಕಳಲ್ಲಿ ಉಂಟಾಗುವ ಕಲಿಕಾ ನ್ಯೂನ್ಯತೆಯನ್ನು ನಿವಾರಿಸಲು ಕಲಿಕಾ ಬಲವರ್ಧನೆ ಕಾರ್ಯಕ್ರಮ ಉತ್ತಮ ಯೋಜನೆಯಾಗಿದೆ ಎಂದು ಶಿಕ್ಷಣ ತಜ್ಞರು ಹಾಗೂ ಜೇವರ್ಗಿ ಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯ ಉಪನ್ಯಾಸಕ ದೇವಿಂದ್ರಪ್ಪ ವಿಶ್ವಕರ್ಮ ಪ್ರತಿಕ್ರಿಯಿಸಿದ್ದಾರೆ.