ಬೆಂಗಳೂರು: ಖಾಸಗಿ ಶಾಲೆಗಳಿಗಿಂತ ಅಡುಗೋಡಿಯಲ್ಲಿರುವ ಕರ್ನಾಟಕ ಪಬ್ಲಿಕ್ ಸ್ಕೂಲ್ (ಮುನಿಚಿನ್ನಪ್ಪ ಶಾಲೆ) ಸರ್ಕಾರಿ ಶಾಲೆ ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಇತರೆ ಶಾಲೆಗಳಿಗೆ ಮಾದರಿಯಾಗಿದೆ ಎಂದು ಮಾನ್ಯ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರಾದ ಎಸ್.ಮಧು ಬಂಗಾರಪ್ಪ ಅವರು ತಿಳಿಸಿದರು.
ಇಂದು ನಗರದ ಅಡುಗೋಡಿ ಕರ್ನಾಟಕ ಪಬ್ಲಿಕ್ ಸ್ಕೂಲ್ (ಮುನಿಚಿನ್ನಪ್ಪ ಶಾಲೆ)ಆವರಣದಲ್ಲಿ ನಡೆದ ಬಿ.ಟಿಎಂ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 22 ಸರ್ಕಾರಿ ಪ್ರಾಥಮಿಕ, ಪ್ರೌಢ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್, ಸ್ಕೂಲ್ ಬ್ಯಾಗ್ ಮತ್ತು ಸ್ವೆಟರ್ ವಿತರಣಾ ಕಾರ್ಯಕ್ರಮದಲ್ಲಿ ಅವರು ಸಂಕೇತಿಕವಾಗಿ ಐದು ವಿದ್ಯಾರ್ಥಿಗಳಿಗೆ ವಿತರಿಸಿ ಅವರು ಮಾತನಾಡಿದರು.
2000 ಇಸವಿಯಲ್ಲಿ ಈ ಶಾಲೆಯಲ್ಲಿ 190 ವಿದ್ಯಾರ್ಥಿಗಳು ದಾಖಲಾಗಿದ್ದು ಪ್ರಸ್ತುತ ಸುಮಾರು 426 ಜನ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಮಕ್ಕಳಿಗೆ ಪುಸ್ತಕದ ಹೊರೆಯನ್ನು ಕಡಿಮೆ ಮಾಡಿ ಜ್ಞಾನದ ಭಂಡಾರವನ್ನು ಹೊತ್ತೊಯ್ಯವ ಪ್ರಯತ್ನವನ್ನು ಹೆಚ್ಚು ಮಾಡುವುದಾಗಿ ತಿಳಿಸಿದರು. ಸರ್ಕಾರಿ ಶಾಲೆ ಹಾಗೂ ಅನುದಾನಿತ ಶಾಲೆಗಳಲ್ಲಿ 1 ರಿಂದ 10ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ವಾರದಲ್ಲಿ ಎರಡು ದಿನ ಮೊಟ್ಟೆ / ಬಾಳೆ ಹಣ್ಣು, ಚಿಕ್ಕಿ ನೀಡುವ ಪೂರಕ ಪೌಷ್ಟಿಕ ಆಹಾರ ಕುರಿತು ತಿಳಿಸಿದರು.
ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ರವರು ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, 1945 ರಲ್ಲಿ ಕೇವಲ ಮೂರು ಕೊಠಡಿಗಳಿಂದ ಆರಂಭಿಸಲ್ಪಟ್ಟ ಈ ಶಾಲೆಯನ್ನು ದಾನಿಗಳ ನೆರವಿನಿಂದ ನವೀಕರಣಗೊಳಿಸಲಾಗಿದೆ. ಇದೆ ರೀತಿ ಹತ್ತಾರು ಶಾಲೆಗಳು ನವೀಕರಣಗೊಂಡಿವೆ ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಬೈಲಾಂಜನಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಿಕ್ಷಕರು, ಎಸ್.ಡಿ.ಎಂ.ಸಿ ಸೇರಿದಂತೆ ಶಾಲಾ – ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…