ಕಲಬುರಗಿ: ಕಲ್ಯಾಣ ಕರ್ನಾಟಕದ ಅತ್ಯಂತ ಹಳೆಯ ಮಹಾವಿದ್ಯಾಲವೆಂದು ಮನೆ ಮಾತಾಗಿರುವ ಪಿ.ಡಿ.ಎ. ತಾಂತ್ರಿಕ ಮಹಾವಿದ್ಯಾಲಯವು ಉತ್ತಮ ತಾಂತ್ರಿಕ ಶಿಕ್ಷಣ ನೀಡುತ್ತಿದ್ದು, ಮುಂಬರುವ ದಿನಗಳಲ್ಲಿ ಮೊದಲ ವರ್ಷದ ವಿದ್ಯಾರ್ಥಿಗಳಿಗಾಗಿ ನಿರ್ಮಾಣ ವಾಗುತ್ತಿರುವ ಕಟ್ಟಡವು ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಲೆಂದು ಸಣ್ಣ ಕೈಗಾರಿಕಾ ಮತ್ತು ಸಾರ್ವಜನಿಕ ಉದ್ಯಮ ವಲಯದ ಸಚಿವ ಹಾಗೂ ಮಹಾವಿದ್ಯಾಲಯದ ಹಳೆಯ ವಿದ್ಯಾರ್ಥಿಗಳಾದ ಶರಣಬಸಪ್ಪ ದರ್ಶನಾಪುರ ತಿಳಿಸಿದರು.
ನಗರದ ಪಿ.ಡಿ.ಎ. ತಾಂತ್ರಿಕ ಮಹಾವಿದ್ಯಾಲಯದಲ್ಲಿ ಏಳು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಮೊದಲ ವರುಷದ ವಿದ್ಯಾರ್ಥಿಗಳ ಕಟ್ಟಡದ ಅಡಿಗಲ್ಲು ಹಾಗೂ ಶಂಕು ಸ್ಥಾಪನೆಯನ್ನು ನೆರವೇರಿಸಿ ಮಾತನಾಡಿದರು.
ಇದೇ ಸಮಯದಲ್ಲಿ ತ್ಯಾಜ್ಯ ಸಾಮಗ್ರಿಗಳನ್ನು ಉಪಯೋಗಿಸಿ ನಿರ್ಮಾಣ ಮಾಡಿರುವ “ರೋಬೋಟ್” – ಸ್ಕ್ರ್ಯಾಪ್ ಆರ್ಟ ರೋಬೋಟನ್ನು ಉದ್ಘಾಟಿಸಿ ತ್ಯಾಜ್ಯ ವಸ್ತುಗಳ ಉತ್ತಮ ನಿರ್ವಹಣೆಗೆ ತಮ್ಮ ಮೆಚ್ಚುಗೆನ್ನು ವ್ಯಕ್ತಪಡಿಸಿದರು. ತ್ಯಾಜ್ಯ ವಸ್ತುಗಳಿಂದ ರೋಬೋಟ್ ನಿರ್ಮಾಣ ಮಾಡಿದ ಚಿತ್ತಾಪೂರ ಮೂಲದ ಸಂಜಯವರನ್ನು ಕೂಡ ಸನ್ಮಾನಿಸಲಾಯಿತು.
ಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ಡಾ. ಭೀಮಾಶಂಕರ ಬಿಲಗುಂದಿ ಮಾತನಾಇ, ಕಳೆದ ಐದು ವರುಷಗಳಲ್ಲಿ ಪಿ,ಡಿ.ಎ, ತಾಂತ್ರಿಕ ಮಹಾವಿದ್ಯಾಲಯವು ಉತ್ತಮ ರೀತಿಯ ಪ್ರಗತಿಯನ್ನು ತೋರಿದೆ. ಮಹಾವಿದ್ಯಾಲಯದಲ್ಲಿ ಚಾಲನೆಯಲ್ಲಿರುವ ಸೆಂಟರ್ ಆಫ್ ಎಕ್ಸಲೆನ್ಸ್ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು ಅದರಿಂದ ವಿದ್ಯಾರ್ಥಿಗಳಿಗೆ ಉತ್ತಮ ಉದ್ಯೋಗಾವಕಾಶ ದೊರೆತಿದೆ ಎಂದು ತಿಳಿಸಿದರು.
ಪಿ.ಡಿ.ಎ. ತಾಂತ್ರಿಕ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಎಸ್. ಆರ್, ಮೀಸೆ ಸ್ವಾಗತಿಸಿದರು, ಪ್ರೊ. ರವೀಂದ್ರ ಎಮ್. ಲಠ್ಠೆ ವಂದಿಸಿದರು ಅಕ್ಷಯ ಆಸ್ಪಳ್ಳಿ ನಿರೂಪಿಸಿದರು. ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಡಾ. ಶರಣಬಸಪ್ಪ ಹರವಾಳ, ಕಾರ್ಯದರ್ಶಿ£ ಡಾ. ಜಗನ್ನಾಥ ಬಿಜಾಪೂರ, ಜಂಟಿ ಕಾಯದರ್ಶಿ ಡಾ. ಮಹಾದೇವಪ್ಪ ರಾಂಪೂರೆ, ಆಡಳಿತ ಮಂಡಳಿ ಸದಸ್ಯರಾದ ಬಸವರಾಜ ಖಂಡೆರಾವ, ಡಾ. ಎಸ್. ಬಿ. ಕಾಮರೆಡ್ಡಿ, ವಿನಯ ಪಾಟೀಲ, ಡಾ. ಅನೀಲ ಪಟ್ಟಣ, ಸಾಯಿನಾಥ ಪಾಟೀಲ, ಡಾ, ನಾಗೇಂದ್ರ ಮಂಠಾಳೆ, ಅರುಣ ಕುಮಾರ ಮಾಟೀಲ ಹಾಗೂ ಗಿರಿಜಾ ಶಂಕರ ಇದ್ದರು.
ಮಹಾವಿದ್ಯಾಲದ ಆಡಳಿತ ವಲಯದ ಉಪಪ್ರಾಚಾರ್ಯರಾದ ಡಾ. ಕಲ್ಪನಾ ವಾಂಜರಖೇಡ, ಡೀನರು, ವಿವಿಧ ವಿಭಾಗಗಳ ಮುಖ್ಯಸ್ಥರು ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂಧಿಗಳು ಉಪಸ್ಥಿತರಿದ್ದರು.
ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಇತರ ಮಹಾವಿದ್ಯಾಲಯದ ಪ್ರಾಚಾರ್ಯರು, ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಕೂಡ ಉಪಸ್ಥಿತರಿದ್ದರು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…