ಕಲಬುರಗಿ ನಗರದ ಜಿಮ್ಸ್ ಆಸ್ಪತ್ರೆ ಆವರಣದಲ್ಲಿ ಪ್ರತ್ಯೇಕ ಕ್ರಿಟಿಕಲ್ ಕೇರ್ ಸೆಂಟರ್ ಸಹ ಆರಂಭಿಸಲಾಗುತ್ತಿದೆ. ಸರ್ಕಾರದ ಗ್ಯಾರಂಟಿಗಳಲ್ಲೊಂದಾದ ಯುವನಿಧಿ ಯೋಜನೆಯ 2022-23ನೇ ಸಾಲಿನ ನಾಲ್ಕುವರೆ ಲಕ್ಷ ಫಲಾನುಭವಿಗಳನ್ನು ಗುರುತಿಸಲಾಗಿದ್ದು, ಬರುವವ ದಿನಗಳಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು. -ಡಾ. ಶೃಣಪ್ರಕಾಶ ಪಾಟೀಲ, ಸಚಿವರು.
ಕಲಬುರಗಿ: ಮೊದಲು ಕೆಲಸ ಮಾಡಿ ತೋರಿಸಿದ ಬಳಿಕ ಮಾತನಾಡುವ ಜಾಯಮಾನ ನನ್ನದಾಗಿದ್ದು, ನನ್ನ ರಾಜಕೀಯ ಮಾರ್ಗದರ್ಶಕ ಮಲ್ಲಿಕಾರ್ಜುನ ಖರ್ಗೆಯವರು ಇಂಥದ್ದೊಂದು ಕಾರ್ಯಶೈಲಿ ಕಲಿಸಿಕೊಟ್ಟಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ ಅಭಿವೃದ್ಧಿ ಖಾತೆ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಹೇಳಿದರು.
ಯಾವುದೇ ಕೆಲಸವನ್ನು ಮಾಡಿದ ನಂತರ ಮಾತನಾಡಿದರೆ ಮಾತ್ರ ನಮಗೆ ಗೌರವ, ಬೆಲೆ ಬರುತ್ತದೆ ಹೊರತು; ಕೇವಲ ಮಾತನಾಡಿ ಕೆಲಸ ಮಾಡದೆ ಹೋದರೆ ಏನೂ ಪ್ರಯೋಜನವಿಲ್ಲ ಎಂದು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಹೇಳಿದರು.
ಕಲಬುರಗಿ, ಮೈಸೂರು ಮತ್ತು ಬೆಳಗಾವಿ ನಗರಕ್ಕೆ ಈ ಬಾರಿಯ ನಜೆಟ್‍ನಲ್ಲಿ ಸೂಪರ್ ಸ್ಪೆμÁಲಿಟಿ ಆಸ್ಪತ್ರೆ ಮಂಜೂರಾಗಿದೆ. ಇದಕ್ಕಾಗಿ 155 ಕೋಟಿ ರೂ. ಮೀಸಲಿಡಲಾಗಿದೆ. ಈ ಪೈಕಿ ಕಲಬುರಗಿಯ ಸೂಪರ್ ಸ್ಪೆμÁಲಿಟಿ ಆಸ್ಪತ್ರೆಗೆ ರೂ.80 ಕೋಟಿ ದೊರೆಯಲಿದೆ. ಟ್ರಾಮಾ ಸೆಂಟರ್, ನರರೋಗ, ಪ್ಲಾಸ್ಟಿಕ್ ಸರ್ಜರಿ, ಗ್ಯಾಸ್ಟ್ರೋ ಎಂಟರಿಟೀಸ್, ಮಕ್ಕಳ ಚಿಕಿತ್ಸಾ ವಿಭಾಗ ಸೇರಿದಂತೆ ಎಂಟು ವಿಭಾಗಗಳು ಈ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸಲಿದ್ದು, ಮುಂದಿನ ಎಂಟು ತಿಂಗಳಲ್ಲಿ ಈ ಆಸ್ಪತ್ರೆ ಕಾರ್ಯಾರಂಭ ಮಾಡಲಿದೆ ಎಂದರು.
ಕಲಬುರಗಿ ನಗರದಲ್ಲಿ ಈ ಹಿಂದೆ 2017-18ರಲ್ಲಿ ತಾವು ಶಂಕುಸ್ಥಾಪನೆ ನೆರವೇರಿಸಿದ ಟ್ರಾಮಾ ಸೆಂಟರ್ ಮುಂದಿನ ಮೂರು ತಿಂಗಳಲ್ಲಿ ಕಾರ್ಯಾರಂಭ ಮಾಡಲಿದೆ. ಈ ಬಾರಿಯ ಬಜೆಟ್‍ನಲ್ಲಿ ರೂ.30 ಕೋಟಿ ಮಂಜೂರಾಗಿದೆ. ಇದೇ ವೇಳೆ ಕಲಬುರಗಿ ಜಿಮ್ಸ್ ಆವರಣದಲ್ಲಿಯೇ ಪ್ರತ್ಯೇಕ ಸುಟ್ಟ ಗಾಯಗಳ ಚಿಕಿತ್ಸಾ ವಿಭಾಗ (ಬನ್ರ್ಸ್ ವಾರ್ಡ್) ಆರಂಭಿಸಲಾಗುತ್ತಿದ್ದು, ಇದರಲ್ಲಿ ಪ್ರತ್ಯೇಕ ಐಸಿಯು ವಾರ್ಡ್ ಸಹ ಇರಲಿದೆ ಎಂದು ಮಾಹಿತಿ ನೀಡಿದರು.
ಇದೆಲ್ಲದರ ಜೊತೆಗೆ, ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಕಲಬುರಗಿ ನಗರದಲ್ಲಿ ಅತ್ಯಾಧುನಿಕ ಕೌಶಲ ಪ್ರಯೋಗಾಲಯ ಮತ್ತು ಸಂಶೋಧನಾ ಕೇಂದ್ರ ಆರಂಭಿಸಲಾಗುತ್ತಿದ್ದು, ಈ ಕೇಂದ್ರಕ್ಕೆ ಪ್ರತ್ಯೇಕವಾಗಿ ರೂ.30 ಕೋಟಿ ಬರಲಿದೆ ಎಂದು ತಿಳಿಸಿದರು.
ಈ ಹಿಂದೆ ತಾವು ಸಚಿವರಾಗಿದ್ದ ಅವಧಿಯಲ್ಲಿ ಮಂಜೂರು ಮಾಡಲಾಗಿದ್ದ 200 ಹಾಸಿಗೆ ಸಾಮಥ್ರ್ಯದ ತಾಯಿ-ಮಕ್ಕಳ ಆಸ್ಪತ್ರೆ ಇಷ್ಟರಲ್ಲೇ ಕಾರ್ಯಾರಂಭ ಮಾಡಲಿದೆ. ಈ ಆಸ್ಪತ್ರೆಗೆ ಮುಖ್ಯಮಂತ್ರಿಗಳು ಮುಂಗಡ ಪತ್ರದಲ್ಲಿ ರೂ.70 ಕೋಟಿ ಮೀಸಲಿಟ್ಟಿದ್ದಾರೆ ಎಂದು ಅವರು ನುಡಿದರು.
ಕಲಬುರಗಿ ನಗರದಲ್ಲಿ ನಿಮ್ಹಾನ್ಸ್ ನೆರವಿನೊಂದಿಗೆ ಪಾಶ್ರ್ವವಾಯು ಪೀಡಿತರಿಗೆ ಆನ್ ಲೈನ್ ಮೂಲಕ ಚಿಕಿತ್ಸೆ ಕೊಡಿಸುವ ವ್ಯವಸ್ಥೆ ಸಹ ಮಾಡಲಾಗುತ್ತಿದೆ. ಮತ್ತೊಂದೆಡೆ, ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ ಸುವರ್ಣ ಮಹೋತ್ಸವ ಆಚರಿಸಿಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಕಲಬುರಗಿಯ ಕಿದ್ವಾಯಿ ಕೇಂದ್ರ ಮೇಲ್ದರ್ಜೆಗೇರಿಸಲು ರೂ.10 ಕೋಟಿ ಬಿಡುಗಡೆ ಆಗಲಿದೆ ಎಂದರು. ಶಾಸಕರಾದ ಎಂ.ವೈ.ಪಾಟೀಲ್, ಅಲ್ಲಮಪ್ರಭು ಪಾಟೀಲ್, ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ್, ಮಹಾಂತಪ್ಪ ಸಂಗಾವಿ, ಡಾ.ಕಿರಣ ದೇಶಮುಖ, ಲಿಂಗರಾಜ ಕಣ್ಣಿ, ಲಿಂಗರಾಜ ತಾರ್ ಫೈಲ್, ಕಾಂಗ್ರೆಸ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಲತಾ ರವಿ ರಾಠೋಡ್, ಮಹಾಂತೇಶ್ ಕವಲಗಿ ಸೇರಿದಂತೆ ಇನ್ನಿತರರು ಇದ್ದರು.