“ಅರಿವು ಶೈಕ್ಷಣಿಕ ಸಾಲ” ಯೋಜನೆ: ಜುಲೈ 15 ರವರೆಗೆ ಅರ್ಜಿ ಸಲ್ಲಿಕೆ ವಿಸ್ತರಣೆ

0
114

ಕಲಬುರಗಿ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ೨೦೨೩-೨೪ನೇ ಸಾಲಿಗೆ “ಅರಿವು ಶೈಕ್ಷಣಿಕ ಸಾಲ” ಯೋಜನೆಯಡಿ ವಿದ್ಯಾಭ್ಯಾಸ ಸಾಲ ಪಡೆಯಲು ಮತೀಯ ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್ಖರು, ಬೌದ್ಧ, ಪಾರ್ಸಿ ಹಾಗೂ ಆಂಗ್ಲೋ ಇಂಡಿಯನ್ ಜನಾಂಗಕ್ಕೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು ೨೦೨೩ರ ಜುಲೈ ೧೫ ರವರೆಗೆ ವಿಸ್ತರಿಸಲಾಗಿದೆ ಎಂದು ಕಲಬುರಗಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಸಿ.ಇ.ಟಿ./ ನೀಟ್ ಪರೀಕ್ಷೆಗೆ ಆಯ್ಕೆಯಾದ ವಿವಿಧ ವೃತ್ತಿಪರ ಕೋರ್ಸ್ಗಳಾದ ವೈದ್ಯಕೀಯ (ಎಮ್.ಬಿ.ಬಿ.ಎಸ್.) ಹಾಗೂ ಬಿ.ಡಿ.ಎಸ್., ಬಿ.ಇ., ಬಿ-ಟೆಕ್, ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್ ಹಾಗೂ ಆಯುಶ್‌ದಂತಹ ಪದವಿ ಕೋರ್ಸ್ಗಳಿಗೆ ಆಯ್ಕೆಯಾದ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ “ಅರಿವು ಶೈಕ್ಷಣಿಕ ಸಾಲ ಯೋಜನೆ ”ಯಡಿ ವಿದ್ಯಾಭ್ಯಾಸ ಸಾಲ ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ.

Contact Your\'s Advertisement; 9902492681

ಅರ್ಹ ಅಭ್ಯರ್ಥಿಗಳು ನಿಗಮದ http//kmdconline.karnataka.gov.in ವೆಬ್‌ಸೈಟ್‌ದಲ್ಲಿ ಆನ್‌ಲೈನ್ ಮೂಲಕ ಮೇಲ್ಕಂಡ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬೇಕು. ನಂತರ ಸದರಿ ಅರ್ಜಿಯ ಜೊತೆಗೆ ಆನ್‌ಲೈನ್‌ದಲ್ಲಿ ನೋಂದಾಯಿಸಿರುವ ಎಲ್ಲಾ ದಾಖಲಾತಿಗಳನ್ನು ಲಗತ್ತಿಸಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಕಲಬುರಗಿ ಜಿಲ್ಲಾ ಕಚೇರಿಗೆ ೨೦೨೩ರ ಜುಲೈ ೨೦ ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ), ಎಸ್.ಆರ್. ರೆಸಿಡೆನ್ಸಿ, ಪ್ಲಾಟ್ ನಂ: ೧೮೮೧, ಮೊದಲನೆ ಮಹಡಿ, ಡಾ. ಎಲ್.ಎಸ್. ರಾಠಿ ಆಸ್ಪತ್ರೆ ಎದುರುಗಡೆ, ಹಳೆ ಜೇವರ್ಗಿ ರಸ್ತೆ, ಕಲಬುರಗಿ-೫೮೫೧೦೨ ವಿಳಾಸವನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ: 08472-232425 ಗೆ ಸಂಪರ್ಕಿಸಲು ಕೋರಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here