ಸುರಪುರ: ಪಾಲಿಟೆಕ್ನಿಕ್ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಇಂಡಕ್ಷನ್ ಪ್ರೋಗ್ರಾಂ

0
7

ಸುರಪುರ: ನಗರದ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರಥಮ ವರ್ಷದ ಡಿಪ್ಲೋಮಾ ವಿದ್ಯಾರ್ಥಿಗಳಿಗಾಗಿ ಇಂಡಕ್ಷನ್ ಪ್ರೋಗ್ರಾಂ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮವನ್ನು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ತಿಪ್ಪಾರಡ್ಡಿ ಮಾಲಿ ಪಾಟೀಲ್ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ತಾಂತ್ರಿಕ ಶಿಕ್ಷಣದ ಮಹತ್ವ ಮತ್ತು ಉಪಯೋಗದ ಬಗ್ಗೆ ವಿವರಿಸಿ,ಇಂದು ಯುವಕರಿಗೆ ನೀತಿ ಶಿಕ್ಷಣದ ಜೊತೆಗೆ ತಾಂತ್ರಿಕ ಶಿಕ್ಷಣ ತುಂಬಾ ಅಗತ್ಯವಾಗಿದೆ.ಇಂದು ನಮ್ಮ ದೇಶದ ವಿದ್ಯಾರ್ಥಿಗಳು ವಿವಿಧ ದೇಶಗಳಲ್ಲಿ ದೊಡ್ಡ ದೊಡ್ಡ ಹುದ್ದೆಗಳಲ್ಲಿದ್ದಾರೆ.ಅದಕ್ಕೆ ನಮ್ಮ ದೇಶದಲ್ಲಿಯ ತಾಂತ್ರಿಕ ಶಿಕ್ಷಣವೇ ಮುಖ್ಯವಾಗಿದೆ.ಅಂತಹ ಶಿಕ್ಷಣ ಇಂದು ನಮ್ಮ ಸುರಪುರ ಕಾಲೇಜಿನಲ್ಲಿಯೇ ಸಿಗುತ್ತಿರುವುದು ತುಂಬಾ ಸಂತೋಷದ ಸಂಗತಿಯಾಗಿದೆ.ಪ್ರಥಮ ವರ್ಷದ ಡಿಪ್ಲೋಮಾ ಕೋರ್ಸ್‍ಗೆ ಸೇರಿಕೊಂಡಿರುವ ಎಲ್ಲಾ ವಿದ್ಯಾರ್ಥಿಗಳು ಉತ್ತಮವಾಗಿ ಅಭ್ಯಾಸ ಮಾಡಿ ಜೀವನದಲ್ಲಿ ಉನ್ನತ ಹುದ್ದೆಯ ಜೊತೆಗೆ ದೊಡ್ಡ ಮಟ್ಟದ ಸಾಧನೆ ಮಾಡುವಂತೆ ಶುಭ ಹಾರೈಸಿದರು.

Contact Your\'s Advertisement; 9902492681

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಶ್ರೀಕಾಂತ ಜಿ.ಕೆ ಮಾತನಾಡಿ,ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಎಲ್ಲಾ ವಿಭಾಗಗಳ ಪಠ್ಯ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಸಿವಿಲ್ ವಿಭಾಗದ ಮುಖ್ಯಸ್ಥ ರಾಮನಗೌಡ ಪಾಟೀಲ್,ವಿಜ್ಞಾನ ವಿಭಾಗದ ಮುಖ್ಯಸ್ಥ ಸಿದ್ಧರಾಮ ಪಾಟೀಲ್,ಯಾಂತ್ರಿಕ ವಿಭಾಗದ ಮುಖ್ಯಸ್ಥರಾದ ಶಾಮಲಾ ಯಾದವ್,ಇಪಿಸಿಇ ವಿಭಾಗದ ಮುಖ್ಯಸ್ಥ ಶ್ರೀಶೈಲ ಹಿರೇಮಠ,ಉಪನ್ಯಾಸಕರಾದ ಶಿವರಾಜ ಹಾಗೂ ಅತಿಥಿ ಉಪನ್ಯಾಸಕರು,ಬೋಧಕ ಬೋಧಕೇತರ ಸಿಬ್ಬಂದಿಗಳು ಭಾಗವಹಿಸಿದ್ದರು. ರಾಷ್ಟ್ರೀಯ ಸೇವಾ ಯೋಜನೆಯ ಘಟಕಾಧಿಕಾರಿ ರಾಮನಗೌಡ ಕಾರ್ಯಕ್ರಮಕ್ಕೆ ಸ್ವಾಗತಿಸಿ ನಿರೂಪಿಸಿ ವಂದಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here