ಶಹಾಬಾದ: ನಗರದಲ್ಲಿ ಸುರಿದ ಮಳೆಯಿಂದ ಅವಾಂತರ

0
33

ಶಹಾಬಾದ: ನಗರದಲ್ಲಿ ಶನಿವಾರ ಮಧ್ಯಾಹ್ನ ಸುರಿದ ಭಾರಿ ಮಳೆಯಿಂದ ಶಾಲಾ-ಕಾಲೇಜಿನ ಆವರಣಗಳು ಜಲಾವೃತ, ಬಾಲಕರ ವಸತಿ ನಿಲಯದಲ್ಲಿ ನುಗ್ಗಿದ ನೀರು, ರಸ್ತೆಗಳಲ್ಲಿ ಅಪಾರ ಪ್ರಮಾಣದ ನೀರು ಸಂಗ್ರಹ, ತಗ್ಗುಗಳಲ್ಲಿ ನೀರು ತುಂಬಿಕೊಂಡು ಸಾರ್ವಜನಿಕರು ಸಂಚಾರಕ್ಕೆ ತೊಂದರೆ ಉಂಟಾಯಿತು.

ನಗರದ ಶಾಲಾ-ಕಾಲೇಜಿನ ಆವರಣದಲ್ಲಿ ಸಾಕಷ್ಟು ಪ್ರಮಾಣದಲ್ಲಿ ನೀರು ಜಲಾವೃಗೊಂಡು ಶಾಲಾ ಮಕ್ಕಳಿಗೆ ಎಲ್ಲಿಲ್ಲದ ತೊಂದರೆಯಾಯಿತು.ಅಲ್ಲದೇ ನಗರದ ನೂತನ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ನೀರು ನುಗಿದ್ದರಿಂದ ತೊಂದರೆ ಅನುಭವಿಸುವಂತಾಯಿತು.

Contact Your\'s Advertisement; 9902492681

ಕಳೆದ ಎರಡ್ಮೂರು ದಿನಗಳಿಂದ ಜಿಟಿಜಿಟಿ ಮಳೆ ಸುರಿಯುತ್ತಿದ್ದರೂ, ನಡುವೆ ಮಳೆಗೆ ಬಿಡುವು ಇರುತ್ತಿತ್ತು. ಬುಧವಾರ ರಾತ್ರಿಯಿಂದ ಗುರುವಾರ ರಾತ್ರಿಯವರೆಗೆ ಎಡೆಬಿಡದೆ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಳ್ಳುವಂತಾಗಿದ್ದು, ರಸ್ತೆಗಳು ಸಂಪೂರ್ಣ ಕೆಸರುಮಯವಾಗಿ ಸಂಚಾರಕ್ಕೆ ಜನರು ತಾಪತ್ರಯ ಪಡುವಂತಾಗಿದೆ.ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು. ಆದರೆ ಮಕ್ಕಳು ಎಂದಿನಂತೆ ಬೇಗನೆ ಶಾಲೆಗೆ ಹೋಗಿದ್ದರಿಂದ ಸುದ್ದಿ ತಿಳಿದ ನಂತರ ಮನೆಗೆ ವಾಪಸ್ಸಾದರು.

ಮಣ್ಣಿನ ರಸ್ತೆಗಳು ಕೆಸರು ಗದ್ದೆಯಂತಾಗಿದ್ದು, ನಗರದ ಮುಖ್ಯ ರಸ್ತೆಗಳಲ್ಲಿನ ಚರಂಡಿಗಳು ತುಂಬಿ ರಸ್ತೆಗೆ ನೀರು ಹರಿಯುತ್ತಿರುವುದರಿಂದ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ. ವ್ಯಾಪಾರಸ್ಥರು ಮಳೆಯಿಂದಾಗಿ ಜನರು ಬಾರದೆ ವಹಿವಾಟು ಕುಂಠಿತಗೊಂಡು ಸಂಕಷ್ಟ ಎದುರಿಸುವಂತಾಗಿದೆ.

ಗ್ರಾಮಾಂತರದ ಪ್ರದೇಶದಲ್ಲಿನ ಮಣ್ಣಿನ ಮನೆಗಳಲ್ಲಿನ ಜನರಿಗೆ ನಿರಂತರ ಮಳೆಯಿಂದ ಗೋಡೆಗಳು ಬೀಳುವ ಆತಂಕ ಎದುರಾಗಿದ್ದರೆ, ತಗ್ಗು ಪ್ರದೇಶದಲ್ಲಿನ ಮನೆಗಳಿಗೆ ನೀರು ನುಗ್ಗಿ ಜನರು ರಾತ್ರಿಯಿಡಿ ಜಾಗರಣೆ ಮಾಡುವಂತಾಗಿದೆ. ಜತೆಗೆ ನಿರಂತರ ವಿದ್ಯುತ್ ಕಡಿತದಿಂದ ಜನರು ಸಮಸ್ಯೆ ಎದುರಿಸುವಂತಾಗಿದೆ.

ರಸ್ತೆಯ ಮೇಲೆ ನೀರು: ನಗರದ ಮುಖ್ಯ ರಸ್ತೆಯಲ್ಲಿ ಅವೈಜ್ಞಾನಿಕ ಚರಂಡಿ ಕಾಮಗಾರಿ ಮಾಡಿರುವುದರಿಂದ ಮಳೆ ಬಂದಾಗಲೊಮ್ಮೆ ನೀರು ರಸ್ತೆಯ ಮೇಲೆ ಸಂಗ್ರಹವಾಗಿ ಸಾರ್ವಜನಿಕರ ಸಂಚಾರಕ್ಕೆ ತೊಂದರೆ ಉಂಟು ಮಾಡಿತು.ನಗರದ ಬಸವೇಶ್ವರ ವೃತ್ತದಿಂದ ಶಾಸ್ತ್ರಿ ವೃತ್ತದವರೆಗೆ ಸಾಕಷ್ಟು ಪ್ರಮಾಣದಲ್ಲಿ ರಸ್ತೆಯ ಮೇಲೆಯೇ ನೀರು ನೀತಿದ್ದರಿಂದ ಇಲ್ಲಿನ ಮುಖ್ಯ ರಸ್ತೆ ಹಳ್ಳವಾಗಿ ಮಾರ್ಪಟ್ಟಿತ್ತು.

ಸಾರ್ವಜನಿಕರು ನಗರಸಭೆಯ ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿರುವುದು ಕಂಡು ಬಂದಿತು.ಚರಂಡಿಗಳು ತುಂಬಿಕೊಂಡು ರಸ್ತೆಯ ಮೇಲೆ ಪಾಲಾಸ್ಟಿಕ,ಕಸ, ಕೊಳಕು ನೀರು ರಸ್ತೆಯ ತುಂಬೆಲ್ಲಾ ಹರಿಯಿತು. ಅಲ್ಲದೇ ಗೋಳಾ(ಕೆ) ಹೋಗುವ ರೇಲ್ವೆ ಸೇತುವೆ ಬಳಿ ¸ ನೀರು ಸಂಗ್ರಹವಾಗಿದ್ದರಿಂದ ಸಂಚಾರಕ್ಕೆ ತೊಂದರೆಯಯಿತು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here