22ರಂದು BJP ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ:  ತೆಲ್ಕೂರ

ಕಲಬುರಗಿ: ರಾಜ್ಯದ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿಯೂ ಸೇರಿದಂತೆ ವೈಫಲ್ಯಗಳನ್ನು ಖಂಡಿಸಿ ಜುಲೈ 22ರಂದು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ರಾಜಕುಮಾರ ಪಾಟೀಲ್ ತೇಲ್ಕೂರ, ಬಿಜೆಪಿ ರಾಜ್ಯ ವಕ್ತಾರರು ಅವರು ತಿಳಿಸಿದ್ದಾರೆ.

ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ತೀವ್ರವಾಗಿ ಕುಸಿದಿದೆ. ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ 48 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 12 ಕೊಲೆಗಳು ನಡೆದಿವೆ. ವಿದ್ಯುತ್ ಸೇರಿದಂತೆ ಜೀವನಾವಶ್ಯಕ ಬೆಲೆಗಳು ತೀವ್ರವಾಗಿ ಹೆಚ್ಚಾಗಿದ್ದು, ಜನರು ಜೀವನ ಮಾಡುವುದೇ ದುಸ್ತರವಾಗಿದೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯ ಸರಕಾರದ ಬಜೆಟ್ ಅಲ್ಪಸಂಖ್ಯಾತರ ಪರ ಮಾತ್ರವಲ್ಲ; ಹಿಂದೂಗಳ ವಿರೋಧಿ, ರೈತ ವಿರೋಧಿ, ನೀರಾವರಿ ವಿರೋಧಿ ಮತ್ತು ಶಿಕ್ಷಣ ವಿರೋಧಿಯಾಗಿದೆ. ಕೇಂದ್ರ ಸರಕಾರವನ್ನು ತೆಗಳುವ ಬಜೆಟ್ ಇದಾಗಿದೆ ಎಂದಿದ್ದಾರೆ.

ರಾಜ್ಯದಲ್ಲಿ ಭಯೋತ್ಪಾದನಾ ಚಟುವಟಿಕೆಗಳು ಹೆಚ್ಚಾಗುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಭಯೋತ್ಪಾದನಾ ಚಟುವಟಿಕೆಗಳು ಅಂತರರಾಷ್ಟ್ರೀಯ ವ್ಯಾಪ್ತಿಯನ್ನು ಹೊಂದಿರುವ ಸಾಧ್ಯತೆ ಇದ್ದು, ಈ ಪ್ರಕರಣವನ್ನು ತನಿಖೆಗಾಗಿ ಎನ್‍ಐಎಗೆ ಹಸ್ತಾಂತರ ಮಾಡುವಂತೆ ಆಗ್ರಹಿಸಿದ್ದಾರೆ.

ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸುವಲ್ಲಿ ವೈಫಲ್ಯವನ್ನು ಖಂಡಿಸಿ ಪ್ರತಿಭಟನೆ ನಡೆಯಲಿದೆ. ಸಭಾಧ್ಯಕ್ಷರು ವಿಧಾನಮಂಡಲದ ಕಲಾಪವನ್ನು ಸರ್ವಾಧಿಕಾರಿಯಂತೆ ನಡೆಸಿದ್ದಾರೆ. ಅಲ್ಲದೆ ಪ್ರತಿಪಕ್ಷವನ್ನು ಹತ್ತಿಕ್ಕಲಾಗಿದೆ.

ವಿಧಾನಮಂಡಲದಲ್ಲಿ ಸಭಾಧ್ಯಕ್ಷರು ಬಿಜೆಪಿಯ 10 ಶಾಸಕರನ್ನು ಅಮಾನತು ಮಾಡಿದ್ದನ್ನು ವಿರೋಧಿಸಿ ಈ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

emedialine

Recent Posts

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

56 mins ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

1 hour ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

1 hour ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

1 hour ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

1 hour ago

ನಮೋಶಿ ನೇತೃತ್ವದಲ್ಲಿ, ಕಲ್ಯಾಣ ಕರ್ನಾಟಕ ವಿಭಾಗದ ಪ್ರೌಢಶಾಲಾ ಶಿಕ್ಷಕರ ಸಭೆ

ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…

1 hour ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420