ಬಿಸಿ ಬಿಸಿ ಸುದ್ದಿ

ಕಸಾಪದಿಂದ ಏರ್ಪಡಿಸಿದ ವಚನಜ್ಯೋತಿ ಯಾತ್ರೆ

ಕಲಬುರಗಿ: ಇದೊಂದು ಅಪರೂಪದ ಕಾರ್ಯಕ್ರಮ ಜಿಲ್ಲಾ ಕಸಾಪ ದಿಂದ ಏರ್ಪಡಿಸಿದ ವಚನಜ್ಯೋತಿ ಯಾತ್ರೆಗೆ ಸಮಾಜದ ಶುದ್ಧತೆಯಲ್ಲಿ ತೊಡಗಿಸಿಕೊಂಡಿರುವ ಚಮ್ಮಾರ ಕಾಯಕ ಮತ್ತು ಪೌರ ಕಾರ್ಮಿಕರಾದ ನಾಗೀಂದ್ರಪ್ಪ ಹೀರಾಪೂರ ಹಾಗೂ ಲಕ್ಷ್ಮೀ ಶರಣಪ್ಪ ಅವರು ಕಾರ್ಯಕ್ರಮ ಉದ್ಘಾಟಿಸುವ ಮೂಲಕ ವಚನಸಾಹಿತ್ಯದ ನಿಜವಾದ ಆಶಯವನ್ನು ಈಡೇರಿಸಿದಂತಾಗಿದೆ.

ವಚನ ಸಾಹಿತ್ಯವು ಸಾಮಾಜಿಕ ಚಳವಳಿಯಾಗಿದ್ದು ಪ್ರಸ್ತುತ ಸಮಾಜದ ಅಮಾನವೀಯ ಗುಣಗಳನ್ನು ಬದಲಾಯಿಸುವ ಪ್ರಯತ್ನವನ್ನು ಮಾಡಿಕೊಂಡು ಬಂದಿದೆ. ನಮ್ಮ ಮುಂದೆ ಇರುವ ಅನೇಕ ಸವಾಲುಗಳಿಗೆ ಉತ್ತರವನ್ನು ಕೊಡುವ ಪ್ರಯತ್ನವನ್ನೂ ಸಹ  ವಚನ ಸಾಹಿತ್ಯ ಮಾಡಿದೆ. ವಚನ ಸಾಹಿತ್ಯವು ಸಮಾನತೆಯನ್ನು ಪ್ರತಿಪಾದಿಸುತ್ತದೆ. ನಮ್ಮ ಬದುಕಿನ ಹಲವು ಇಂದಿನ ತಲ್ಲಣಗಳಿಗೆ ವಚನ ಸಾಹಿತ್ಯವು ಅತ್ಯಗತ್ಯವಾಗಿದೆ. ಪ್ರಸ್ತುತ ಸಮಾಜದಲ್ಲಿ ವಚನಗಳು ನಮ್ಮ ವ್ಯಕ್ತಿತ್ವ ನಿರ್ಮಾಣಕ್ಕೆ ಅತ್ಯಂತ ಪೂರಕವಾಗಿದ್ದು, ಸಮಾಜಕ್ಕೆ ಉತ್ತಮ ಮಾರ್ಗದಶ್ನವನ್ನು ನೀಡುತ್ತದೆ ಎಂದು ಪಿಡಿಎ ಇಂಜೀನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕ ಪ್ರೊ. ಸಂಜಯ ಮಾಕಲ್ ಅವರು ಹೇಳಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಂದ ಜಿಲ್ಲೆಯ ಕಾಳಗಿ ಪಟ್ಟಣದ ಶ್ರೀ ಜಗದ್ಗುರು ರೇವಣಸಿದ್ಧೇಶ್ವರ ಶ್ರೀಮತಿ ನಾಗರತ್ನಮ್ಮ ಶಿವಶರಣಪ್ಪ ಕಮಲಾಪೂರ ಸರಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ ಸತ್ಯ ಚರಿತೆ ರಚನೆಯಲ್ಲಿ… ವಚನಜ್ಯೋತಿ ಯಾತ್ರೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮಾತನಾಡಿ, ಹನ್ನೇರಡನೆಯ ಶತಮಾನದ ಬಸವಾದಿ ಶರಣರ ನಡೆ-ನುಡಿ, ಆಚಾರ-ವಿಚಾರಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದರಿಂದ ಜೀವನಕ್ಕೊಂದು ಮೌಲ್ಯ ಬರುತ್ತದೆ. ಹಾಗಾಗಿ,  ಇಂದಿನ ವಿದ್ಯಾರ್ಥಿಗಳಲ್ಲಿ ವಚನ ಸಂಸ್ಕøತಿಯನ್ನು ಬಿತ್ತುವ ಮೂಲಕ ಪ್ರೀತಿ-ವಿಶ್ವಾಸದ ಹಾಗೂ ಸ್ವಾಭಿಮಾನದ ಬದುಕನ್ನು ರೂಢಿಸಿಕೊಳ್ಳಬೇಕೆಂಬುದುವುದೇ ಈ ವಚನಜ್ಯೊತಿ ಯಾತ್ರೆಯ ಮುಖ್ಯ ಉದ್ದೇಶವಾಗಿದ್ದು, ಈ ವಚನ ಚಳವಳಿ ರೂಪದ ಕಾರ್ಯಕ್ರಮ ಜಿಲ್ಲೆಯಾದ್ಯಂತ ನಡೆಸಲಾಗುತ್ತಿದೆ ಎಂದರು.

ಭರತನೂರಿನ ಶ್ರೀ ಚಿಕ್ಕಗುರುನಂಜೇಶ್ವರ ಮಹಾಸ್ವಾಮಿಗಳು ಸಮಾರಂಭದ ದಿವ್ಯ ಸಾನಿಧ್ಯ ವಹಿಸಿದ್ದರು. ಕಾಲೇಜಿನ ಪ್ರಿನ್ಸಿಪಾಲ್ ಡಾ. ಶಾಂತಲಾ ಡಿ.ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಭೂದಾನಿ ಶಿವಶರಣಪ್ಪ ಕಮಲಾಪೂರ, ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಶಿವರಾಜ ಎಸ್ ಅಂಡಗಿ, ಪ್ರಾಧ್ಯಾಪಕ ಡಾ. ಶಿವಶರಣಪ್ಪ ಮೋತಕಪಳ್ಳಿ, ಕಾಳಗಿ ಕಸಾಪ ಅಧ್ಯಕ್ಷ ಸಂತೋಷ ಕುಡಳ್ಳಿ, ರಾಜೇಂದ್ರಬಾಬು ಹೀರಾಪೂರ, ವಿಶ್ವನಾಥ ತೊಟ್ನಳ್ಳಿ, ಚಿಂಚೋಳಿ ಕಸಾಪ ಅಧ್ಯಕ್ಷ ಸುರೇಶ ದೇಶಪಾಂಡೆ, ಯಲ್ಲಾಲಿಂಗ ಪಾಟೀಲ, ಸತೀಶ ಸುಲೇಪೇಟ್, ಸಿದ್ದು ಕದಂ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಪ್ರಸ್ತುತ ಸಾಮಾಜಿಕ ಸಂದರ್ಭದ ಅನೇಕ ಜ್ವಲಂತ ಸಮಸ್ಯೆಗಳಿಗೆ ವಚನ ಸಾಹಿತ್ಯವು ಉತ್ತರವನ್ನು ನೀಡಿದೆ. ಮಾನವೀಯತೆಯನ್ನು ಬೆಳೆಸುವುದೇ  ನಿಜವಾದ ಹೋರಾಟವೆಮದು ತಿಳಿದುಕೊಂಡ ವಚನಕಾರರು ಮನಸ್ಸನ್ನು ಕಟ್ಟುವ ಕೆಲಸವನ್ನುಮಾಡಲು ಪ್ರಯತ್ನಿಸಿದ್ದಾರೆ. – ವಿಜಯಕುಮಾರ ತೇಗಲತಿಪ್ಪಿ, ಅಧ್ಯಕ್ಷ, ಜಿಲ್ಲಾ ಕಸಾಪ.

emedialine

Recent Posts

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

10 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

10 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

12 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

12 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

12 hours ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

12 hours ago