ಬಿಸಿ ಬಿಸಿ ಸುದ್ದಿ

ಕಣಿವೆಹಳ್ಳಿ ಗ್ರಾಮಕ್ಕೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲು ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

ಬಳ್ಳಾರಿ: ಹರಪನಹಳ್ಳಿ ತಾಲೂಕು ಕಣಿವೆಹಳ್ಳಿ ಗ್ರಾಮದಲ್ಲಿ ಕಲುಷಿತ ನೀರು ಸೇವನೆ ಮಾಡಿ ಹಲವರು ಅಸ್ವಸ್ಥರಾದ ಹಿನ್ನೆಲೆಯಲ್ಲಿ ಗ್ರಾಮದ ಜನರಿಗೆ ತಕ್ಷಣ ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜು ಮಾಡುವಂತೆ ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ ರಾಜ್ ಮತ್ತು ಐಟಿ, ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಗ್ರಾಮದ ಕೊಳವೆ ಬಾವಿಯೊಂದರ ನೀರು ಕಲುಷಿತಗೊಂಡಿರುವುದರಿಂದಾಗಿ ಆ ಬಾವಿನ ನೀರು ಸೇವಿಸಿದವರಲ್ಲಿ ಸುಮಾರು 20 ಜನ ಅಸ್ವಸ್ಥರಾಗಿದ್ದು ಅವರಲ್ಲಿ 8 ಜನರನ್ನು ಹರಪನಹಳ್ಳಿ ಸರ್ಕಾರಿ ಆಸ್ಪತ್ರೆ ಸೇರಿದಂತೆ ವಿವಿಧ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದ್ದು, ಒಬ್ಬರನ್ನು‌ ದಾವಣೆಗೆರೆಯ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಜೊತೆಗೆ, ಗ್ರಾಮದಲ್ಲಿ ತಾತ್ಕಾಲಿಕ ಆರೋಗ್ಯ ಕೇಂದ್ರ ಸ್ಥಾಪಿಸಲಾಗಿದ್ದು ತುರ್ತು ಚಿಕಿತ್ಸೆಗೆ ಅನಕೂಲ ಮಾಡಲಾಗಿದೆ ಎಂದು ಸಚಿವರು ಹೇಳಿದ್ದಾರೆ.

ಕಲುಷಿತಗೊಂಡ ನೀರನ್ನು ಸಂಗ್ರಹಿಸಿ ಪರೀಕ್ಷೆಗೆ ಕಳಿಸಲಾಗಿದೆ ಎಂದು ಹೇಳಿರುವ ಸಚಿವರು ಶುದ್ದ ಕುಡಿಯುವ ನೀರು ಸರಬರಾಜು ಮಾಡಲು ಅಗತ್ಯ ಹಾಗೂ ಸೂಕ್ತ ಕ್ರಮಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಪತ್ರಿಕೆಗಳ ವರದಿಗಳನ್ನು ಆಧರಿಸಿ ತಕ್ಷಣ ಕಾರ್ಯಪ್ರವೃತ್ತರಾದ ಸಚಿವರು ಅಧಿಕಾರಿಗಳೊಂದಿಗೆ ಮಾತನಾಡಿ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದು ಆಸ್ಪತ್ರೆಯಲ್ಲಿ‌ ದಾಖಲಾಗಿರುವವರ ಬಗ್ಗೆ ನಿಗಾ ಇಡುವಂತೆ ಅಧಿಕಾರಿಗಳಿಗೆ ಹಾಗೂ ವೈದ್ಯರಿಗೆ ಸೂಚನೆ ನೀಡಿದ್ದಾರೆ.

emedialine

Recent Posts

ಪುರಾತನ ಕಾಲದಲ್ಲಿ ನಾಗಾವಿ ನಾಡು ಸಾಂಸ್ಕøತಿಕವಾಗಿ ಪ್ರಸಿದ್ಧ: ತಹಸಿಲ್ದಾರ್ ಹಿರೇಮಠ್

ಕಲಬುರಗಿ: ಪುರಾತನ ಕಾಲದಲ್ಲಿ ನಾಗಾವಿ ಪ್ರದೇಶವು ದಕ್ಷಿಣ ಭಾರತದಲ್ಲಿ ನಾಗಾವಿ ಪ್ರಸಿದ್ದಿ ಪಡೆದ ವಿಶ್ವ ವಿದ್ಯಾಲಯವಾಗಿತ್ತು ಎಂದು ತಹಸಿಲ್ದಾರ್ ನಾಗಯ್ಯ…

10 hours ago

ಮತದಾರರ ನೋಂದಣಿಗೆ ನವೆಂಬರ್ 23 ಮತ್ತು‌ 24 ರಂದು ವಿಶೇಷ ಅಭಿಯಾನಬಿ:.ಫೌಜಿಯಾ ತರನ್ನುಮ್

ಕಲಬುರಗಿ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ದಿ.1-1-2025 ಅರ್ಹತಾ ದಿನವನ್ನಾಗಿ ಪರಿಗಣಿಸಿಕೊಂಡು ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ನಡೆಸಲಾಗುತ್ತಿದ್ದು,…

11 hours ago

ವಿಕಲಚೇತನರು ಎಲ್ಲಾ ಕ್ರೀಡೆಗಳಲ್ಲಿ ಭಾಗವಹಿಸಿ ಜಯಸಾಧಿಸಬೇಕು: ರಾಯಪ್ಪ ಹುಣಸಗಿ

ಕಲಬುರಗಿ: ವಿದ್ಯಾರ್ಥಿಗಳು ಜಿಲ್ಲೆಯ ಎಲ್ಲಾ ವಿಕಲಚೇತನರಿಗೆ ಹೆಚ್ಚಿನ ಸ್ಥಾನಮಾನಗಳನ್ನು ಸಿಗಬೇಕು ಹಾಗೂ ಎಲ್ಲ್ಲಾ ಕ್ರೀಡೆಗಳಲ್ಲಿ ಭಾಗವಹಿಸಿ ಜಯಸಾಧಿಸಬೇಕು ಎಂದು ಅಪರ…

11 hours ago

ಕಲಬುರಗಿ: ಕ್ವಾರ್ಟರ್ ಫೈನಲ್ ಪ್ರವೇಶಿಸಿದ ನಾಲ್ವರು ಭಾರತೀಯರು

ಪ್ರಜ್ವಲ್,ಧೀರಜ್ ಸೋಲಿಸಿ ಗೆದ್ದು ಬೀಗಿದ ಬೊಬ್ರೋಬ್ ಹಾಗೂ ಸುಲ್ತಾನೋವ್ ಕಲಬುರಗಿ, ನವೆಂಬರ್ ೨೧ : ಐಟಿಎಫ್ ಕಲಬುರಗಿ ಓಪನ್ ಟೆನಿಸ್…

11 hours ago

ಜಾನಪದ ಉಳಿಸಿ ಬೇಳೆಸ ಬೇಕಾದರೆ ಯುವಕರು ಮುಂದಾಳತ್ವ ಬಹಳ ಮುಖ್ಯ: ಪ್ರೊ. ಶೊಭಾದೇವಿ ಚೆಕ್ಕಿ

ಕಲಬುರಗಿ: ವೀರಭದ್ರೇಶ್ವರ ಸಾಂಸ್ಕೃತಿಕ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ರಿ ಆಳಂದ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು…

11 hours ago

ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ

ಕಲಬುರಗಿ: ಸರಕಾರಿ ಮಹಾವಿದ್ಯಾಲಯ ಸ್ವಾಯತ್ತದ ಡಾ.ಬಿ.ಆರ್. ಅಂಬೇಡ್ಕರ್ ಫಂಕ್ಷನ್ ಹಾಲ್‍ನಲ್ಲಿ ಆಡಿಟ್ ದಿವಸ ದಿನಾಚರಣೆ ಪ್ರಯುಕ್ತ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ…

14 hours ago