ಕಲಬುರಗಿ: ಮಳೆ ನೀರಿನಿಂದ ತುಂಬಿದ್ದ ಹೊಂಡಕ್ಕೆ ಬಿದ್ದು ಇಬ್ಬರು ಬಾಲಕರು ಸಾವನ್ನಪ್ಪಿರುವ ಘಟನೆ ಕಲಬುರಗಿ ನಗರದ ದುಬೈ ಕಾಲೋನಿಯಲ್ಲಿ ನಡೆದಿದೆ.
ಸಂಜಯಗಾಂಧಿ ನಗರದ ಅಭಿಷೇಕ ತಂದೆ ಸುರೇಶ ಕನ್ನೋಳ್ (12) ಮತ್ತು ಅಜಯ್ ತಂದೆ ಭೀಮರಾಯ ನೆಲೋಗಿ (12) ಮೃತ ಬಾಲಕರು. ದುಬೈ ಕಾಲೋನಿಯ ಮಕ್ಕಳ ಆಸ್ಪತ್ರೆ (ಹಳೇ ಕುಷ್ಠರೋಗಿ ಆಸ್ಪತ್ರೆ ಬಳಿ) ಮುಂಭಾಗದಲ್ಲಿ ಕುಡಿಯುವ ನೀರಿನ ಟ್ಯಾಂಕ್ ನಿರ್ಮಾಣಕ್ಕೆ ತಗ್ಗು ತೋಡಲಾಗಿದೆ. ಸತತ ಮಳೆಯಿಂದ ತಗ್ಗು ಸಂಪೂರ್ಣ ಭರ್ತಿಯಾಗಿದೆ. ನಿನ್ನೆ ಸಂಜೆ ಇಬ್ಬರು ಬಾಲಕರು ಆಟವಾಡಲು ಹೋಗಿ ಗುಂಡಿಗೆ ಬಿದ್ದು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಅಗ್ನಿಶಾಮಕ ದಳದ ಸಿಬ್ಬಂದಿ ಬಾಲಕರ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಸುದ್ದಿ ತಿಳಿದು ಚೌಕ್ ಠಾಣೆ ಪಿಐ ರಾಜಶೇಖರ ಹಳಿಗೋಡಿ ಹಾಗೂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು.
ಮೃತ ಬಾಲಕರ ಪೋಷಕರು ಹಾಗೂ ಸಂಬಂಧಿಕರು ಸ್ಥಳದಲ್ಲಿ ರೋದಿಸಿದ್ದರು. ಈ ಕುರಿತು ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಲಬುರಗಿ: ಪುರಾತನ ಕಾಲದಲ್ಲಿ ನಾಗಾವಿ ಪ್ರದೇಶವು ದಕ್ಷಿಣ ಭಾರತದಲ್ಲಿ ನಾಗಾವಿ ಪ್ರಸಿದ್ದಿ ಪಡೆದ ವಿಶ್ವ ವಿದ್ಯಾಲಯವಾಗಿತ್ತು ಎಂದು ತಹಸಿಲ್ದಾರ್ ನಾಗಯ್ಯ…
ಕಲಬುರಗಿ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ದಿ.1-1-2025 ಅರ್ಹತಾ ದಿನವನ್ನಾಗಿ ಪರಿಗಣಿಸಿಕೊಂಡು ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ನಡೆಸಲಾಗುತ್ತಿದ್ದು,…
ಕಲಬುರಗಿ: ವಿದ್ಯಾರ್ಥಿಗಳು ಜಿಲ್ಲೆಯ ಎಲ್ಲಾ ವಿಕಲಚೇತನರಿಗೆ ಹೆಚ್ಚಿನ ಸ್ಥಾನಮಾನಗಳನ್ನು ಸಿಗಬೇಕು ಹಾಗೂ ಎಲ್ಲ್ಲಾ ಕ್ರೀಡೆಗಳಲ್ಲಿ ಭಾಗವಹಿಸಿ ಜಯಸಾಧಿಸಬೇಕು ಎಂದು ಅಪರ…
ಪ್ರಜ್ವಲ್,ಧೀರಜ್ ಸೋಲಿಸಿ ಗೆದ್ದು ಬೀಗಿದ ಬೊಬ್ರೋಬ್ ಹಾಗೂ ಸುಲ್ತಾನೋವ್ ಕಲಬುರಗಿ, ನವೆಂಬರ್ ೨೧ : ಐಟಿಎಫ್ ಕಲಬುರಗಿ ಓಪನ್ ಟೆನಿಸ್…
ಕಲಬುರಗಿ: ವೀರಭದ್ರೇಶ್ವರ ಸಾಂಸ್ಕೃತಿಕ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ರಿ ಆಳಂದ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು…
ಕಲಬುರಗಿ: ಸರಕಾರಿ ಮಹಾವಿದ್ಯಾಲಯ ಸ್ವಾಯತ್ತದ ಡಾ.ಬಿ.ಆರ್. ಅಂಬೇಡ್ಕರ್ ಫಂಕ್ಷನ್ ಹಾಲ್‍ನಲ್ಲಿ ಆಡಿಟ್ ದಿವಸ ದಿನಾಚರಣೆ ಪ್ರಯುಕ್ತ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ…