ಮಣಿಪುರ ಯುವತಿಯರನ ಬೆತ್ತಲೆ ಹಿಂಸಾಚಾರ; ಕೇಂದ್ರೀಯ ವಿವಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

0
98

ಕಲಬುರಗಿ: ಮಣಿಪುರ ಹಿಂಸಾಚಾರ ಹಾಗೂ ಕುಕಿ ಸಮುದಾಯದ ಯುವತಿಯರನ್ನು ಬೆತ್ತಲೆ ಮಾಡಿ ಮೆರವಣಿಗೆ ಮಾಡಿದ ಘಟನೆಯನ್ನು ವಿರೋಧಿಸಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಮುಂದೆ  ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ ಎಫ್ ಐ) ಸಂಘಟನೆಯ ನೇತೃತ್ವದಲ್ಲಿ ಹೋರಾಟವನ್ನು ಮಾಡಿದರು.

ಪ್ರತಿಭಟನೆಯ ವೇಳೆ ಎಸ್ಎಫ್ಐ ಸಂಘಟನೆಯ ರಾಜ್ಯ ಕಾರ್ಯದರ್ಶಿ ಭೀಮನಗೌಡ ಮಾತನಾಡಿ ಮಣಿಪುರದಲ್ಲಿ ಕಳೆದ ಮೇ 4 ರಂದು ಮಹಿಳೆಯರನ್ನು ಬೆತ್ತಲೆ ಮಾಡಿ, ಖಾಸಗಿ ಅಂಗಾಂಗಗಳ ಒಳಗೆ ಕೈ ಹಾಕಿ ಮೆರವಣಿಗೆ ಮಾಡಲಾಗಿದೆ, ಜೊತೆಗೆ ಸಾಮೂಹಿಕ ಅತ್ಯಾಚಾರ‌ ಮಾಡಿದ ಘಟನೆ ನಡೆದಿದೆ. ತಡವಾಗಿ ಬೆಳಕಿಗೆ ಬಂದ ಈ ದಾರುಣ ಘಟನೆಯನ್ನು ಖಂಡಿಸಿ ತಪ್ಪಿತಸ್ಥರಿಗೆ ಉಗ್ರ ಶಿಕ್ಷೆಗೆ ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ ಸಂಘಟನೆಯು ಕರ್ನಾಟಕ ರಾಜ್ಯಾದ್ಯಂತ ಪ್ರತಿಭಟನೆ ಮಾಡಲು ಕರೆ ನೀಡಿದೆ ಎಂದರು.

Contact Your\'s Advertisement; 9902492681

ಮಣಿಪುರದಿಂದ ಹೊರಬಂದ ಹೃದಯ ವಿದ್ರಾವಕ ವಿಡಿಯೋ ಇಡೀ ರಾಷ್ಟ್ರವನ್ನು ಬೆಚ್ಚಿಬೀಳಿಸಿದೆ, ಮತ್ತು ಇಂತಹ ಹೀನಾಯ ಕೃತ್ಯಗಳು ಮನುಷ್ಯರಾದವರು ಹೇಗೆ ನಡೆಸುತ್ತಾರೆ  ಎಂಬುದನ್ನು ಗ್ರಹಿಸಲಾಗದು. ಇದರಿಂದ ಇಡೀ ನಾಗರಿಕ ಸಮಾಜ ತಲೆತೆಗ್ಗಿಸುವಂತಾಗಿದೆ ಎಂದು ಮಾತನಾಡಿದರು.

ಕಲಬುರಗಿ ಜಿಲ್ಲೆಯ ಸಂಚಾಲಕರಾದ ಸುಜಾತ ಮಾತನಾಡಿ, ಸ್ವಾತಂತ್ರ್ಯ ಪೂರ್ವದಿಂದ ಇಲ್ಲಿಯವರೆಗೆ ಮಹಿಳೆಯ ಸಮಾನ ಹಕ್ಕುಗಳಿಗಾಗಿ ಹೋರಾಟ ಮಾಡಿದ್ದೆವು. ಆದರೆ ಸ್ವಾತಂತ್ರ್ಯ ಬಂದು 76 ವರ್ಷಗಳು ಕಳೆದರೂ ಇನ್ನೂ ಮಹಿಳೆಯರಿಗೆ ರಕ್ಷಣೆಯೇ ಸಿಕ್ಕಿಲ್ಲ ಎಂಬುದು ನಮಗೆ ಗೊತ್ತಾಗಿದೆ. ಬಿಲ್ಕಿಸ್ ಬಾನು ಪ್ರಕರಣವಾದಾಗ, ಹತ್ರಾಸ್ ದಲಿತ ಹೆಣ್ಣು ಮಗಳ ಮೇಲೆ ಅತ್ಯಾಚಾರ ನಡೆದಾಗ, ಮಹಿಳಾ ಕುಸ್ತಿಪಟುಗಳ ದೌರ್ಜನ್ಯ ನಡೆದಾಗ ನಮ್ಮ ದೇಶದ ಪ್ರಧಾನಮಂತ್ರಿಗಳು ಮಾತನಾಡಿದ್ದರೆ ಇಂದು ಇಂತಹ ಕೃತ್ಯ ಹೆಸಗಲು ಯೋಚಿಸುತ್ತಿದ್ದರು ಎಂದು ತಮ್ಮ ಆಕ್ರೋಶವನ್ನು ಹೊರ ಹಾಕಿದರು.

ಕೇಂದ್ರೀಯ ವಿವಿಯ ಎಸ್ ಎಫ್ ಐ ಘಟಕ ಕಾರ್ಯದರ್ಶಿ ಆದಿತ್ಯ ಮಾತನಾಡಿ, ಮಣಿಪುರದಲ್ಲಿ ಶಾಂತಿ ನೆಲಸಬೇಕು. ಅಲ್ಲಿ ನಡೆದ ಅಮಾನುಷ ಕೃತ್ಯವನ್ನು ಕೇಂದ್ರೀಯ ವಿವಿ ವಿದ್ಯಾರ್ಥಿಗಳು ಒಕ್ಕೊರಲಿನಿಂದ ಖಂಡಿಸುತ್ತೇವೆ ಘಟನೆಯ ತನಿಖೆಯನ್ನು ಪ್ರಾಮಾಣಿಕವಾಗಿ ಮಾಡಬೇಕು ಹಾಗೂ ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಎಂದು ಆಗ್ರಹಿಸಿದರು.

ಈ ಸಂಧರ್ಭದಲ್ಲಿ ನೂರಾರು ವಿದ್ಯಾರ್ಥಿಗಳು ಸೇರಿ ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ, ಮಹಿಳೆಯರ ಘನತೆ ಉಳಿಯಲಿ, ಮಣಿಪುರದಲ್ಲಿ ಶಾಂತಿ ನೆಲೆಸಲಿ ಎಂದು ಘೋಷಣೆ ಕೂಗಿ ತಮ್ಮ ಆಕ್ರೋಶವನ್ನು ಹೊರಹಾಕಿ ನ್ಯಾಯಕ್ಕಾಗಿ ಒತ್ತಾಯಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here