ಸೇಡಂ: ಹಾಲಿನ ದರ ಏರಿಕೆ ಮಾಡಿರುವ ರಾಜ್ಯ ಸರಕಾರದ ವಿರುದ್ಧ ಸೇಡಂ ಮತಕ್ಷೇತ್ರದ ಜೆಡಿಎಸ್ ಮುಖಂಡ ಬಾಲರಾಜ್ ಗುತ್ತೇದಾರ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ವಿದ್ಯೂತ ಬೆಲೆ ಏರಿಸಿದ ನಂತರ ರಾಜ್ಯ ಕಾಂಗ್ರೆಸ್ ಸರ್ಕಾರ ಹಾಲಿನ ಬೆಲೆಯನ್ನೂ ಲೀಟರಿಗೆ ₹3 ಹೆಚ್ಚಿಸಿ ಶ್ರಮಜೀವಿಗಳ ಕಿಸೆಗೆ ಕನ್ನ ಕೊರೆದಿದೆ. ಒಂದು ಕೈಯ್ಯಲ್ಲಿ ಕೊಟ್ಟು, ಇನ್ನೊಂದು ಕೈಯ್ಯಲ್ಲಿ ಕಸಿದುಕೊಳ್ಳುತ್ತಿದೆ! ಸ್ವತಃ ತಾವೇ ಕಿವಿಯಲ್ಲಿ ಹೂವಿಟ್ಟುಕೊಂಡಿದ್ದ ಕಾಂಗ್ರೆಸ್ಸಿಗರು, ಜನರ ತಲೆಯ ಮೇಲೆ ಫ್ಲವರ್ ಪಾಟ್ ಇಡುತ್ತಿದ್ದಾರೆ!!! ಎಂದು ಅವರು ಕಿಡಿಕಾರಿದ್ದಾರೆ.
ಚುನಾವಣೆಗೆ ಮುನ್ನ ಬೆಲೆ ಏರಿಕೆ ಬಗ್ಗೆ ಕಾಂಗ್ರೆಸ್ ಬಾಯಿಬಾಯಿ ಬಡಿದುಕೊಂಡಿತ್ತು. ದೊಡ್ಡ ಬಾನಗಡಿಯನ್ನೇ ಎಬ್ಬಿಸಿತ್ತು. ಅಧಿಕಾರಕ್ಕೆ ಬಂದೊಡನೆ ಬೆಲೆ ಏರಿಕೆಯ ಸರಣಿ ಶಾಕ್ ನೀಡುತ್ತಿದೆ. ಹೀಗಿದೆ ನೋಡಿ ಕೈ ಕರಾಮತ್ತು. ಅನ್ನಭಾಗ್ಯದ ಹಣವನ್ನು ಹಾಲು, ವಿದ್ಯೂತ ನಿಂದ ವಸೂಲಿಗೆ ಇಳಿದಿದ್ದಾರೆ ಆರಂಭದಲ್ಲಿಯೇ ವಿದ್ಯುತ್ ಶಾಕ್ ಕೊಟ್ಟಿದ್ದ ಸರ್ಕಾರ, ಗೃಹಜ್ಯೋತಿಯನ್ನು ಜನರ ಪಾಲಿಗೆ ಸುಡುಜ್ಯೋತಿ ಮಾಡಿತ್ತು. ಏರಿದ ಬೆಲೆಗಳನ್ನು ಕೆಳಗಿಳಿಸಲು ಕೈಲಾಗದ ಈ ಸರ್ಕಾರ, ವಿಧಾನ ಕಲಾಪ ಮುಗಿಯುತ್ತಿದ್ದಂತೆಯೇ ಜನತೆಗೆ ಹೊಸದಾಗಿ ಬೆಲೆ ಏರಿಕೆ ಗ್ಯಾರಂಟಿ, ಬೆಲೆಭಾಗ್ಯವನ್ನು ಕರುಣಿಸಿ ಕೈತೊಳೆದುಕೊಂಡಿದೆ ಎಂದು ಟೀಕಿಸಿದ್ದಾರೆ.
ಚುನಾವಣೆ ಪ್ರಣಾಳಿಕೆಯಲ್ಲಿ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ ಭರವಸೆ ಕೊಟ್ಟಿದ್ದವರು ಎರಡೇ ತಿಂಗಳಲ್ಲಿ ಅದನ್ನು ಮರೆತೇ ಹೋಗಿದ್ದಾರೆ!! ಹಸುಗಳ ಹಿಂಡಿ, ಬೂಸಾ ಬೆಲೆ ಇಳಿಕೆಗೂ ಯಾವ ಗ್ಯಾರಂಟಿಯೂ ಇಲ್ಲ. ಇವರಿಗೆ ಹಾಲಾದರೇನು? ಖಜಾನೆ ತುಂಬಬೇಕಷ್ಟೇ. ಈಗ ಜನರ ಬದುಕೇ ಹಾಲಾಹಲವಾಗಿದೆ ಎಂದು ಬಾಲರಾಜ್ ಗುತ್ತೇದಾರ ವಾಗ್ದಾಳಿ ನಡೆಸಿದ್ದಾರೆ
ಕಲಬುರಗಿ: ಖ್ಯಾತ ಶಿಕ್ಷಣತಜ್ಞ ದಿ: ಪೆÇ್ರ :ಶಂಕರಲಿಂಗ ಹೆಂಬಾಡಿ'ಯವರು ಸಂಸ್ಥಾಪಿತ ಡಾ.ರಾಜಕುಮಾರ ಸಾಹಿತ್ಯಿಕ ಮತ್ತು ಸಾಂಸ್ಕ್ರತಿಕ ಕಲಾ ಸಂಘ ರಾಜಾಪೂರ-ಕಲಬುರಗಿ…
ಕಲಬುರಗಿ: ನ.22 ಸಂವಿಧಾನ ದಿನಾಚರಣೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ ಹಾಗೂ ಕಲಬುರಗಿ ಮಹಾನಗರ ಪಾಲಿಕೆ ವತಿಯಿಂದ…
ವಾಡಿ (ಕಲಬುರಗಿ): ರಾಜ್ಯ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್, ಮತ್ತು ಐಟಿ/ಬಿಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಕ್ ರ‍್ಗೆ…
45ನೇ ಹುಟ್ಟುಹಬ್ಬ ಆಚರಿಕೊಳ್ಳುತ್ತಿರುವ ಪ್ರಿಯಾಂಕ್ ಖರ್ಗೆಯವರ ವೈಯಕ್ತಿಕ ಪರಿಚಯ ಎಲ್ಲರಿಗೂ ತಿಳಿದಿರುವಂತೆದ್ದೆ. ಅವರ ತಂದೆಯವರಾದ ಮಲ್ಲಿಕಾರ್ಜುನ ಖರ್ಗೆಯವರ ನಿಷ್ಟುರ ಮತ್ತು…
ಕಲಬುರಗಿ; ಶರಣಬಸವ ವಿಶ್ವವಿದ್ಯಾಲಯದ ದೊಡ್ಡಪ್ಪ ಅಪ್ಪ ಸಭಾಂಗಣದಲ್ಲಿ ಶುಕ್ರವಾರದಂದು 2ನೇಯ ಎರಡು ದಿನಗಳ Iಇಇಇ ಇಂಟರ್‍ನ್ಯಾಶನಲ್ ಕಾನ್ಫರೆನ್ಸ್ ಆನ್ ಇಂಟಿಗ್ರೇಟೆಡ್…
ಕಲಬುರಗಿ ; ಗ್ರಾಮೀಣಾಭಿವೃದ್ಧಿ ಪಂಚಾಯತ, ಐಟಿ, ಬಿಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಕ್ ಖರ್ಗೆ ಅವರ ಜನ್ಮದಿನದ ಅಂಗವಾಗಿ…