ಕಲಬುರಗಿ: ಕಾಂಗ್ರೆಸ್ ಮುಖಂಡ ತುಕಾರಾಮ ಕೊಳ್ಳೂರ ಅವರನ್ನು ಯಾವುದಾದರೋಂದು ನಿಗಮಕ್ಕೆ ಅಧ್ಯಕ್ಷ ಹಾಗೂ ಸದಸ್ಯರನ್ನಾಗಿ ಮಾಡಬೇಂಕೆದು ಶಾಸಕ ಅಲ್ಲಮಪ್ರಭು ಪಾಟೀಲ ಅವರಿಗೆ ಮನವಿ ಸಲ್ಲಿಸಿದರು.
ಕೊಳ್ಳೂರ ಅವರು ಮಾತನಾಡಿ ಕಳೆದ 25 ವರ್ಷಗಳಿಂದ ಕಾಂಗ್ರೇಸ್ ಪಕ್ಷದ ನಿಷ್ಠವಂತ ಕಾರ್ಯಕತನಾಗಿ ಪಕ್ಷಕ್ಕಾಗಿ ದುಡಿದಿರುತ್ತೇನೆ. ಹಲವು ಚುನಾವಣೆಯಲ್ಲಿ ಪಕ್ಷದ ನಾಯಕರ ಗೆಲುವಿಗಾಗಿ ಶ್ರಮಿಸಿದ್ದೇನೆ. ಇಲ್ಲಿಯವರೆಗೂ ಯಾವುದೇ ಹುದ್ದೆಯಿಲ್ಲದಿದ್ದರೂ ಕೂಡ ಕಾಂಗ್ರೇಸ್ ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ದುಡಿಯುತ್ತ ಬಂದಿರುತ್ತೇನೆ. ಪಕ್ಷದ ಸಂಘಟನೆ, ಸಮಾರಂಭಗಳಲ್ಲಿ ಹಗಲಿರಲು ಶ್ರಮಿಸುತ್ತ ಬಂದಿರುವ ನನಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ ಖರ್ಗೆ ಅವರು ಮತ್ತು ಜಿಲ್ಲಾ ಕಾಂಗ್ರೇಸ್ ಪಕ್ಷದ ಅಧ್ಯಕ್ಷರಾದ ಜಗದೇವ ಗುತ್ತೇದಾರರ ರವರು ನನ್ನ ಮನವಿ ಪರಿಗಣಿಸಿ, ನಿಗಮ ಮಂಡಳಿಯ ಸದಸ್ಯನನ್ನಾಗಿ ನಾಮ ನಿರ್ದೇಶನ ಮಾಡಬೇಕಾಗಿ ಪಕ್ಷದ ಚಟುವಟಿಕೆಯಲ್ಲಿ ಮುಂದುವರಿಸಲು ಅನುಮತಿ ಕೊಡಬೇಕೆಂದು ಅವರು ಮನವಿಯಲ್ಲಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಮಲ್ಲಿಕಾರ್ಜುನ ಟೆಂಗಳಿ, ಶಿವಾನಂದ ತೋರವಿ, ಶಿವುಕುಮಾರ ಬಾಳಿ, ತಿಪ್ಪಣ್ಣ ಒಡೆಯರಾಜ, ಶಿವರಾಜ ಇದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…