ಸುರಪುರ: ನಗರದ ಟೈಲರ್ ಮಂಜಿಲ್‍ನಲ್ಲಿ ದಲಿತ ಸೇನೆ ಸಂಘಟನೆಯ ಸಭೆ ನಡೆಸಿ ತಾಲೂಕು ಘಟಕದ ನೂತನ ಪದಾಧಿಕಾರಿಗಳನ್ನು ನೇಮಿಸಲಾಯಿತು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಘಟನೆಯ ಜಿಲ್ಲಾಧ್ಯಕ್ಷ ಅಶೋಕ ಹೊಸ್ಮನಿ ಮಾತನಾಡಿ,ದಲಿತ ಸೇನೆ ಸಂಘಟನೆ ದೇಶದ ಅನೇಕ ರಾಜ್ಯಗಳಲ್ಲಿ ಕಾರ್ಯನಿರ್ವಹಿಸುತ್ತದೆ.ನಮ್ಮ ಕರ್ನಾಟಕದಲ್ಲಿ ರಾಜ್ಯಾಧ್ಯಕ್ಷರಾದ ಹಣಮಂತ ಯಳಸಂಗಿ ಅವರ ನೇತೃತ್ವದಲ್ಲಿ ರಾಜ್ಯದಲ್ಲಿನ ದೀನ ದಲಿತರ ಅಭಿವೃಧ್ಧಿಗಾಗಿ ನಿರಂತರವಾಗಿ ಹೋರಾಟ ಮಾಡಿಕೊಂಡು ಬರುತ್ತಿದೆ.ಇಂದು ಸುರಪುರ ತಾಲೂಕು ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ನೇಮಕಗೊಳಿಸುವ ಮೂಲಕ ಸಂಘಟನೆಯನ್ನು ತಾಲೂಕಿನಲ್ಲಿ ಮತ್ತಷ್ಟು ಸಮಾಜದ ಕೆಲಸ ಮಾಡಲು ಮುಂದಾಗುವಂತೆ ಮನವಿ ಮಾಡುತ್ತೇವೆ ಎಂದರು.
ಇದೇ ಸಂದರ್ಭದಲ್ಲಿ ಸಭೆಯ ನೇತೃತ್ವ ವಹಿಸಿದ್ದ ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಿಂಗಣ್ಣ ಗೋನಾಲ,ಸಂತೋಷ ಯಕ್ತಾಪುರ ಮಾತನಾಡಿದರು.ವಿದ್ಯಾರ್ಥಿ ಘಟಕದ ಜಿಲ್ಲಾಧ್ಯಕ್ಷ ಸದಾಶೀವ ಬೊಮ್ಮನಹಳ್ಳಿ ಭಾಗವಹಿಸಿದ್ದರು.ಇದೇ ಸಂದರ್ಭದಲ್ಲಿ ಮುತ್ತು ದೇವತ್ಕಲ್ ಇರವನ್ನು ನೂತನ ಜಿಲ್ಲಾ ಉಪಾಧ್ಯಕ್ಷರನ್ನಾಗಿ ನೇಮಕಗೊಳಿಸಲಾಯಿತು.
ತಾಲೂಕು ಘಟಕದ ನೂತನ ಪದಾಧಿಕಾರಿಗಳು: ಮರಲಿಂಗ ಗುಡಿಮನಿ (ಅಧ್ಯಕ್ಷ),ಶಿವಣ್ಣ ನಾಗರಾಳ,ಮಹಾದೇವ ಮಹಾದೇವ ಛಲವಾದಿ (ಉಪಾಧ್ಯಕ್ಷರು),ಗೋಪಾಲ್ ಗೋಗಿಕೇರ (ಪ್ರಧಾನ ಕಾರ್ಯದರ್ಶಿ),ಬಸವರಾಜ ಮಾಳಳ್ಳಿಕರ್,ಮೌನೇಶ ಚಿಂಚೋಳಿ,ಸಂತೋಷ ಜೈನಾಪುರ (ಸಂಘಟನಾ ಕಾರ್ಯದರ್ಶಿ),ಬಸವರಾಜ ಮಂಗಳೂರ (ಖಜಾಂಚಿ), ತಾಲೂಕು ಯುವ ಘಟಕ: ನಾಗರಾಜ ಗೋಗಿಕೇರ (ಅಧ್ಯಕ್ಷ),ಪರಶುರಾಮ ಬೋನಾಳ,ಮರಿಯಪ್ಪ ಕಟ್ಟಿಮನಿ,ಪ್ರಕಾಶ ಕೆಂಭಾವಿಕರ್ (ಉಪಾಧ್ಯಕ್ಷರು),ಯಲ್ಲಪ್ಪ ಬಾವಿಮನಿ (ಪ್ರಧಾನ ಕಾರ್ಯದರ್ಶಿ), ಕೆಂಭಾವಿ ಹೋಬಳಿ ಘಟಕದ ಅಧ್ಯಕ್ಷರನ್ನಾಗಿ ಜುಮ್ಮಣ್ಣ ಕಟ್ಟಿಮನಿಯವರನ್ನು ನೇಮಕಗೊಳಿಸಲಾಯಿತು.ಸುರಪುರ,ಕೆಂಭಾವಿ ಹೋಬಳಿ ಘಟಕದ ಹಾಗೂ ದೇವಾಪುರ ಘಟಕದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…