ಬಿಸಿ ಬಿಸಿ ಸುದ್ದಿ

ಕಾಮುಕರ ಬಂಧನಕ್ಕೆ ಒತ್ತಾಯಿಸಿ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ

ಸುರಪುರ: ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರಕ್ಕೆ ಯತ್ನಸಿದವನನ್ನು ಬಂಧಿಸುವಂತೆ ದೂರು ನೀಡಿದರು ಇದುವರೆಗೂ ಬಂಧಿಸದಿರುವುದು ಬೇಸರದ ಸಂಗತಿಯಾಗಿದೆ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ ಬಣ) ಜಿಲ್ಲಾ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ ಬೇಸರ ವ್ಯಕ್ತಪಡಿಸಿದರು.

ನಗರದ ಪೊಲೀಸ್ ಠಾಣೆ ಮುಂದೆ ಸಮಿತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿ,ಹುಣಸಗಿ ತಾಲ್ಲೂಕಿನ ಕೊಡೇಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಹೊಂಬಳಕಲ್ ಗ್ರಾಮದ ಕುರುಬ ಸಮುದಾಯದ ಅಪ್ರಾಪ್ತ ಯುವತಿಯನ್ನು ಅದೇ ಗ್ರಾಮದ ನಂದಪ್ಪ ಸೋಮನಾಳ ಎಂಬುವವನು ಅಪಹರಣ ಮಾಡಿದ್ದಾನೆಂದು ಆರೋಪಿಸಿ ದೂರು ದಾಖಲಿಸಲಾಗಿದೆ.ಅದೆರೀತಿಯಾಗಿ ಹುಣಸಗಿ ತಾಲ್ಲೂಕಿನ ಮಂಜಲಾಪುರಹಳ್ಳಿ ಗ್ರಾಮದ ದಲಿತ ಸಮುದಾಯದ ೧೪ ವರ್ಷದ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಪರಮಣ್ಣ ಸಾಲವಾಡಗಿ ಎಂಬ ಈ ಇಬ್ಬರು ಕಾಮುಕರನ್ನು ಬಂಧಿಸುವಂತೆ ದೂರು ಸಲ್ಲಿಸಿದ್ದರು ಇದುವರೆಗೆ ಬಂಧಿಸದಿರುವುದನ್ನು ಖಂಡಿಸುವುದಾಗಿ ತಿಳಿಸಿದರು.

ಕೂಡಲೆ ಈ ಇಬ್ಬರು ಆರೋಪಿಗಳನ್ನು ಬಂಧಿಸಬೇಕು ಮತ್ತು ಈ ಎರಡೂ ಪ್ರಕರಣಗಳನ್ನು ತೀವ್ರಗತಿ ಸರ್ಕಾರದಿಂದ ಬಾಲ ನ್ಯಾಯ ಮಂಡಳಿಯಿಂದ ಸಂತ್ರಸ್ತರಿಗೆ ಪರಿಹಾರ ಕೊಡಿಸಬೇಕು ಎಂದು ಒತ್ತಾಯಿಸುತ್ತೆವೆ.ಒಂದು ವೇಳೆ ಈ ನಮ್ಮ ಮನವಿಗೆ ಸ್ಪಂಧಿಸದಿದ್ದಲ್ಲಿ ಸಪ್ಟೆಂಬರ್ ೪ ರಂದು ಹುಣಸಗಿಯ ಡಾ.ಬಾಬಾ ಸಾಹೇಬ ಅಂಬೇಡ್ಕರ ವೃತ್ತದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿ,ನಂತರ ಯಾದಗಿರಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಬರೆದ ಮನವಿಯನ್ನು ಡಿವಾಯ್‌ಎಸ್‌ಪಿ ಶಿವನಗೌಡ ಪಾಟೀಲ ಮೂಲಕ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಕೆಎಸ್‌ಡಿಎಸ್‌ಎಸ್ ಜಿಲ್ಲಾ ಸಂಘಟನಾ ಸಂಚಾಲಕ ಅಜೀಜ್ ಸಾಬ್ ಐಕೂರ,ಸಮಿತಿ ಕಲಾ ಮಂಡಳಿ ಜಿಲ್ಲಾ ಸಂಚಾಲಕ ಜಟ್ಟೆಪ್ಪ ನಾಗರಾಳ,ವಿದ್ಯಾರ್ಥಿ ಘಟಕದ ಜಿಲ್ಲಾ ಸಂಚಾಲಕ ಡಾ: ಮಲ್ಲಿಕಾರ್ಜುನ ಆಶನಾಳ, ಬುದ್ಧಿವಂತ ನಾಗರಾಳ,ತಾಲ್ಲೂಕು ಸಂಚಾಲಕ ತಿಪ್ಪಣ್ಣ ಶೆಳ್ಳಿಗಿ,ಮಾನಪ್ಪ ಶೆಳ್ಳಿಗಿ,ಮರಿಲಿಂಗಪ್ಪ ಹುಣಸಿಹೊಳೆ,ಖಾಜಾ ಹುಸೇನ ಗುಡಗುಂಟಿ, ಮಲ್ಲಿಕಾರ್ಜುನ ಮಳ್ಳಳ್ಳಿ,ರಮೇಶ ಹುಂಡೇಕಲ್,ಶರಣಪ್ಪ ಕುರಕುಂದಿ,ಭೀಮಣ್ಣ ಹುಣಸಗಿ, ಚಂದ್ರಶೇಖರ ಬಲಶೆಟ್ಟಿಹಾಳ,ಮುತ್ತುರಾಜ ಹುಲಿಕೇರಿ,ಗುರಪ್ಪ ಮಾಳನೂರ,ಸಾಬಣ್ಣ ಸದಬ,ಭೀಮಣ್ಣ ಕ್ಯಾತನಾಳ, ಮರಿಲಿಂಗಪ್ಪ ಹುಣಸಗಿ,ಶರಣಪ್ಪ ಉಳ್ಳೆಸುಗೂರ,ಮಾನಪ್ಪ ಬಿಜಾಸಪುರ,ಬಸವರಾಜ ಕಲ್ಲದೇವನಹಳ್ಳಿ,ಬಸಪ್ಪ ಅಗತೀರ್ಥ,ಯಲ್ಲಾಲಿಂಗ ಗುಂಡಲಗೇರಿ ಸೇರಿದಂತೆ ಅನೇಕರಿದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

7 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

7 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

7 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

23 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago