ಕಲಬುರಗಿ: ಹತ್ತು ವರ್ಷಗಳ ಹಿಂದೆ ಆಧಾರ್ ಕಾರ್ಡ್ ಪಡೆದು ಸದರಿ ವಿಳಾಸದಲ್ಲಿಯೇ ಈಗಲೂ ಮುಂದುವರೆದರೂ ಸಹ ಅಂತಹ ಆಧಾರ್ ಕಾರ್ಡ್‍ಗಳು ನಿಷ್ಕ್ರೀಯವಾಗುತ್ತಿರುವುದರಿಂದ ಜಿಲ್ಲೆಯಲ್ಲಿ ಆಧಾರ್ ಕಾರ್ಡ್ ಪಡೆದು 10 ವರ್ಷ ಮೇಲ್ಪಟ್ಟ ಹಾಗೂ ಇಲ್ಲಿಯವರೆಗೂ ಆಧಾರ್ ಕಾರ್ಡ್ ನವೀಕರಿಸದೇ ಇರುವವÀರು ತಮ್ಮ ವೈಯಕ್ತಿಕ ಗುರುತಿನ ದಾಖಲೆ ಹಾಗೂ ವಿಳಾಸದ ದಾಖಲೆಗಳೊಂದಿಗೆ ಹತ್ತಿರದ ಆಧಾರ ನೋಂದಣಿ ಕೇಂದ್ರದಲ್ಲಿ ಯ.ಐ.ಡಿ.ಎ.ಐ ಸಂಸ್ಥೆ ಅಭಿವೃದ್ಧಿಪಡಿಸಿರುವ ಹೊಸ ವೈಶಿಷ್ಟ ದಾಖಲಾತಿ ನವೀಕರಣ ತಂತ್ರಾಂಶದಲ್ಲಿ ನವೀಕರಣ/ ಕಾಲೋಚಿತಗೊಳಿಸುವಂತೆ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಸೂಚಿಸಿದ್ದಾರೆ.
ಅದೇ ರೀತಿ 5 ವರ್ಷ ಮೇಲ್ಪಟ್ಟು 7 ವರ್ಷದ ಒಳಗಿನ ಎಲ್ಲಾ ಮಕ್ಕಳ ಬಯೋಮೇಟ್ರಿಕ್ ಮತ್ತು ಮೋಬೈಲ್ ಸಂಖ್ಯೆಯನ್ನು ಸಹ ನವೀಕರಣಗೊಳಿಸಬೇಕು. ಸರ್ಕಾರದ ವಿವಿಧ ಯೋಜನೆಗಳಿಗೆ ಆಧಾರ್ ಕಡ್ಡಾಯಗೊಳಿಸಿರುವುದರಿಂದ ಜಿಲ್ಲೆಯ ನಾಗರಿಕರು ಆಧಾರ್ ನೊಂದಣಿ ಮಾಡಿಕೊಳ್ಳಬೇಕು. ಅಲ್ಲದೆ ಪ್ರತಿ 10 ವರ್ಷಕ್ಕೊಮ್ಮೆ ಬಯೋಮೆಟ್ರಿಕ್ ನವೀಕರಿಸಿಕೊಳ್ಳಬೇಕೆಂದು ಅವರು ಕೋರಿದ್ದಾರೆ.
ಸೇವಾ ಶುಲ್ಕ: ಹೊಸದಾಗಿ ಆಧಾರ್ ನೋಂದಣಿಗೆ ಮತ್ತು 5 ವರ್ಷ ಮೇಲ್ಪಟ್ಟು 7 ವರ್ಷದ ಒಳಗಿನ ಎಲ್ಲಾ ಮಕ್ಕಳ ಬಯೋಮೇಟ್ರಿಕ್ ನವೀಕರಣವು ಉಚಿತವಾಗಿರುತ್ತದೆ. ಉಳಿದಂತೆ ಹೆಸರು, ಲಿಂಗ, ವಯಸ್ಸು, ವಿಳಾಸ ಹಾಗೂ ಮೊಬೈಲ್ ನಂಬರಗಳ ವಿವರ (ಡೆಮೋಗ್ರಾಫಿಕ್) ನವೀಕರಣಕ್ಕೆ 50 ರೂ. ಮತ್ತು ಕಣ್ಣು, ಮುಖ, ಕೈ ಬೆರಳುಗಳ ವಿವರ (ಡೆಮೋಗ್ರಾಫಿಕ್) ನವೀಕರಣಕ್ಕೆ 100 ರೂ.ಗಳ ಸೇವಾ ಶುಲ್ಕ ಇದ್ದು, ಸಾರ್ವಜನಿಕರು ಇದಕ್ಕಿಂತ ಹೆಚ್ಚಿನ ಶುಲ್ಕ ಪಾವತಿ ಮಾಡಬೇಕಿಲ್ಲ ಎಂದು ಅವರು ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…