ಕಲಬುರಗಿ: ಜಿಲ್ಲೆಯ ಮೆಃ ಬಜಾಜ್ ಅಥ್ರ್ಸ ಪ್ರೈ.ಲಿ. ಕಂಪನಿಯು ಶ್ರೇಷ್ಠ ರಫ್ತುದಾರರ ಪ್ರಶಸ್ತಿಗೆ ಆಯ್ಕೆಯಾಗಿದ್ದಕ್ಕಾಗಿ ಬೆಂಗಳೂರಿನ ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್‍ದಲ್ಲಿ ಶನಿವಾರ (ಜುಲೈ 22 ರಂದು) ಹಮ್ಮಿಕೊಳ್ಳಲಾಗಿದ್ದ ರಾಜ್ಯ ಶ್ರೇಷ್ಠ ರಫ್ತುದಾರರ ಪ್ರಶಸ್ತಿ ಪ್ರಧಾನ ಸಮಾರಂಭವದಲ್ಲಿ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಮೆಃ ಬಜಾಜ್ ಕಂಪನಿಯ ನಿರ್ದೇಶಕ ಶ್ಯಾಮ್‍ಸುಂದರ ಬಜಾಜ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.
ರಾಜ್ಯ ಸರ್ಕಾರವು ಎಂಎಸ್‍ಎಂಇ ಕೈಗಾರಿಕೆಗಳಿಗೆ ಬೆಂಗಳೂರಿನಲ್ಲಿ District Exporter category ಯಲ್ಲಿ ಮ್ಯಾನುಫಾಕ್ಚ್‍ರಿಂಗ್ ಕೈಗಾರಿಕೆಗಳು ತಮ್ಮ ಕಂಪನಿಯ ಉತ್ಪಾದನೆಯನ್ನು ರಫ್ತು ಮಾಡುವುದರಲ್ಲಿ ಅತಿ ಹೆಚ್ಚು ವಹಿವಾಟು ಹೊಂದಿರುವ ಕಲಬುರಗಿಯ ಮೆ|| ಬಜಾಜ್ ಅಥ್ರ್ಸ ಪ್ರೈ. ಲಿ. ಕಂಪನಿಯು 2006ರಲ್ಲಿ ಸ್ಥಾಪನೆಯಾಗಿದ್ದು, ಕಳೆದ 3 ವರ್ಷಗಳಲ್ಲಿ 5488 ಲಕ್ಷ ರೂ.ಗಳ ತನ್ನ ಉತ್ಪನ್ನಗಳನ್ನು ಬಾಂಗ್ಲಾದೇಶ, ದಕ್ಷಿಣ ಆಫ್ರಿಕಾ, ಶ್ರೀಲಂಕಾ, ನೇಪಾಳ ಹಾಗೂ ಮಲೇಶಿಯಾ ಸೇರಿದಂತೆ ಮತ್ತಿತರ ದೇಶಗಳಿಗೆ ರಫ್ತು ಮಾಡಿದೆ.
ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಡಾ. ಎಸ್. ಸೆಲ್ವಕುಮಾರ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಆಯುಕ್ತ ಗುಂಜನ್ ಕೃಷ್ಣ ಸೇರಿದಂತೆ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಬಿ.ಸತೀಶ್‍ಕುಮಾರ ಅವರು ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…