ನಾಳೆ ಮಾಜಿ ಸಿಎಂ ಧರಂಸಿಂಗ್ 6ನೇ ಪುಣ್ಯಸ್ಮರಣೋತ್ಸವ

0
33

ಕಲಬುರಗಿ: ಅಜಾತ ಶತ್ರು ಎಂದೇ ಹೆಸರುವಾಸಿಯಾಗಿದ್ದ, ಕರ್ನಾಟಕ ಕಂಡ ‘ಬಡವರ’ ಮುಖ್ಯಮಂತ್ರಿ ದಿ. ಡಾ. ಎನ್ ಧರಂಸಿಂಗ್ ಅವರ 6 ನೇ ಪುಣ್ಯಸ್ಮರಣೋತ್ಸವ ಅವರ ಹುಟ್ಟೂರು ಜೇವರ್ಗಿಯ ನೆಲೋಗಿಯಲ್ಲಿ ಪರಿವಾರದವರು ಹಾಗೂ ಅಭಿಮಾನಿಗಳು ಸೇರಿಕೊಂಡು ಜುಲೈ 27 ರ ಗುರುವಾರ ಆಚರಿಸುತ್ತಿದ್ದಾರೆ.

ತಮ್ಮ ಬದುಕಿನ 81 ಸಾರ್ಥಕ ವಸಂತಗಳ ಜೊತೆಗೇ 50 ವರ್ಷಗಳ ಸುದೀರ್ಘ ರಾಜಕೀಯ ಜೀವನವನ್ನು ನಡೆಸಿದಂತಹ ಹಾಗೂ ಕಷ್ಟದಲ್ಲಿರುವವರ ಕೈ ಹಿಡಿಯುವ ಧರಂಸಿಂಗ್ ಸ್ವಭಾವವೇ ಅವರನ್ನು ಇಂದಿಗೂ ಜನಮನದಲ್ಲಿ ಉಳಿಯುವಂತೆ ಮಾಡಿದೆ. ಹಿಂದಿ ಶಿಕ್ಷಕ ವೃತ್ತಿಯ ಜೊತೆಗೇ ವಕೀಲರಾಗಿದ್ದ ಧರಂಸಿಂಗ್ 1972 ರಲ್ಲಿ ಜೇವರ್ಗಿ ಅಸೆಂಬ್ಲಿಯಿಂದ ಸ್ಪರ್ಧಿಸಿ ಗೆದ್ದವರ, ಸತತ ಗೆಲ್ಲುತ್ತಲೇ ಜನಾನುರಾಗಿ ಜನನಾಯಕರಾಗಿ ಸರ್ವರನ್ನು ಆವರಿಸಿದವರು.

Contact Your\'s Advertisement; 9902492681

ಕಲಬುರಗಿ ಜಿ¯್ಲÉಯ ಜೇವರ್ಗಿ ತಾಲೂಕಿನ ನೆಲೋಗಿ ಗ್ರಾಮ ಹುಟ್ಟೂರು. ಪ್ರಾಥಮಿಕ, ಪ್ರೌಢ, ಉನ್ನತ ಶಿP್ಷÀಣ ಕಲಬುರಗಿಯಲ್ಲಿ ಮುಗಿಸಿ ನಂತರ ಹೈದರಾಬಾದ್ ನಲ್ಲಿ ಉನ್ನತ ಕಾನೂನು ಪದವಿ ಪಡೆದು ಕಲಬುರಗಿಯಲ್ಲೇ ವಕೀಲರಾಗಿಯೂ ಸೇವೆ ಸಲ್ಲಿಸಿದವರು. ಕಾಂಗ್ರೆಸ್ ಪಕ್ಷದಲ್ಲಿ ದಿ. ಇಂದಿರಾ ಗಾಂಧಿಯವರಿಗೆ ಬಲು ಹತ್ತಿರದವರಾಗಿದ್ದ ಧರಂಸಿಂಗ್ 1972 ರಲ್ಲಿ ಜೇವರ್ಗಿ ಅಸೆಂಬ್ಲಿ ಕಣಕ್ಕಿಳಿದು ಗೆಲ್ಲುವುದರೊಂದಿಗೆ ಸತತ 11 ಬಾರಿ ಗೆಲ್ಲುತ್ತಲೇ ನಡೆದರು. ಧರಂಸಿಂಗ್ ತಮ್ಮ ರಾಜಕೀಯ ಬದುಕಲ್ಲಿ ಎದುರಿಸಿದ 13 ಸಾರ್ವತ್ರಿಕ ಚುನಾವಣೆಯಲ್ಲಿ 11 ಬಾರಿ ಗೆಲುವು ಸಾಧಿಸಿದವರು. 1972 ರ ಪ್ರಥಮ ಚುನಾವಣೆಯಿಂದ 10 ಚುನಾವಣೆ ಸತತ ಜೇವರ್ಗಿಯಿಂದಲೇ ಗೆಲುವು ಸಾಧಿಸಿ ಜನಮನ ಗೆದ್ದವರು.

ಕಲಬುರಗಿ ಮಹಾನಗರ ಪಾಲಿಕೆ ಸದಸ್ಯರಾಗಿ, ನಿರಂತರ 8 ಬಾರಿ ಜೇವರ್ಗಿ ಶಾಸಕರಾಗಿ, ಕಲಬುರಗಿ, ಬೀದರ್ ಸಂಸದರಾಗಿ, ಕೆಪಿಸಿಸಿ ಅಧ್ಯP್ಷÀರಾಗಿ, ವಿರೋಧ ಪP್ಷÀದ ನಾಯಕರಾಗಿ ಕೆಲಸ ಮಾಡಿರುವ ಧರಂಸಿಂಗ್ ಸರ್ಕಾರದಲ್ಲಿ ಸಚಿವರಾಗಿ ಗೃಹ, ಲೋಕೋಪಯೋಗಿ, ಕಂದಾಯ, ಅಬಕಾರಿ, ಸಮಾಜ ಕಲ್ಯಾಣ ಮತ್ತು ನಗರಾಭಿವೃದ್ಧಿ ಸೇರಿದಂತೆ ಪ್ರಮುಖ ಖಾತೆ ನಿಭಾಯಿಸಿದವರು.

ನೆಲೋಗಿಯಲ್ಲಿಂದು ಅವರ ಪುತ್ರ, ಜೇವರ್ಗಿ ಶಾಸಕರಾದ ಡಾ. ಅಜಯ್ ಸಿಂಗ್, ಮಾಜಿ ಎಂಎಲ್‍ಸಿ ವಿಜಯ್ ಸಿಂಗ್, ಪುತ್ರಿ ಪ್ರಿಯದರ್ಶಿನಿ ಚಂದ್ರಾಸಿಂಗ್, ಪತ್ನಿ ಫ್ರಭಾವತಿ ಧರಂಸಿಂಗ್ ಸೇರಿದಂತೆ ಕುಟುಂಬದವರು, ಅಭಿಮಾನಿಗಳೆಲ್ಲರೂ ಧರಂಸಿಂಗ್ ಅವರ ಪುಣ್ಯಸ್ಮರಣೆಯಲ್ಲಿ ಪಾಲ್ಗೊಂಡು ಅಗಲಿದ ನಾಯಕನನ್ನು ನೆನೆಯಲಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here