ಸುರಪುರ : 2022-23ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯನ್ನು ಸುರಪುರ ಮತ್ತು ಹುಣಸಗಿ ತಾಲೂಕಿನಲ್ಲಿ ಅನುಷ್ಠಾನಗೊಳಿಸಲು ಸರಕಾರ ಮಂಜೂರಾತಿ ನೀಡಿದೆ ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಗುರುನಾಥ ಭೂಸನೂರೆ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಅವರು, ಈ ಯೋಜನೆಯನ್ನು ಅನುಷ್ಠಾನಗೊಳಿಸಲು ಫ್ಯೂಚರ್ ಜನರಾಲಿ ಇಂಡಿಯಾ ಇನ್ಸುರೆನ್ಸ್ ಕಂಪನಿ ಲಿಮಿಟೆಡ್ ವಿಮಾ ಸಂಸ್ಥೆಗೆ ನಿಗದಿಪಡಿಸಲಾಗಿದೆ ಎಂದು ಹೇಳಿದ್ದಾರೆ.
ಈ ಯೋಜನೆಗೆ ಒಳಪಡುವ ವಿವಿಧ ಬೆಳೆಗಳಿಗೆ ಬೆಳೆ ಸಾಲ ಪಡೆಯುವ ಮತ್ತು ಬೆಳೆ ಸಾಲ ಪಡೆಯದ ರೈತರು ಬ್ಯಾಂಕ್‍ಗಳಿಗೆ ಫೋಷಣೆಗಳನ್ನು ಸಲ್ಲಿಸಲು ಅಂತಿಮ ದಿನಾಂಕ ನಿಗದಿಪಡಿಸಲಾಗಿದೆ. ಭತ್ತ (ನೀರಾವರಿ, ಮಳೆಯಾಶ್ರಿತ), ತೊಗರಿ (ಮಳೆಯಾಶ್ರಿತ) ಬೆಳೆಗಳಿಗೆ ವಿಮಾ ಕಂತು ತುಂಬುವ ಕೊನೆ ದಿನ ಆಗಸ್ಟ್ 16, ತೊಗರಿ (ನೀರಾವರಿ), ಹೆಸರು (ಮಳೆಯಾಶ್ರಿತ), ಹತ್ತಿ, ಸೂರ್ಯಕಾಂತಿ, ಸಜ್ಜೆ (ನೀರಾವರಿ ಮತ್ತು ಮಳೆಯಾಶ್ರಿತ) ಬೆಳೆಗಳಿಗೆ ಜುಲೈ 31 ಕೊನೆ ದಿನವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಹಾಗೂ ಅಧಿಸೂಚಿತ ಎಲ್ಲ ಬೆಳೆಗಳ ಆಯ್ಕೆಗಾಗಿ ಸಹಾಯವಾಣಿ 18002677984 ಅಥವಾ ಸಮೀಪದ ಬ್ಯಾಂಕ್‍ಗಳಿಗೆ, ರೈತ ಸಂಪರ್ಕ ಕೇಂದ್ರ, ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದಾಗಿದೆ. ಫ್ಯೂಚರ್ ಜನರಾಲಿ ಇಂಡಿಯಾ ಇನ್ಸುರೆನ್ಸ್ ಕಂಪನಿ ಲಿಮಿಟೆಡ್ ವಿಮಾ ಸಂಸ್ಥೆಯ ಪ್ರತಿನಿಧಿಗಳಾದ ಸುರಪುರ ತಾಲೂಕಿನಲ್ಲಿ ಶಿವಮೂರ್ತಿ (8867385744), ಹುಣಸಗಿ ತಾಲೂಕಿನಲ್ಲಿ ಚಂದ್ರಶೇಖರ (9611682356) ಸಂಪರ್ಕಿಸುವಂತೆ ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…