ಬಿಸಿ ಬಿಸಿ ಸುದ್ದಿ

ಮಣಿಪುರದ ಸಾಮೂಹಿಕ ಹತ್ಯೆ, ಮಹಿಳೆಯರ ಅತ್ಯಾಚಾರ ಖಂಡಿಸಿ ಪ್ರತಿಭಟನೆ

ಶಹಾಬಾದ: ಬಿಲ್ಕಿಸ್ ಬಾನು ಪ್ರಕರಣ, ಹತ್ರಾಸ್ ದಲಿತ ಹೆಣ್ಣು ಮಗಳ ಮೇಲಿನ ಅತ್ಯಾಚಾರ ಪ್ರಕರಣ ಹಾಗೂ ಮಹಿಳಾ ಕುಸ್ತಿ ಪಟುಗಳ ಮೇಲಿನ ದೌರ್ಜನ್ಯ ಪ್ರಕರಣ ಸೇರಿದಂತೆ ಅನೇಕ ಪ್ರಕರಣದ ಬಗ್ಗೆ ದೇಶದ ಪ್ರಧಾನಿ ಮಾತನಾಡದೇ ಮೌನವಾಗಿರುವುದಕ್ಕೆ ಇಂದು ಮಣಿಪೂರದಲ್ಲಿ ಮಹಿಳೆಯ ಮೇಲೆ ದೌರ್ಜನ್ಯ ನಡೆದಿದೆ ಎಂದು ಪ್ರಾಂತ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಡಾ.ಸಾಯಿಬಣ್ಣ ಗುಡುಬಾ ಹೇಳಿದರು.

ಅವರು ಬುಧವಾರ ಪ್ರಾಂತ ರೈತ ಸಂಘದ ವತಿಯಿಂದ ಮಣಿಪುರದ ಸಾಮೂಹಿಕ ಹತ್ಯೆ, ಮಹಿಳೆಯರ ಅತ್ಯಾಚಾರ ಖಂಡಿಸಿ ಆಯೋಜಿಸಲಾದ ಪ್ರತಿಭಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ಭಾರತದ ಘನತೆಯನ್ನು ಜಗತ್ತಿನ ಮುಂದೆ ನಾಶಗೊಳಿಸಿದೆ. ಇದರಿಂದ ನಾವೆಲ್ಲರೂ ತಲೆತಗ್ಗಿಸಿ ನಿಲ್ಲುವಂತಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಮೌನ ಬೆಂಬಲದೊಂದಿಗೆ ನಡೆಯುತ್ತಿರುವ ಹಿಂಸಾಚಾರದಲ್ಲಿ ನಲುಗಿರುವ ಮಣಿಪುರದ ಜನತೆ ಅತ್ಯಾಚಾರಕ್ಕೊಳಗಾದ ಮಹಿಳೆಯರ ಜತೆ ನಾವೆಲ್ಲರೂ ನಿಲ್ಲಬೇಕಿದೆ.

ಮಣಿಪುರದಲ್ಲಿ ಅಲ್ಪಸಂಖ್ಯಾತ ಸಮುದಾಯದ ಮೇಲೆ ಸರ್ಕಾರದ ಕುಮ್ಮಕ್ಕಿನಿಂದ ನಡೆಯುತ್ತಿರುವ ದೌರ್ಜನ್ಯ ಇದಾಗಿದ್ದು, ಅಲ್ಲಿನ ಬಿಜೆಪಿ ಸರ್ಕಾರ ಬಹುಸಂಖ್ಯಾತರನ್ನು ಓಲೈಸಲು ರಾಜಕೀಯ ಉದ್ದೇಶದಿಂದ ಹಿಂಸಾಚಾರಕ್ಕೆ ಕುಮ್ಮಕ್ಕು ನೀಡುತ್ತಿದೆ. ಅಲ್ಲಿ ಹಿಂಸಾಚಾರ ತಾಂಡವವಾಡುತ್ತಿದ್ದರೂ, ಪ್ರಧಾನಿ ಮೌನ ವಹಿಸಿರುವುದು,ಹಿಂಸಾಚಾರಕ್ಕೆ ಬೆಂಬಲ ನೀಡಿದಂತಿದೆ. ಅವರ ಈ ನಡೆ ಖಂಡನೀಯ ಎಂದು ಪ್ರತಿಭಟನಾಕಾರರ ಆಕ್ರೋಶ ಹೊರಹಾಕಿದರು.

ತಾಲೂಕ ಪ್ರಾಂತ ರೈತ ಸಂಘದ ಅಧ್ಯಕ್ಷ ರಾಯಪ್ಪ ಹುರಮುಂಜಿ ಮಾತನಾಡಿ, ಮಣಿಪುರದ ಬಿಜೆಪಿ ಸರ್ಕಾರ ಮತ್ತು ಕೇಂದ್ರದ ಎನ್‍ಡಿಎ ಸರ್ಕಾರವನ್ನು ಕೂಡಲೇ ವಜಾ ಮಾಡಬೇಕು. ಮಹಿಳೆಯರ ಮೇಲಿನ ದೌರ್ಜನ್ಯ, ಅತ್ಯಾಚಾರ ಮತ್ತು ಬೆತ್ತಲೆ ಮೆರವಣಿಗೆ ಪ್ರಕರಣವನ್ನ ನ್ಯಾಯಾಂಗ ತನಿಖೆ ನಡೆಸಬೇಕು. ಶಾಂತಿ ಸುವ್ಯವಸ್ಥೆ ಮತ್ತು ಸಂತ್ರಸ್ತರ ಪುನರ್ವಸತಿಗೆ ಮುಂದಾಗಿ ಸಾಮಾನ್ಯ ಸ್ಥಿತಿ ಮರು ಸ್ಥಾಪಿಸಲು ಕ್ರಮ ವಹಿಸಬೇಕು. ಮಹಿಳೆಯರ ಘನತೆ ಕಾಪಾಡುವ ಮಾನವ ಹಕ್ಕುಗಳ ರಕ್ಷಣೆ ಯಾಗಬೇಕು. ಹಿಂಸಾಚಾರ ಪೀಡಿತರಿಗೆ ಕಠಿಣ ಶಿಕ್ಷೆ ಯಾಗಬೇಕು ಎಂದು ಆಗ್ರಹಿಸಿದರು.ನಂತರ ತಹಸೀಲ್ದಾರ ಗುರುರಾಜ ಸಂಗಾವಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಈ ಪ್ರತಿಭಟನೆಯಲ್ಲಿ ವೀರಯ್ಯಾಸ್ವಾಮಿ, ಕ್ಷೇಮಲಿಂಗ ಭಂಕೂರ, ಕಾವೇರಿ ಮ್ಯಾಗೇರಿ, ಸಾಬಮ್ಮ ಕಾಳಗಿ, ಮೈತ್ರಾ ತಳವಾರ, ನಾಗಪ್ಪ ರಾಯಚೂರಕರ, ವಿಜಯಕುಮಾರ ಬೆಳಗುಂಪಿ, ಸಿದ್ದಮ್ಮ ದೇವನ, ಅರುಣ ಮ್ಯಾಗೇರಿ, ಸುಜಾತ, ಭಾಗ್ಯವಂತಿ, ಲಕ್ಷ್ಮಿ, ಸಾವಿತ್ರಿ, ಈಶಮ್ಮ ಭಾಗವಹಿಸಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

20 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago