ಅಭಿನಂದನಾ ಗ್ರಂಥ ಲೋಕಾರ್ಪಣೆ

0
11

ಕಲಬುರಗಿ: ಶರಣಬಸವೇಶ್ವರ ದೇವಸ್ಥಾನದ ಆವರಣದಲ್ಲಿರುವ ಮಹಾದಾಸೋಹ ಮಹಾಮನೆಯಲ್ಲಿ ಮಂಗಳವಾರ ಸಂಜೆ ಶರಣಬಸವೇಶ್ವರ ಸಂಸ್ಥಾನದ ಮಹಾದಾಸೋಹ ಪೀಠಾಧಿಪತಿಗಳು, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷರು ಹಾಗೂ ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಪರಮ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾಜಿಯವರ ಮಹಾದಾಸೋಹ ಜೀವನ ಆಧರಿಸಿ ಸಿದ್ಧಪಡಿಸಿರುವ ಮಹಾದಾಸೋಹ ಸಿದ್ಧಾಂತ ಶಿರೋಮಣಿ ಶೀರ್ಷಿಕೆಯ ಹಿಂದಿ ಭಾμÉಯ ಅಭಿನಂದನಾ ಗ್ರಂಥ ಲೋಕಾರ್ಪಣೆಗೊಂಡಿತು.

ಸಮಾರಂಭದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರಪರ್ಸನ್, ಶರಣಬಸವ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯ ಸದಸ್ಯರಾದ ಮಾತೋಶ್ರೀ ಡಾ. ದಾಕ್ಷಾಯಿಣಿ ಅವ್ವಾಜಿ, ಶರಣಬಸವೇಶ್ವರ ಸಂಸ್ಥಾನದ ಮಹಾದಾಸೋಹ 9ನೇ ಪೀಠಾಧಿಪತಿ ಪೂಜ್ಯ ಚಿರಂಜೀವಿ ದೊಡ್ಡಪ್ಪ ಅಪ್ಪಾಜಿ ದಿವ್ಯ ಸಾನಿಧ್ಯ ವಹಿಸಿದ್ದರು.

Contact Your\'s Advertisement; 9902492681

ಈ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಖ್ಯಾತ ಚಿಂತಕರಾದ ವಿಶ್ವಯಾತ್ರಿ ಅಲಿಗಢ (ಯು.ಪಿ) ಆಗಮಿಸಿದ್ದರು. ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ, ಶರಣಬಸವ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯ ಸದಸ್ಯರಾದ ಶ್ರೀ ಬಸವರಾಜ ದೇಶಮುಖ, ಶರಣಬಸವ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ನಿರಂಜನ ವಿ ನಿಷ್ಠಿ, ಅಭಿನಂದನಾ ಗ್ರಂಥದ ಪ್ರಧಾನ ಸಂಪಾದಕರಾದ ಡಾ. ಎಸ್. ಎಮ್. ಹೀರೆಮಠ, ಸಂಪಾದಕಿ ಮಂಗಲಾ ವಿ ಕಪರೆ, ಶರಣಬಸವ ವಿಶ್ವವಿದ್ಯಾಲಯದ ಸಮಕುಲಪತಿ ಪೆÇ್ರ. ವಿ. ಡಿ. ಮೈತ್ರಿ, ಕುಲಸಚಿವ ಡಾ. ಅನೀಲ ಕುಮಾರ ಬಿಡವೆ, ಕುಲಸಚಿವ (ಮೌಲ್ಯಮಾಪನ) ಡಾ. ಬಸವರಾಜ ಮಠಪತಿ, ಡೀನ್ ಡಾ. ಲಕ್ಷ್ಮೀ ಪಾಟೀಲ ಮಾಕಾ ಸೇರಿದಂತೆ ಇತರ ಪ್ರಮುಖರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here