ಬಿಸಿ ಬಿಸಿ ಸುದ್ದಿ

ಶರಣಬಸವ ವಿಶ್ವವಿದ್ಯಾಲಯಲ್ಲಿ ಶೈಕ್ಷಣಿಕ ವರ್ಷದಿಂದ ಬಿ.ಫಾರ್ಮ್ ಮತ್ತು ಡಿ.ಫಾರ್ಮ್ ಕೋರ್ಸ್‍ಗಳ ಪರಿಚಯ

ಕಲಬುರಗಿ; 2023-24ರ ಶೈಕ್ಷಣಿಕ ವರ್ಷದಿಂದ ಬಿ.ಫಾರ್ಮ್ ಮತ್ತು ಡಿ.ಫಾರ್ಮ್ ಎರಡು ಹೊಸ ಕೋರ್ಸ್‍ಗಳನ್ನು, ಈ ಪ್ರತಿಯೊಂದು ಕೋರ್ಸ್‍ಗಳಲ್ಲಿ 60 ವಿದ್ಯಾರ್ಥಿಗಳ ಸೇರ್ಪಡೆಯೊಂದಿಗೆ ಪರಿಚಯಿಸುವ ಮೂಲಕ ಶರಣಬಸವ ವಿಶ್ವವಿದ್ಯಾಲಯವು ಈ ಪ್ರದೇಶದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಅವಕಾಶಗಳ ಮತ್ತೊಂದು ಮಾರ್ಗವನ್ನು ತೆರೆದಿದೆ.

ಶರಣಬಸವ ವಿಶ್ವವಿದ್ಯಾಲಯದ ಕುಲಸಚಿವ ಡಾ. ಅನೀಲಕುಮಾರ ಬಿಡವೆ ಹಾಗೂ ಡೀನ್ ಡಾ. ಲಕ್ಷ್ಮೀ ಪಾಟೀಲ ಮಾಕಾ ಅವರು ಶುಕ್ರವಾರ ಕಲಬುರಗಿಯಲ್ಲಿ ಜಂಟಿ ಹೇಳಿಕೆಯಲ್ಲಿ ಈ ವಿಷಯವನ್ನು ತಿಳಿಸಿದ್ದಾರೆ. 60 ವಿದ್ಯಾರ್ಥಿಗಳ ಪ್ರವೇಶದೊಂದಿಗೆ ಎರಡು ವರ್ಷಗಳ ಡಿ.ಫಾರ್ಮ್ ಕೋರ್ಸ್‍ನ ಪ್ರಾರಂಭಕ್ಕೆ ಆರಂಭದಲ್ಲಿ ತನ್ನ ಅನುಮೋದನೆಯನ್ನು ನೀಡಿದೆ ಮತ್ತು ಈಗ ನಾಲ್ಕು ವರ್ಷಗಳ ಬಿ.ಫಾರ್ಮ್ ಕೋರ್ಸ್‍ನ ಪ್ರಾರಂಭವನ್ನು ಅನುಮೋದಿಸುವ ನಿರ್ಧಾರವನ್ನು PCI (Pharmacy Council of India) ಪ್ರಕಟಿಸಿದೆ ಎಂದು ಹೇಳಿದರು.

ಶರಣಬಸವ ವಿಶ್ವವಿದ್ಯಾಲಯವು 2023-24 ರ ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ ವಿದ್ಯಾರ್ಥಿಗಳನ್ನು ಎರಡೂ ಕೋರ್ಸ್‍ಗಳಲ್ಲಿ ಪ್ರವೇಶ ಪಡೆದುಕೊಳ್ಳಲು PCI (Pharmacy Council of India)  ಅನುಮತಿ ನೀಡಿದೆ. ಡಾ. ಅನೀಲ ಕುಮಾರ ಬಿಡವೆ ಮತ್ತು ಡಾ. ಲಕ್ಷ್ಮೀ ಪಾಟೀಲ್ ಮಾಕಾ ಮಾತನಾಡಿ, ಕಲಬುರಗಿಯಲ್ಲಿ ಇಂತಹ ಸೌಲಭ್ಯದ ಬಹುಕಾಲದ ಕನಸನ್ನು ನನಸು ಮಾಡಲು ಹಾಗೂ ಪೂರ್ಣ ಪ್ರಮಾಣದ ವೈದ್ಯಕೀಯ ವಿಜ್ಞಾನ ಕೇಂದ್ರವನ್ನು ಸ್ಥಾಪಿಸಲು ಇದು ವಿಶ್ವವಿದ್ಯಾಲಯದ ಮೊದಲ ಹೆಜ್ಜೆಯಾಗಿದೆ ಎಂದರು.

ಶರಣಬಸವ ವಿಶ್ವವಿದ್ಯಾಲಯದ ಸಂಸ್ಥಾಪಕರು ಹಾಗೂ ಕುಲಾಧಿಪತಿಗಳು, ಶರಣಬಸವೇಶ್ವರ ಸಂಸ್ಥಾನದ ಮಹಾದಾಸೋಹ ಪೀಠಾಧಿಪತಿಗಳಾದ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾಜಿ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರಪರ್ಸನ್ ಡಾ. ದಾಕ್ಷಾಯಿಣಿ ಅವ್ವಾಜಿ, ಸಂಘದ ಕಾರ್ಯದರ್ಶಿ ಶ್ರೀ ಬಸವರಾಜ ದೇಶಮುಖ ಹಾಗೂ ವಿವಿಯ ಉಪಕುಲಪತಿ ಡಾ. ನಿರಂಜನ್ ವಿ ನಿಷ್ಠಿ ಸೇರಿದಂತೆ ಇನ್ನಿತರ ಗಣ್ಯರು, ಈ ಎರಡು ಹೊಸ ಕೋರ್ಸ್‍ಗಳನ್ನು ಪ್ರಾರಂಭಿಸಲು PCI ನ ಎಲ್ಲಾ ಅವಶ್ಯಕತೆಗಳನ್ನು ಪೂರೈಸಲು ಹಗಲಿರುಳು ಶ್ರಮಿಸಿದ ವಿಶ್ವವಿದ್ಯಾಲಯದ ಇಡೀ ತಂಡವನ್ನು ಅಭಿನಂದಿಸಿದರು.

emedialine

Recent Posts

ಜಪಾನ್ ವಿ. ವಿಯಲ್ಲಿ ಪ್ರಬಂಧ ಮಂಡನೆ ಮಾಡಿದ ಡಾ. ಪಾಸೋಡಿ

ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…

45 mins ago

ಕಲಬುರಗಿ: ಡೆಂಗ್ಯೂ, ಮಲೇರಿಯಾ ರೋಗಗಳನ್ನು ನಿಯಂತ್ರಿಸಲು ಬಾಲರಾಜ್ ಗುತ್ತೇದಾರ ಆಗ್ರಹ

ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…

53 mins ago

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

3 hours ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

3 hours ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

3 hours ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

4 hours ago