ಸುರಪುರ: ನಗರ ಆರೋಗ್ಯ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಇಂದ್ರ ಧನುಷ್ ಲಸಿಕೆ ವಿತರಣೆ ಅಭಿಯಾನಕ್ಕೆ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರ ಸುಪುತ್ರ ಹಾಗೂ ಕಾಂಗ್ರೆಸ್ ಮುಖಂಡ ರಾಜಾ ವೇಣುಗೋಪಾಲ ನಾಯಕ ಜ್ಯೋತಿ ಬೆಳಗಿಸಿ ಮಗುವಿಗೆ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು,ಇಂದ್ರ ಧನುಷ್ ಲಸಿಕೆ ಎನ್ನುವುದು ಮಕ್ಕಳಿಗೆ ತುಂಬಾ ಅಗತ್ಯವಾದುದಾಗಿದೆ,ಆದ್ದರಿಂದ ಮಕ್ಕಳಿಗೆ ಈ ಲಸಿಕೆಯನ್ನು ಕೊಡಿಸುವ ಮೂಲಕ ಜನರು ಇದರ ಸದುಪಯೋಗ ಮಾಡಿಕೊಳ್ಳಬೇಕು ಎಂದರು.
ಅಲ್ಲದೆ ಸರಕಾರ ಆರೋಗ್ಯ ಇಲಾಖೆಯ ಯಾವುದೇ ಯೋಜನೆ ಜಾರಿಗೊಳಿಸಿದರು ತಾಲೂಕು ಆರೋಗ್ಯಾಧಿಕಾರಿ ಡಾ:ಆರ್.ವಿ ನಾಯಕ ಅವರು ತುಂಬಾ ಆಸಕ್ತಿಯಿಂದ ಜನರಿಗೆ ಮುಟ್ಟಿಸುವ ಕೆಲಸವನ್ನು ಮಾಡುತ್ತಾರೆ.ಇವರಿಂದ ನಮ್ಮ ತಂದೆಯವರು ಶಾಸಕರಾಗಿದ್ದಾಗ ಆರೋಗ್ಯ ಇಲಾಖೆಯ ಬಗ್ಗೆ ಯಾವುದೇ ದೂರು ಬಂದಿಲ್ಲ ಅಲ್ಲದೆ ಜನರೂ ಶಾಸಕರ ಬಳಿಗೆ ಬರುವ ಮುನ್ನವೇ ಅವರಿಗೆ ಬೇಕಾದ ಆರೋಗ್ಯ ಸೇವೆಯನ್ನು ನೀಡುವುದರಿಂದ ಡಾ:ಆರ್.ವಿ ನಾಯಕ ಅವರಿಗೆ ಧನ್ಯವಾದ ಸಲ್ಲಿಸುವುದಾಗಿ ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ತಾಲೂಕು ಆರೋಗ್ಯಾಧಿಕಾರಿ ಡಾ:ಆರ್.ವಿ ನಾಯಕ ಅವರು ಮಾತನಾಡಿ,ಇಂದ್ರ ಧನುಷ್ ಅಭಿಯಾನ ಮೂರು ತಿಂಗಳುಗಳ ಕಾಲ ನಡೆಯಲಿದೆ,ಆಗಸ್ಟ್ 7 ರಿಂದ 12ನೇ ತಾರಿಖಿನವರೆಗೆ ಈ ಅಭಿಯಾನ ನಡೆಯಲಿದೆ.ಇಂದ್ರ ಧನುಷ್ ಲಸಿಕೆಯು ಮಕ್ಕಳಿಗೆ ಮತ್ತು ಗರ್ಭೀಣಿ ಮಹಿಳೆಯರಿಗೆ ತುಂಬಾ ಅವಶ್ಯಕವಾಗಿದ್ದು ಎಲ್ಲರು ತಪ್ಪದೆ ಮಕ್ಕಳಿಗೆ ಸಲಿಕೆ ಹಾಕಿಸುವಂತೆ ತಿಳಿಸಿದರು.
ಕಾರ್ಯಕ್ರಮದ ವೇದಿಕೆ ಮೇಲೆ ತಹಸೀಲ್ದಾರ್ ವಿಜಯಕುಮಾರ ಕೆ,ನಗರಸಭೆ ಸದಸ್ಯ ನರಸಿಂಹಕಾಂತ ಪಂಚಮಗಿರಿ ಉಪಸ್ಥಿತರಿದ್ದರು. ಆರೋಗ್ಯ ಇಲಾಖೆಯ ಸಿಬ್ಬಂದಿ ಸಂಗಪ್ಪ ಚೆಟ್ಟಿ ಕಾರ್ಯಕ್ರಮ ಸ್ವಾಗತಿಸಿ,ನಿರೂಪಿಸಿ ವಂದಿಸಿದರು. ಇದೇ ಸಂದರ್ಭದಲ್ಲಿ ಇಂದ್ರ ಧನುಷ್ ಅಭಿಯಾನದ ಭಿತ್ತಿ ಪತ್ರಗಳನ್ನು ಬಿಡುಗಡೆಗೊಳಿಸುವ ಜೊತೆಗೆ ಅನೇಕ ಮಕ್ಕಳಿಗೆ ಲಸಿಕೆ ಹಾಕಲಾಯಿತು.ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಸೇರಿದಂತೆ ಅನೇಕ ಜನರು ಭಾಗವಹಿಸಿದ್ದರು.
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…
ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…