ರಸ್ತೆ ಸುರಕ್ಷತೆ -ನಿಯಮ ಪಾಲನೆ ಮಾಡಿದರೆ ಅಪಘಾತ ತಡೆಗಟ್ಟಲು ಸಾಧ್ಯ; ತಿರುಮಲೇಶ

0
22

ಶಹಾಬಾದ: ರಸ್ತೆ ಸುರಕ್ಷತೆ ಮತ್ತು ನಿಯಮಗಳನ್ನು ಪಾಲನೆ ಮಾಡಿದರೆ, ಅಪಘಾತ ಹಾಗೂ ಇನ್ನಿತರ ಹಾನಿಗಳನ್ನು ತಡೆಗಟ್ಟಲು ಸಾಧ್ಯವಿದೆ. ಮೊದಲು ವಿದ್ಯಾರ್ಥಿಗಳು ಜಾಗೃತರಾಗಿ ಎಂದು ವಾಡಿ ಪೊಲೀಸ್ ಠಾಣೆಯ ಪಿಎಸ್‍ಐ ತಿರುಮಲೇಶ ಕುಂಬಾರ ಹೇಳಿದರು.
ಅವರು ಸೋಮವಾರ ರಾವೂರ ಗ್ರಾಮದ ಮೋರಾಜಿ ದೇಸಾಯಿ ವಸತಿ ಶಾಲೆಯಲ್ಲಿ ಆಯೋಜಿಸಲಾದ ರಸ್ತೆ ಸುರಕ್ಷತೆ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ರಸ್ತೆ ಸುರಕ್ಷತೆ ಬಗ್ಗೆ ಇರುವ ನಿಯಮಗಳನ್ನು ಪಾಲನೆ ಮಾಡಿದರೆ ಬಹಳಷ್ಟು ಅಪಘಾತಗಳನ್ನು ತಡೆಗಟ್ಟಲು ಸಾಧ್ಯವಿದೆ. ಅಲ್ಲದೆ, ಎಲ್ಲರೂ ರಸ್ತೆಯ ನಿಯಮಗಳ ಬಗ್ಗೆ ಅರಿವು ಹೊಂದಿ ವಾಹನ ಚಾಲನೆ ಮಾಡಬೇಕು ಎಂದರು.18 ವರ್ಷಗಳು ತುಂಬುವವರೆಗೆ ದ್ವಿಚಕ್ರ ವಾಹನವನ್ನು ಓಡಿಸಲು ಅನುಮತಿ ಇರುವುದಿಲ್ಲ.ಒಂದು ವೇಳೆ ಕಂಡು ಬಂದರೆ ಅವರಿಗೆ ದಂಡ ಹಾಕಲಾಗುತ್ತದೆ. ಅಲ್ಲದೇ ಶಿಕ್ಷಕರು ಅಂತಹ ಮಕ್ಕಳಿಗೆ ಅನುಮತಿಸಬಾರದು.

Contact Your\'s Advertisement; 9902492681

ವಾಹನಗಳನ್ನು ಓಡಿಸುವ ಮುನ್ನ ವಾಹನ ಪರವಾನಗಿ, ವಾಹನ ವಿಮೆ, ದಾಖಲಾತಿಗಳನ್ನು ಹೊಂದಿರಬೇಕು. ಅಲ್ಲದೆ, ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಸಂಚಾರ ನಿಯಮಗಳನ್ನು ಪಾಲನೆ ಮಾಡುವುದರಿಂದ ಹೆಚ್ಚಿನ ಅನುಕೂಲವಾಗುತ್ತದೆ. ಅಮೂಲ್ಯವಾದ ಜೀವಗಳನ್ನು ಉಳಿಸಲು ಸಾಧ್ಯವಿದೆ ಎಂದು ಹೇಳಿದರು.

ಶಾಲೆಯ ಪ್ರಾಂಶುಪಾಲ ಶಶಿಧರ್.ವಿ.ಸೋನಾರ ಮಾತನಾಡಿ, ಇತ್ತಿಚಿನ ದಿನಗಳಲ್ಲಿ ರಸ್ತೆಗಳಲ್ಲಿ ಹೆಚ್ಚಿನ ವಾಹನಗಳ ಸಂಚಾರದಿಂದ ಅಪಘಾತಗಳ ಸಂಖ್ಯೆಯು ಹೆಚ್ಚಾಗುತ್ತಿದೆ. ಇದನ್ನು ತಪ್ಪಿಸಲು ರಸ್ತೆ ಸುರಕ್ಷತೆ ನಿಯಮಗಳನ್ನು ಪಾಲನೆ ಮಾಡುವುದು ಮುಖ್ಯ. ಈ ಹಿನ್ನೆಲೆಯಲ್ಲಿ ಶಾಲಾ ಕಾಲೇಜು ಹಂತದಿಂದಲೇ ರಸ್ತೆ ಸುರಕ್ಷತೆ ನಿಯಮಗಳ ಬಗ್ಗೆ ತಿಳುವಳಿಕೆ ಮೂಡಿಸಿದರೆ ಹೆಚ್ಚು ಸಹಕಾರಿಯಾಗುತ್ತದೆ ಎಂದರು.

ಸಿದ್ದು.ಬಿ, ಭೀಮಾಶಂಕರ ಇಂಗಳೆ, ನಿತಿನ್‍ಸಿಂಗ,ಪಿ.ಎಸ್.ಮೇತ್ರೆ, ಅಂಬಿಕಾ,ವಿಜಯಲಕ್ಷ್ಮಿ ಸೇರಿದಂತೆ ವಿದ್ಯಾರ್ಥಿಗಳು ಹಾಜರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here