ಬಿಸಿ ಬಿಸಿ ಸುದ್ದಿ

ಆಳಂದನಲ್ಲಿ ಯುವ ಕಲ್ಯಾಣ ಯಾತ್ರೆ ನಾಳೆ

ಆಳಂದ; ಕನ್ನಡದ ಖ್ಯಾತ ವ್ಯಕ್ತಿತ್ವ ವಿಕಸನ ಮಾತುಗಾರ ಪ್ರೊ. ಸಿದ್ದು ಯಾಪರಪರವಿ ಅವರ ಯುವ ಕಲ್ಯಾಣ ಯಾತ್ರೆ, ಉಪನ್ಯಾಸ ಹಾಗೂ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ಆಳಂದ ಪಟ್ಟಣದಲ್ಲಿ ಗುರುವಾರ ಜರುಗಲಿದೆ.

ಸೇಡಂನ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ, ವಿಕಾಸ ಅಕಾಡೆಮಿ, ಎಸ್‍ಆರ್‍ಜಿ ಫೌಂಡೇಶನ್ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ಹೊರವಲಯದಲ್ಲಿರುವ ತೋಂಟದಾರ್ಯ ಅನುಭವ ಮಂಟಪದಲ್ಲಿ ಬೆಳಿಗ್ಗೆ 11 ಗಂಟೆಗೆ ಜರುಗಲಿದೆ.

ಸಾಹಿತ್ಯ, ವಿಮರ್ಶೆ, ಜೀವನಶೈಲಿ, ಬ್ಲಾಗ್, ಕಥೆ, ಕವಿತೆ, ಫೇಸ್ಬುಕ್, ದೂರದರ್ಶನ, ಪ್ರವಾಸ ಕಥನ, ಪತ್ರಿಕೆ, ಅಂಕಣ, ನಾಟಕ, ಸಾಕ್ಷ್ಯಚಿತ್ರ, ಸಿನಿಮಾ, ಅಭಿನಯ, ಯೂಟ್ಯೂಬ್ ಮೂಲಕ ಚಿರಪರಿಚಿತರಾಗಿರುವ ಪ್ರೊ. ಸಿದ್ದು ಯಾಪಲಪರವಿ ಅವರು ಈಗಾಗಲೇ ಸಾವಿರಾರು ಉಪನ್ಯಾಸಗಳನ್ನು ನಾಡಿನಾದ್ಯಂತ ನೀಡಿ ಹೆಸರುವಾಸಿಯಾಗಿದ್ದಾರೆ.

ತಾಲೂಕಿನ ಮತ್ತು ಪಟ್ಟಣದ ಪದವಿ ಕಾಲೇಜು ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ಈ ಉಪನ್ಯಾಸದ ಪ್ರಯೋಜನ ಪಡೆಯಬೇಕು. ಶಿಕ್ಷಕರು, ಸಮಾನ ಮನಸ್ಕರು, ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡವರು, ಜೀವನದಲ್ಲಿ ಜೀವನೋತ್ಸಾಹವನ್ನು ಬಯಸುವವರಿಗಾಗಿ ಈ ವಿಶೇಷ ಉಪನ್ಯಾಸವನ್ನು ಏರ್ಪಡಿಸಲಾಗಿದೆ ಆಸಕ್ತರು ಈ ಉಪನ್ಯಾಸದ ಲಾಭವನ್ನು ಪಡೆಯಬೇಕು ಎಂದು ಆಳಂದ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಹಣಮಂತ ಶೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

8 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

10 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

17 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

17 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

18 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago