ರಾಯಚೂರು: ರಾಜ್ಯದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಶೇ 17+7 ಮೀಸಲಾತಿಯನ್ನು 9 ಶೆಡ್ಯೂಲ್ ಗೆ ಸೇರಿಸಬೇಕು ಹಾಗೂ ಪರಿಶಿಷ್ಟ ಜಾತಿಯ ಶೇ 17 ರಷ್ಟು ಮೀಸಲಾತಿಗೆ ಸಂವಿಧಾನದ ಪರಿಚ್ಛೇದ 341(3) ಬಿಲ್ ಸಂಸತ್ತಿನ ಮುಂಗಾರು ಅಧಿವಶೇನದಲ್ಲಿ ಅಂಗೀಕರಿಸಬೇಕು ಎಂದು ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾರಿ ಹೋರಾಟ ಸಮಿತಿಯ ಪದಾಧಿಕಾರಿಗಳು ಧರಣಿ ನಡೆಸಿದರು.
ಸಂಘದ ರಾಜ್ಯ ಹಾಗೂ ಜಿಲ್ಲಾ ಘಟಕದ ಪದಾಧಿಕಾರಿಗಳು ಮತ್ತು ಸಮುದಾಯದ ಮುಖಂಡರು ನಗರದ ಟಿಪ್ಪುಸುಲ್ತಾನ್ ಉದ್ಯಾನದಲ್ಲಿ ಮಂಗಳವಾರ ಧರಣಿ ನಡೆಸಿ ಜಿಲ್ಲಾಡಳಿತದ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಬಿಜೆಪಿ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯಗಳಿಗೆ ಮೀಸಲಾತಿ ಹೆಚ್ಚಳಕ್ಕೆ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ಶಿಫಾರಸ್ಸಿನಂತೆ ಪರಿಶಿಷ್ಟ ಜಾತಿಯ ಮೀಸಲಾತಿ ಶೇ 15ರಿಂದ ಶೇ 17ಕ್ಕೆ ಹಾಗೂ ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇ 3ರಿಂದ ಶೇ 7 ರಷ್ಟು ಹೆಚ್ಚಳ ಮಾಡಿ ರಾಜ್ಯದಲ್ಲಿ ಜಾರಿ ಮಾಡಲಾಗಿದೆ.ಆದರೆ ನಾಗಮೋಹನ್ ದಾಸ್ ಸಮಿತಿಯ ಒಳ ಮೀಸಲಾತಿ ಎಲ್ಲಿಯೂ ಪ್ರಸ್ತಾಪ ಮಾಡಿಲ್ಲ ಎಂದು ದೂರಿದರು.
ಮೀಸಲಾತಿ ಪ್ರಮಾಣವನ್ನು ಶೇ 50 ರಷ್ಟು ಹೆಚ್ಚಳ ಆಗಬಾರದು ಎಂದು ಸುಪ್ರಿಂ ಕೋರ್ಟ್ ನಿಯಮವಿದ್ದು ಮೀಸಲಾತಿ ತಿದ್ದುಪಡಿ ತರಲು ಶೆಡ್ಯೂಲ್ 9 ಗೆ ಸೇರಿಸಲು ಹಿಂದಿನ ರಾಜ್ಯ ಬಿಜೆಪಿ ಸರ್ಕಾರ ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದು ಕೂಡಲೇ ಸಂಸತ್ತಿನ ಅಧಿವೇಶನದಲ್ಲಿ ಬಿಲ್ ಮಂಡಿಸಬೇಕು ಎಂದು ಒತ್ತಾಯಿಸಿದರು.
ಈ ಹಿಂದೆ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಕೇಂದ್ರ ನಾಯಕರು ಒಳ ಮೀಸಲಾತಿಗೆ ಸಂಬಂಧಿಸಿದಂತೆ ನೀಡಿದ ಭರವಸೆಗಳು ಸುಳ್ಳಾಗಿದ್ದು, ಸಂಸತ್ತಿನ ಅಧಿವೇಶನದಲ್ಲಿ ಸಚಿವ ನಾರಾಯಣ ಸ್ವಾಮಿ ಅವರು ಒಳ ಮೀಸಲಾತಿ ಕುರಿತು ಕೇಳಿದ ಪ್ರಶ್ನೆಗೆ ಸಂವಿಧಾನದಲ್ಲಿ ಒಳ ಮೀಸಲಾತಿಗೆ ಅವಕಾಶವಿಲ್ಲ ಎಂದು ಗೊತ್ತಾಗಿದೆ. 2008ರಲ್ಲಿ ನ್ಯಾ. ಉಷಮೇಹರ ಅವರು 341(3)ಗೆ ತಿದ್ದುಪಡಿ ಅಗತ್ಯವಿದೆ. ಈ ಎರಡು ಬಿಲ್‍ಗಳನ್ನು ತಿದ್ದುಪಡಿಗಾಗಿ ಮಂಡಿಸಬೇಕು ಎಂದು ಮನವಿ ಮಾಡಿದರು.
ಪ್ರತಿಭಟನೆಯಲ್ಲಿ ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್ ಮಾರಪ್ಪ ವಕೀಲ, ರಾಜ್ಯ ಸಂಚಾಲಕರಾದ ಶಿವರಾಯ ಅಕ್ಕರಕಿ, ಜೆ. ಬಿ ರಾಜು, ರಾಘವೇಂದ್ರ ಬೋರೆಡ್ಡಿ, ಹನುಮಂತಪ್ಪ ಮನ್ನಾಪೂರ, ಹೇಮರಾಜ ಅಸ್ಕಿಹಾಳ, ಹನುಮಂತ, ವಿ. ರಾಮು, ಹುಲಿಗೆಪ್ಪ, ಚಂದ್ರು, ಭಂಡಾರಿ, ಆಂಜನೇಯ, ಪ್ರಸಾದ್ ಭಂಡಾರಿ, ತಾಯಪ್ಪ ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕ ರೈತಾಪಿ ಸಂಘದ ಜಿಲ್ಲಾ ಅಧ್ಯಕ್ಷರನ್ನಾಗಿ ಬಳಿರಾಮ ರಾಮಜಿ ಚೌವ್ಹಾಣ, ಹಾಗೂ ತಾಲೂಕು ಅಧ್ಯಕ್ಷರನ್ನಾಗಿ ಶಿವರಾಜ ದೇಶಮುಖಪ್ಪಾ…
ಕಲಬುರಗಿ: ಪುರಾತನ ಕಾಲದಲ್ಲಿ ನಾಗಾವಿ ಪ್ರದೇಶವು ದಕ್ಷಿಣ ಭಾರತದಲ್ಲಿ ನಾಗಾವಿ ಪ್ರಸಿದ್ದಿ ಪಡೆದ ವಿಶ್ವ ವಿದ್ಯಾಲಯವಾಗಿತ್ತು ಎಂದು ತಹಸಿಲ್ದಾರ್ ನಾಗಯ್ಯ…
ಕಲಬುರಗಿ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ದಿ.1-1-2025 ಅರ್ಹತಾ ದಿನವನ್ನಾಗಿ ಪರಿಗಣಿಸಿಕೊಂಡು ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ನಡೆಸಲಾಗುತ್ತಿದ್ದು,…
ಕಲಬುರಗಿ: ವಿದ್ಯಾರ್ಥಿಗಳು ಜಿಲ್ಲೆಯ ಎಲ್ಲಾ ವಿಕಲಚೇತನರಿಗೆ ಹೆಚ್ಚಿನ ಸ್ಥಾನಮಾನಗಳನ್ನು ಸಿಗಬೇಕು ಹಾಗೂ ಎಲ್ಲ್ಲಾ ಕ್ರೀಡೆಗಳಲ್ಲಿ ಭಾಗವಹಿಸಿ ಜಯಸಾಧಿಸಬೇಕು ಎಂದು ಅಪರ…
ಪ್ರಜ್ವಲ್,ಧೀರಜ್ ಸೋಲಿಸಿ ಗೆದ್ದು ಬೀಗಿದ ಬೊಬ್ರೋಬ್ ಹಾಗೂ ಸುಲ್ತಾನೋವ್ ಕಲಬುರಗಿ, ನವೆಂಬರ್ ೨೧ : ಐಟಿಎಫ್ ಕಲಬುರಗಿ ಓಪನ್ ಟೆನಿಸ್…
ಕಲಬುರಗಿ: ವೀರಭದ್ರೇಶ್ವರ ಸಾಂಸ್ಕೃತಿಕ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ರಿ ಆಳಂದ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು…