ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ಸಂಸ್ಥೆ, ಸಮಾಜಮುಖಿ‌ ಕೆಲಸಕ್ಕೆ ಸದಾ ಸಿದ್ದ; ಸಚಿವ ಖರ್ಗೆ

ಬೆಂಗಳೂರು; ಗ್ರಾಮೀಣ ಅಭಿವೃದ್ಧಿಗೆ ಸಂಬಂಧಿಸಿದಂತೆ ರಾಜ್ಯದ ಮೂಲ ಸೌಕರ್ಯ ಅಭಿವೃದ್ಧಿಗೊಳಿಸುವ ಕಾಮಗಾರಿಗಳನ್ನು ನಿರ್ವಹಿಸುತ್ತಿರುವ ಕರ್ನಾಟಕ ರೂರಲ್ ಇನ್ಫ್ರಾಸ್ಟ್ರಕ್ಷರ್ ಡೆವಲಪ್ಮೆಂಟ್ ಲಿಮಿಟೆಡ್ (KRIDL) ಸಂಸ್ಥೆ ಐವತ್ತು ವರ್ಷಗಳ ದೀರ್ಘ ಕಾಲ ತನ್ನನ್ನು ಸೇವೆಯಲ್ಲಿ ತೊಡಗಿಸಿಕೊಂಡಿದ್ದು, ಇದೀಗ ತನ್ನ ಸ್ವರ್ಣಮಹೋತ್ಸವದ ಹಾದಿಯಲ್ಲಿ ಮುಂದುವರೆದಿದೆ ಎಂದು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ಹೇಳಿದರು.

ಸಂಸ್ಥೆಯ ವತಿಯಿಂದ ರೂ 5 ಕೋಟಿ ಮೊತ್ತದ ಚೆಕ್ಕನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಹಸ್ತಾಂತರಿಸಿ ಅವರು ಮಾತನಾಡುತ್ತಿದ್ದರು.

1971ರಲ್ಲಿ ಅಂದಿನ‌ ಮುಖ್ಯಮಂತ್ರಿ ರಾಮಕೃಷ್ಣ ಹೆಗ್ಡೆ ಅವರ ಸಲಹೆ ಮೇರೆಗೆ 15 ಇಂಜಿನಿಯರುಗಳೊಂದಿಗೆ ‘ಕರ್ನಾಟಕ ಭೂಸೇನಾ’ ಹೆಸರಿನಲ್ಲಿ ನಿರ್ದೇಶನಾಲಯ ಅಸ್ತಿತ್ವಕ್ಕೆ ಬಂದಿತು. 1974ರಲ್ಲಿ ಅಂದಿನ ಮುಖ್ಯಮಂತ್ರಿಯಾಗಿದ್ದ ದೇವರಾಜ ಅರಸು ಅವರ ಆಶಯದಂತೆ ನಿರ್ದೇಶನಾಲಯ 9ನೇ ಆಗಸ್ಟ್ 1974ರ ಆಗಸ್ಟ್ 9ರಂದು ‘ ಭೂಸೇನಾ ನಿಗಮ’ ಹೆಸರಿನಲ್ಲಿ ಪರಿವರ್ತನೆ ಹೊಂದಿ ಅರಸು ಅವರೇ ನಿಗಮದ ಪ್ರಥಮ ಅಧ್ಯಕ್ಷರಾಗಿದ್ದರು. 35 ವರ್ಷಗಳ ಕಾಲ ಭೂಸೇನಾ ನಿಗಮವಾಗಿದ್ದ ಈ ಸಂಸ್ಥೆ ಮತ್ತೊಮ್ಮೆ 2009ರ ಆಗಸ್ಟ್ 6ರಂದು ‘ಕರ್ನಾಟಕ ರೂರಲ್ ಇನ್ಫ್ರಾಸ್ಟçಕ್ಚರ್ ಡೆವಲಪ್ಮೆಂಟ್ ಲಿಮಿಟೆಡ್ (KRIDL) ಎಂದು ಪುನರ್ ನಾಮಕರಣಗೊಂಡಿದೆ. ಪ್ರಸ್ತುವ ಸಚಿವ ಪ್ರಿಯಾಂಕ್ ಖರ್ಗೆ ಅಧ್ಯಕ್ಷರಾಗಿದ್ದಾರೆ.

ಸರ್ಕಾರದಿಂದ ನಾಮ ನಿರ್ದೇಶನಗೊಂಡ ಆಡಳಿತ ಸಂಸ್ಥೆಯು ಮಂಡಳಿಯ ಕಾರ್ಯಚಟುವಟಿಕೆಗಳನ್ನು ನಿರ್ವಹಿಸುತ್ತಿದ್ದು, ವ್ಯವಸ್ಥಾಪಕ ನಿರ್ದೇಶಕರು ಸಂಸ್ಥೆಯ ಕಾರ್ಯಭಾರವನ್ನು ನಿರ್ವಹಿಸುತ್ತಾರೆ. ಮೆಮೊರಾಂಡಮ್ ಆಫ್ ಅಸೋಸಿಯೇಷನ್ನ ಆರ್ಟಿಕಲ್ 72ರನ್ವಯ ಆಡಳಿತ ಮಂಡಳಿಗೆ ಗರಿಷ್ಠ 12 ನಿರ್ದೇಶಕರುಗಳನ್ನು ನೇಮಿಸಲು ಅವಕಾಶ ಕಲ್ಪಿಸಲಾಗಿದೆ.

ಸಂಸ್ಥೆ ಪ್ರಸ್ತುತ 15 ಕೋಟಿ ರೂ.ಗಳ ಅಧಿಕೃತ ಷೇರು ಬಂಡವಾಳ ಹೊಂದಿದ್ದು 344.92 ಕೋಟಿ ರೂ. ಮೌಲ್ಯದ 43 ಸ್ವಂತ ಆಸ್ತಿಗಳನ್ನು ಹೊಂದಿದೆ. ರಾಜ್ಯದ ಸಾರ್ವಜನಿಕ ಉದ್ದಿಮೆಗಳ ಅಧೀನದಲ್ಲಿ ಲಾಭಗಳಿಸುತ್ತಿರುವ ಕೆಲವೇ ಕೆಲವು ನಿಗಮ/ಮಂಡಳಿಗಳಲ್ಲಿ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮ ನಿಯಮಿತ ಸಂಸ್ಥೆಯು ಒಂದಾಗಿದೆ.

ಸಂಸ್ಥೆಯ ಕೇಂದ್ರ ಕಛೇರಿ ಬೆಂಗಳೂರಿನಲ್ಲಿದ್ದು, ರಾಜ್ಯಾದ್ಯಂತ 6 ವಲಯ, 40 ವಿಭಾಗ ಮತ್ತು 86 ಉಪ-ವಿಭಾಗ ಕಛೇರಿಗಳನ್ನು ಹೊಂದಿದೆ. ಸಂಸ್ಥೆಯಲ್ಲಿ ಖಾಯಂ ಮತ್ತು ಹೊರಗುತ್ತಿಗೆ ಸಿಬ್ಬಂದಿಗಳು ಸೇರಿ ಒಟ್ಟು 1801 ಮಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. 74 ಸಿಬ್ಬಂದಿಗಳನ್ನು ನೇರ ನೇಮಕಾತಿ ಮುಖಾಂತರ ನೇಮಕ ಮಾಡಿಕೊಳ್ಳುವ ಪ್ರಕ್ರಿಯೆ ಅಂತಿಮ ಘಟ್ಟದಲ್ಲಿದ್ದು, ಇನ್ನೂ 128 ಸಿಬ್ಬಂದಿಗಳನ್ನು ನೇರ ನೇಮಕಾತಿ ಮುಖಾಂತರ ಭರ್ತಿ ಮಾಡಿಕೊಳ್ಳಲು ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ.

ಸಂಸ್ಥೆಯು ಕಳೆದ 2022-23 ನೇ ಸಾಲಿನಲ್ಲಿ ಅಂದಾಜು 3277.39 ಕೋಟಿ ರೂ. ವಹಿವಾಟುವನ್ನು ನಡೆಸಿದ್ದು, ಸುಮಾರು 257. ಕೋಟಿ ರೂ.ಗಳ ಲಾಭ ನಿರೀಕ್ಷಿಸಲಾಗಿದೆ. 2023-24 ನೇ ಸಾಲಿನಲ್ಲಿ ಅಂದಾಜು 3730 ಕೋಟಿ ರೂ. ವಹಿವಾಟಿನ ಗುರಿಯನ್ನು ಸಂಸ್ಥೆ ಹೊಂದಿದೆ.

ರಾಜ್ಯದ ಮೂಲ ಸೌಕರ್ಯ ಅಭಿವೃದ್ಧಿಗೊಳಿಸುವುದರ ಜೊತೆ ಅನೇಕ ಜನಪರ ಸಮಾಜಮುಖಿ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳುವಲ್ಲಿ ಸಂಸ್ಥೆಯು ಮುಂಚೂಣಿಯಲ್ಲಿದ್ದು, ಸಂಸ್ಥೆಯು ತನ್ನ ಲಾಭದ ಶೇ.2 ರಷ್ಟನ್ನು ಸಿ.ಎಸ್.ಆರ್ ಚಟುವಟಿಕೆಗಳಲ್ಲಿ ವಿನಿಯೋಗಿಸುತ್ತಿದೆ. ಕಳೆದ 8 ವರ್ಷಗಳಲ್ಲಿ 4195.73 ಲಕ್ಷ ರೂ.ಗಳನ್ನು ಸಿ.ಎಸ್.ಆರ್ ಚಟುವಟಿಕೆಗಳಿಗೆ ವಿನಿಯೋಗ ಮಾಡಲಾಗಿದೆ ಎಂದು ಪ್ರಿಯಾಂಕ್ ವಿವರಿಸಿದರು.

ಸಂಸ್ಥೆ ಪ್ರತಿ ವರ್ಷ ಸಹ ತಾನು ಗಳಿಸಿದ ಲಾಭದಲ್ಲಿ ಮಾನ್ಯ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆಯನ್ನು ನೀಡುತ್ತಾ ಬಂದಿದ್ದು, ಕಳೆದ 5 ವರ್ಷಗಳಲ್ಲಿ ಒಟ್ಟು 35 ಕೋಟಿ ರೂ. ದೇಣಿಗೆಯನ್ನು ನೀಡಲಾಗಿದೆ. 1974 ರಿಂದ ಇಲ್ಲಿಯವರೆಗೆ ಕರ್ನಾಟಕ ಗ್ರಾಮೀಣ ಅಭಿವೃದ್ಧಿ ನಿಗಮ ನಿಯಮಿತ ಸಂಸ್ಥೆಯು ಕರ್ನಾಟಕ ಮೂಲಸೌಕರ್ಯ ನಿರ್ಮಾಣದಲ್ಲಿ ಸಾರ್ಥಕ 49 ವರ್ಷಗಳನ್ನು ಪೂರೈಸಿ 50ನೇ ಸುವರ್ಣ ಮಹೋತ್ಸವವನ್ನು ಆಚರಿಸುತ್ತಿರುವ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ರೂ 5 ಕೋಟಿ ದೇಣಿಗೆಯ ಚೆಕ್ಕನ್ನು ಇಂದು ಹಸ್ತಾಂತರಿಸಲಾಯಿತು ಖರ್ಗೆ ಹೇಳಿದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

9 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

11 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

12 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

12 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

12 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

12 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420