ಎಸ್.ಬಿ ಕಲಾ ಮಹಾವಿದ್ಯಾಲಯ: ಏಳು ದಿನಗಳ ಎನ್ಎಸ್ಎಸ್ ಶಿಬಿರ ಸಮಾರೋಪ

ಕಲಬುರಗಿ: ಇಲ್ಲಿನ ಶರಣಬಸವೇಶ್ವರ ಕಲಾ ಮಹಾವಿದ್ಯಾಲಯದ ವತಿಯಿಂದ ಕಳೆದ ಒಂದು ವಾರದಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ಸೇವಾ ಯೋಜನೆ ಶಿಬಿರಕ್ಕೆ ಗುರುವಾರ ಸಮಾರೋಪಗೊಂಡಿತು.

ನಗರದ ಶರಣಬಸವೇಶ್ವರ ಕಲಾ ಮಹಾವಿದ್ಯಾಲಯ ಸಭಾಂಗಣದಲ್ಲಿ ಆಯೋಜಸಿದ ಸಮಾರೋಪ ಕಾರ್ಯಕ್ರಮದಲ್ಲಿ ಎಸಿಪಿ ಬೂತೇಗೌಡ ವಿಶೇಷ ಅತಿಥಿಯಾಗಿ ಆಗಮಿಸಿ ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಮನೋಭಾವನೆ ರೂಢಿಸಿಕೊಳ್ಳಬೇಕು. ಶಾಲಾ-ಕಾಲೇಜು ಹಂತಗಳಲ್ಲಿ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ, ಅವಗಳಿಗೆ ಪೂರ್ವಸಿದ್ಧತೆ ಕೈಗೊಳ್ಳಬೇಕು. ಭವಿಷ್ಯದ ಜೀವನ ರೂಪಿಸಿಕೊಳ್ಳಲು ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಪೂರ್ವ ಸಿದ್ಧತೆ ಜತಗೆ ಜೀವನದಲ್ಲಿ ಶಿಸ್ತನ ಅಳವಡಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಪಠ್ಯಪುಸ್ತಕ ಜತೆಗೆ ಸ್ಪರ್ಧಾತ್ಮಕ ಪುಸ್ತಕಗಳ ಅಧ್ಯಯನಕ್ಕೂ ಒತ್ತು ನೀಡಬೇಕು. ಉಪನ್ಯಾಸಕರಿಂದ ಸೂಕ್ತ ಮಾರ್ಗದರ್ಶನ ಪಡೆದುಕೊಂಡು ಭವಿಷ್ಯದಲ್ಲಿ ಉನ್ನತ ಸ್ಥಾನಕ್ಕೆ ಏರಬೇಕು ಎಂದು ತಿಳಿಸಿದರು.

ಮಹಾವಿದ್ಯಾಲಯದ ಎನ್ಎಸ್ಎಸ್ ಅಧಿಕಾರಿಯ ಶಶಿಕಲಾ ಬಿರಾದರ್ ಮಾತನಾಡಿ, ಎನ್ಎಸ್ಎಸ್ ಶಿಬಿರವು ವಿದ್ಯಾರ್ಥಿಗಳಲ್ಲಿ ಕಟ್ಟುನಿಟ್ಟಿನ ನಿಯಮ ಪಾಲಿಸುವ ಕುರಿತು ತಿಳುವಳಿಕೆ ನೀಡುತ್ತದೆ. ಇದನ್ನೇ ನಿಮ್ಮ ಮುಂದಿನ ಜೀವನದಲ್ಲಿ ಅಳವಡಿಸಿಕೊಂಡು ಭವಿಷ್ಯ ಉಜ್ವಲವಾಗಿಸಿಕೊಳ್ಳಿ ಎಂದು ಹಾರೈಸಿದರು.

ಏಳು ದಿನಗಳ ರಾಷ್ಟ್ರೀಯ ಸೇವಾ ಯೋಜನೆ ಶಿಬಿರದಲ್ಲಿ ಕೃಷ್ಣ, ಭೀಮಾ, ಶರಾವತಿ, ಕಾವೇರಿ, ಅಮರ್ಜಾ ಎಂದು ಐದು ತಂಡಗಳಲ್ಲಿ ವಿದ್ಯಾರ್ಥಿಗಳನ್ನು ವಿಭಾಗಿಸಿ ಸ್ವಚ್ಛತೆ ಕಾರ್ಯ ಶ್ರಮದಾನ ಹಾಗೂ ವಿವಿಧ ಸಂಸ್ಕೃತಿಕ ಚಟುವಟಿಕೆಗಳ ಮೂಲಕ ತರಬೇತಿ ನೀಡಲಾಯಿತು.

ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಸುರೇಶಕುಮಾರ್ ನಂದಗಾವ್ ಅವರು ಅಧ್ಯಕ್ಷತೆ ವಹಿಸಿದರು. ಎನ್ಎಸ್ಎಸ್ ಶಿಬಿರಾರ್ಥಿಗಳಾದ ಕರಣ್ ರಾಠೋಡ್, ವಿನೋದ್ ಕುಮಾರ್ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ವಿದ್ಯಾರ್ಥಿನಿ ಭೂಮಿಕಾ ಕಾರ್ಯಕ್ರಮ ನಿರೂಪಣೆ ಮಾಡಿದರು. ಸ್ವಾಗತ ವಿನೋದ್ ಕುಮಾರ್, ಸುಷ್ಮ ವಂದನಾರ್ಪಣೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಹಾವಿದ್ಯಾಲಯದ ಎಲ್ಲಾ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ಏನ್ಎಸ್ಎಸ್ ಶಿಬಿರವು ವಿದ್ಯಾರ್ಥಿಗಳಲ್ಲಿ ಶ್ರಮದಾನದ ಜತೆಗೆ ಶಿಸ್ತು ಮತ್ತು ಸಂಯಮಗಳನ್ನು ಬೆಳೆಸುತ್ತದೆ. ವ್ಯಕ್ತಿತ್ವ ವಿಕಾಸನಕ್ಕೆ ಮಾರ್ಗದರ್ಶನ ನೀಡಿ ರಾಷ್ಟ್ರೀಯ ಭಾವೈಕ್ಯತೆ ಬೆಳೆಸಿಕೊಂಡು ಸಂಘಟಿತ ಹೋರಾಟಕ್ಕೆ ಅಣಿಯಾಗಿಸುತ್ತದೆ.- ಡಾ.ಸುರೇಶಕುಮಾರ್ ನಂದಗಾವ್, ಶರಣಬಸವೇಶ್ವರ ಕಲಾ ಮಹಾವಿದ್ಯಾಲಯ ಪ್ರಾಚಾರ್ಯರು.
emedialine

Recent Posts

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

2 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

2 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

4 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

15 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

17 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

18 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420