ಸಂಸದರು ಏಮ್ಸ್ ಸ್ಥಾಪನೆಗೆ ಕೇಂದ್ರದ ಮೇಲೆ ಒತ್ತಡ ಹೇರಲಿ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ‌ ಅಥವಾ ರಾಯಚೂರು ಜಿಲ್ಲೆಯಲ್ಲಿ ಏಮ್ಸ್ ಸ್ಥಾಪಿಸಬೇಕೆಂಬುದು ಬಹಳ ದಿನದಿಂದ ಇಲ್ಲಿನ ಜನರ ಕೂಗಿದೆ. ಈ ನಿಟ್ಟಿನಲ್ಲಿ ಪ್ರದೇಶದ ಚುನಾಯಿತ ಸಂಸದರು ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಬೇಕು ಎಂದು ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಶುಕ್ರವಾರ ಇಲ್ಲಿನ ಡಿ.ಸಿ. ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಯಚೂರು ಜಿಲ್ಲೆ ನೀತಿ ಆಯೋಗದ ಮಹತ್ವಾಕಾಂಕ್ಷೆ ಜಿಲ್ಲೆಯಲ್ಲಿ ಒಂದಾಗಿದೆ. ಕಲಬುರಗಿಯಲ್ಲಿನ ಇ.ಎಸ್.ಐ.ಸಿ. ಆಸ್ಪತ್ರೆ, ರಾಯಚೂರಿನ ಓಪೆಕ್ಸ್ ಆಸ್ಪತ್ರೆ ಕಟ್ಟಡದ‌ಜಿತೆ ಸಕಲ ಮೂಲಸೌಕರ್ಯವಿದ್ದು, ಇದನ್ನೇ ಏಮ್ಸ್ ಗೆ ಮೇಲ್ದರ್ಜೇಗೇರಿಸಬಹುದು. ಈ ಭಾಗದ ಒಳಿತಿಗೆ ಮತ್ತು ಪ್ರಗತಿಗೆ ಸಂಸದರು‌ ಮುಂದಾಗಬೇಕು ಎಂದರು.

ಕೆ.ಕೆ.ಆರ್.ಡಿ.ಬಿ. ಮಂಡಳಿ ಪೂರ್ಣ ಪ್ರಮಾಣದಲ್ಲಿ ಅಸ್ತಿತ್ವಕ್ಕೆ: ಕೆ.ಕೆ.ಅರ್.ಡಿ.ಬಿ. ಮಂಡಳಿಗೆ ಜಿಲ್ಲೆಯವರೇ ಆದ ಜೇವರ್ಗಿ ಶಾಸಕ ಡಾ. ಅಜಯ್ ಸಿಂಗ್ ಅವರನ್ನು ನೇಮಿಸಿದಲ್ಲದೆ, ಇತರೆ‌ 10 ಜನ‌ ಜನಪ್ರತಿನಿಧಿಗಳನ್ನು ನೇಮಿಸಿ ಪೂರ್ಣ ಪ್ರಮಾಣದಲ್ಲಿ ಅಸ್ತಿತ್ವಕ್ಕೆ ತಂದಿರುವುದು ಸಂತಸವಾಗಿದೆ. ಡಾ.ಅಜಯ್ ಸಿಂಗ್ ಅವರು, ಮಂಡಳಿ ಮತ್ತು ಪ್ರದೇಶದವನ್ನು ಅಭಿವೃದ್ದಿಯತ್ತ ಮುನ್ನೆಡೆಸಲು ಸಮರ್ಥರಿದ್ದಾರೆ. ಇತ್ತೀಚೆಗೆ ಯೋಜನಾ ಸಚಿವ ಡಿ.ಸುಧಾಕರ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಹಿಂದಿನ ಸರ್ಕಾರ ಮಂಡಳಿ‌ಯ ವಿವೇಚನೆಗೆ ಶೇ.26 ರಷ್ಟು ಅನುದಾನ ನೀಡುತ್ತಿತ್ತು. ಅದನ್ನು ನಮ್ಮ ಸರ್ಕಾರ ಶೇ.96ಕ್ಕೆ ಹೆಚ್ಚಿಸಿದೆ. ಈ ಮೂಲಕ ಮಂಡಳಿ ಬಲವರ್ಧನೆಯೂ ಮಾಡಲಾಗಿದೆ ಎಂದರು.

ಕಲುಷಿತ ನೀರು ಸೇವನೆ ಪ್ರಕರಣ, ವಾಟರ್ ಆಡಿಟ್ ಕಮಿಟಿ ರಚನೆ:ಇತ್ತೇಚೆಗೆ ಚಿತ್ರದುರ್ಗ, ಮೊನ್ನೆ ರಾಯಚೂರು ಜಿಲ್ಲೆಯಲ್ಲಿ ಕಲುಷಿತ ನೀರು ಸೇವನೆಯಿಂದ ಅಸ್ವಸ್ಥರಾಗಿರುವ ಪ್ರಕರಣಗಳು ವರದಿಯಾದ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಆರ್.ಡಿ.ಪಿ.ಆರ್. ಇಲಾಖೆಯಿಂದ ಆರ್.ಓ.ಪ್ಲ್ಯಾಂಟ್ ಸೇರಿದಂತೆ ಇತರೆ ನೀರು ಕುಡಿಯಲು ಯೋಗ್ಯ ಇರುವ ಕುರಿತು ಅಧ್ಯಯನಕ್ಕೆ “ವಾಟರ್ ಆಡಿಟ್ ಕಮಿಟಿ” ರಚಿಸಲಾಗುವುದು.

ಈ ತಂಡವು ಅಧ್ಯಯನ ನಡೆಸಿ ಒಂದು ತಿಂಗಳ ಒಳಗಾಗಿ ವರದಿ ನೀಡಲಿದೆ. ನಂತರ ಈ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದ ಸಚಿವ ಪ್ರಿಯಾಂಕ್ ಖರ್ಗೆ ಅವರು, ಜಲ್ ಜೀವನ್ ಮಿಷನ್ ಯೋಜನೆಯಡಿ ಎಲ್ಲಾ ಕಡೆ ಕಾಮಗಾರಿ ಕಳಪೆಯಾಗಿಲ್ಲ. ಕೆಲವು ಕಡೆ ಆಗಿದ್ದು, ಮೂರನೇ ತಂಡದಿಂದ ತನಿಖೆ ಮಾಡಿಸಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.

emedialine

Recent Posts

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

2 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

13 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

15 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

16 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

16 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

16 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420