ಕಲಬುರಗಿ: ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಪೂಜ್ಯ ಮಾತೋಶ್ರೀ ದಾಕ್ಷಾಯಿಣಿ ಎಸ್ ಅಪ್ಪ ಅವರಿಗೆ ಶರಣಬಸವ ವಿಶ್ವವಿದ್ಯಾಲಯ ಮತ್ತು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ವತಿಯಿಂದ ಅಭಿನಂದನಾ ಸಮಾರಂಭವನ್ನು ಅ. ೨೨ರಂದು ಸಂಜೆ ೫ಕ್ಕೆ ಶರಣಬಸವ ಶತಮಾನೋತ್ಸವ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಪೂಜ್ಯ ಅವ್ವನವರು ಬಸವ ಸಮಿತಿಯ ಮಹಾದೇವಿ ಅಕ್ಕಗಳ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದ ನಿಮಿತ್ತ ಈ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಶರಣಬಸವೇಶ್ವರ ಸಂಸ್ಥಾನದ ಅಧ್ಯಕ್ಷರಾದ ಪರಮ ಪೂಜ್ಯ ಡಾ. ಶರಣಬಸವಪ್ಪ ಅಪ್ಪ ಈ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸುವರು. ಬಸವ ಸಮಿತಿಯ ಕಲಬುರಗಿ ಘಟಕದ ಅಧ್ಯಕ್ಷರಾದ ಡಾ. ವಿಲಾಸವತಿ ಖೂಬಾ ಮತ್ತು ಭಾಲ್ಕಿ ಶಾಂತಿವರ್ಧಕ ಶಿಕ್ಷಣ ಸಂಸ್ಥೆಯ ನಿರ್ದೇಶಕರಾದ ಡಾ. ಗೀತಾ ಈಶ್ವರ ಖಂಡ್ರೆ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ನೇತೃತ್ವ ಹಾಗೂ ಶರಣಬಸವ ವಿಶ್ವವಿದ್ಯಾಲಯದ ಕುಲಪತಿ ಡಾ. ನಿರಂಜನ ವ್ಹಿ. ನಿಷ್ಠಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಬಸವ ಸಮಿತಿಯ ಕಲಬುರಗಿ ಘಟಕದ ಉಪಾಧ್ಯರಾದ ಡಾ. ಜಯಶ್ರೀ ದಂಡೆ ಪ್ರಮುಖ ಭಾಷಣ ಮಂಡಿಸಲಿದ್ದಾರೆ. ಮಹಾದೇವಿ ಅಕ್ಕಗಳ ಸಮ್ಮೇಳನದ ಗೌರವಾಧ್ಯಕ್ಷರಾದ ಶರಣಮ್ಮ ಕಲಬುರಗಿ, ಮಹಾದೇವಿ ಅಕ್ಕಗಳ ಸಮ್ಮೆಳನದ ಕಾರ್ಯದರ್ಶಿ ಅನುಸುಯಾ ನಡಕಟ್ಟಿ ಗೌರವಉಪಸ್ಥಿತರಾಗಿ ಆಗಮಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.