ಸ್ವಾತಂತ್ರ್ಯ ಯೋಧರಿಗೆ ಗೌರವ ಸಲ್ಲಿಸಿದ ಜಿಲ್ಲಾಡಳಿತ

ಕಲಬುರಗಿ: ಸ್ವಾತಂತ್ರ್ಯ ‌ದಿನಾಚರಣೆ ಹಿನ್ನೆಲೆಯಲ್ಲಿ ಸೋಮವಾರ ನಗರದ ಜೇವರ್ಗಿ ರಸ್ತೆಯ ಎನ್.ಜಿ.ಓ. ಕಾಲೋನಿ ನಿವಾಸಿಯಾಗಿರುವ ಸ್ವಾತಂತ್ರ್ಯ ಹೋರಾಟಗಾರ ರಾಮಾಚಾರ್ಯ ನವಲಿ (95) ಅವರ ಮನೆಗೆ ಅಧಿಕಾರಿಗಳೊಂದಿಗೆ ತೆರಳಿದ ಡಿ.ಸಿ. ಬಿ.ಫೌಜಿಯಾ ತರನ್ನುಮ್ ಅವರು ನವಲಿ ಅವರಿಗೆ ಹೂವಿನ ಹಾರ ಹಾಕಿ, ಫಲ-ತಾಂಬೂಲ ನೀಡಿ ಜಿಲ್ಲಾಡಳಿತದಿಂದ ಗೌರವ ಸಲ್ಲಿಸಿದರು.

ಸ್ವಾತಂತ್ರ್ಯ ಹೋರಾಟಗಾರ ರಾಮಾಚಾರ್ಯ ನವಲಿ ಅವರು ಶಿಕ್ಷಕ-ಪ್ರಾಧ್ಯಾಪಕರಾಗಿ‌ ನಿವೃತ್ತಿ ಹೊಂದಿದ್ದಾರೆ.

ಪ್ರಾಥಮಿಕ ಶಿಕ್ಷಣ ಗಂಗಾವತಿಯಲ್ಲಿ, ಪ್ರೌಢ ಶಿಕ್ಷಣ ಕಲಬುರಗಿಯಲ್ಲಿ, ಬಿ.ಎ ಮತ್ತು ಎಂ.ಎ.ಪದವಿಯನ್ನು ಹೈದ್ರಾಬಾದಿನ ಖಸ್ಮಾನಿಯಾ ವಿಶ್ವವಿದ್ಯಾಲಯದಿಂದ ಹಾಗೂ ಎಂ.ಎಡ್ ಪದವಿ ಧಾರವಾಡದ‌ ಕರ್ನಾಟಕ ವಿಶ್ವವಿದ್ಯಾಲಯದಿಂದ ಪಡೆದಿದ್ದಾರೆ. ವಿದ್ಯಾರ್ಥಿ ದೆಸೆಯಲ್ಲಿ ವಂದೆ ಮಾತರಂ ಮುಷ್ಕರದಲ್ಲಿ ಭಾಗಿಯಾಗಿದ್ದ ಇವರು ಮುಂದೆ ಸ್ವಾತಂತ್ರ್ಯ ಹೋರಾಟ ಮತ್ತು ಹೈದ್ರಾಬಾದ್ ಕರ್ನಾಟಕ ವಿಮೋಚನಾ ಚಳುವಳಿಯಲ್ಲಿಯೂ ಸಕ್ರಿಯವಾಗಿ ಭಾಗಿಯಾಗಿದ್ದರು.

ಈ ಸಂದರ್ಭದಲ್ಲಿ ಅಪರ‌ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಸಹಾಯಕ ಆಯುಕ್ತೆ ಮಮತಾ ಕುಮಾರಿ, ಕಲಬುರಗಿ ತಹಶೀಲ್ದಾರ ನಾಗಮ್ಮ ಕಟ್ಟಿಮನಿ, ಡಿ.ಸಿ.ಕಚೇರಿಯ ಶಿಷ್ಟಾಚಾರ ತಹಶೀಲ್ದಾರ ನಿಸಾರ್ ಅಹಮದ್ ಇದ್ದರು.

emedialine

Recent Posts

ಸಮಾಜದ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಕೊಡುಗೆ ಅಪಾರ

ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…

10 hours ago

ದಲಿತ ಸಂಘರ್ಷ ಸಮಿತಿ ಮೂಲಕ ನೊಂದವರಿಗೆ ನ್ಯಾಯ ಕೊಡಿಸೋಣ

ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…

10 hours ago

ಬಿಜೆಪಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ ಧರ್ಮಸಿಂಗ್‌ ಟಾಂಗ್‌

ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್‌ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್‌ಐಆರ್‌…

10 hours ago

ಲಲಿತಾ ಜಮಾದಾರ್‌ಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…

10 hours ago

ಪೌರಕಾರ್ಮಿಕರ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…

10 hours ago

ನಿರ್ಗತಿಕರಿಗೆ ಬಟ್ಟೆ, ಆಟದ ಸಾಮಾನು ವಿತರಣೆ

ಕಲಬುರಗಿ: ಇನ್ನರ್‍ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್‍ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…

11 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420