ಕಲಬುರಗಿ: ಕ್ರೀಡಾ ಇಲಾಖೆ ಚರ್ಚೆ ವೇಳೆಯಲ್ಲಿ ಇಲಾಖೆಯ ಪ್ರಗತಿ ಪರಿಶೀಲಿಸಿ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಈ ಭಾಗದ ಮಕ್ಕಳಲ್ಲಿ ಕ್ರೀಡಾ ಕೌಶಲ್ಯ ಹೆಚ್ಚಿಸಲು ಆದ್ಯತೆ ಕೊಡಬೇಕು. ಇಂಟರ್ ಸ್ಕೂಲ್, ಇಂಟರ್ ಕಾಲೇಜು ಕ್ರಿಡಾಕೂಟ ಆಯೋಜಿಸಬೇಕು. ಮಕ್ಕಳನ್ನು ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧಿಸುವ ನಿಟ್ಟಿನಲ್ಲಿ ತರಬೇತಿ ನೀಡಬೇಕಿದೆ ಎಂದು ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಸೋಮವಾರ ಇಲ್ಲಿನ ಡಿ.ಸಿ. ಕಚೇರಿಯಲ್ಲಿ ಸಭಾಂಗಣದಲ್ಲಿ ಮುಜರಾಯಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜಿಲ್ಲಾ ಖನಿಜ ಪ್ರತಿಷ್ಠಾನದ ಸಭೆ ನಡೆಸಿ ಮಾತನಾಡಿದರು.
ಜಿಲ್ಲಾ ಕ್ರೀಡಾಂಗಣ ಸಮರ್ಪಕ ಅಭಿವೃದ್ಧಿಪಡಿಸಬೇಕು. ವಿವಿಧ ಕ್ರೀಡಾ ಅಸೋಸಿಯೇಷನ್ ಗಳೊಂದಿಗೆ ಮಾತನಾಡಿ, ಅವರ ಸಮಸ್ಯೆಗಳ ಪರಿಹಾರಕ್ಕೆ ಇಲಾಖೆ ಮುಂದಾಗಬೇಕು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಗಾಯತ್ರಿ ಅವರಿಗೆ ಸಚಿವರು ನಿರ್ದೇಶನ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವಾರ ಸಿಂಗ್ ಮೀನಾ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಭೂವಿಜ್ಞಾನಿ ಪ್ರವೀಣ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…