ಕಲಬುರಗಿ: ರೈತರ, ಬಡವರ, ಕೂಲಿ ಕಾರ್ಮಿಕರ, ದಲಿತರ, ಹಿಂದುಳಿದವರ, ಅಲ್ಪಸಂಖ್ಯಾತರ ಹಾಗೂ ಮಹಿಳೆಯರ ವಿರೋಧಿ ಆಡಳಿತ ನಡೆಸಿದ ಮೋದಿಯನ್ನು ಸೋಲಿಸುವಂತೆ ಮತದಾರರಿಗೆ ಕಲಬುರಗಿ ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಸನ್ಮಾನ್ಯ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದರು.
ಸೇಡಂ ಪಟ್ಟಣದಲ್ಲಿ ಏರ್ಪಡಿಸಲಾಗಿದ್ದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿ, ರೈತರ ಆದಾಯ ಹೆಚ್ಚಿಸುವ ವಾಗ್ದಾನ ಮಾಡಿದ್ದ ಮೋದಿ ಲಾಭ ಮಾಡಿದ್ದು ಮಾತ್ರ ವಿಮಾ ಕಂಪನಿಗಳಿಗೆ ಎಂದು ಆರೋಪಿಸಿದ ಅವರು ರೈತರಿಂದ ಕಲೆಕ್ಟ್ ಮಾಡಿದ್ದ 48,000 ಕೋಟಿ ವಿಮಾ ಹಣದಲ್ಲಿ ರೈತರಿಗೆ ನೀಡಿದ್ದು ಮಾತ್ರ 20000 ಕೋಟಿ ಉಳಿದ 28000 ಕೋಟಿ ರೈತರ ಹಣವನ್ನು ವಿಮಾ ಕಂಪನಿಗಳಿಗೆ ದಾರೆ ಎರೆದಿದ್ದಾರೆ ಎಂದು ದೂರಿದರು.
ಮೋದಿ ತನ್ನ ಬಂಡವಾಳಶಾಹಿ ಧೋರಣೆಯಿಂದಾಗಿ ರೈತರು ಹಾಗೂ ಬಡವರು ಕಂಗಾಲಾಗಿದ್ದರೆ ಅಂಬಾನಿ ಅದಾನಿಯಂತ ಶ್ರೀಮಂತರು ಕೋಟಿಗಟ್ಟಲೇ ಸರಕಾರದ ಲಾಭ ಪಡೆದುಕೊಂಡಿದ್ದಾರೆ. ರೈತರ ಸಾಲ ಮನ್ನಾ ಮಾಡಲು ಮೀನ ಮೇಷ ಎಣಿಸುವ ಮೋದಿ ಶ್ರೀಮಂತ ಉದ್ಯಮಿಗಳ ಒಟ್ಟು 3,75,000 ಕೋಟಿ ಸಾಲ ಮನ್ನಾ ಮಾಡಿ ದೇಶದ ಆರ್ಥಿಕ ವ್ಯವಸ್ಥೆಯನ್ನೇ ಹಾಳು ಮಾಡಿದ್ದಾರೆ ಎಂದರು.
ಮಾಜಿ ಸಚಿವ ಡಾ ಶರಣಪ್ರಕಾಶ್ ಪಾಟೀಲ್ ಮಾತನಾಡಿ ಕಳೆದ ನಾಲ್ಕು ದಶಕಗಳಿಂದ ರಾಜಕೀಯದಲ್ಲಿರುವ ಮಲ್ಲಿಕಾರ್ಜುನ ಖರ್ಗೆ ಅವರು ಕಪ್ಪುಚುಕ್ಕೆ ಇಲ್ಲದಂತೆ ಸಿದ್ದಾಂತದ ತಳಹದಿಯ ಮೇಲೆ ರಾಜಕಾರಣ ಮಾಡುತ್ತಿದ್ದಾರೆ. ಜಾಧವ್ ತರ ಹಣದ ಆಣೆಗೆ ಮತ್ತೊಂದು ಪಕ್ಷಕ್ಕೆ ಹೋಗುವಂತೆ ನಾಚಿಕೆಗೆಟ್ಟ ರಾಜಕಾರಣವಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮೋದಿಯ ಹೆಸರೇಳಿ ಮತ ಕೇಳುವವರ ಸಾಧನೆ ಏನೆಂದು ಮತದಾರರು ಕೇಳಬೇಕು ಎಂದು ಮನವಿ ಮಾಡಿ, ಅಭಿವೃದ್ದಿ ಪರವಿರುವ ಖರ್ಗೆ ಅವರನ್ನು ಗೆಲ್ಲಿಸುವ ಮೂಲಕ ಮೋಸಗಾರರಿಗೆ ತಕ್ಕ ಪಾಠ ಕಲಿಸಬೇಕು ಎಂದು ಕರೆ ನೀಡಿದರು.
ವೇದಿಕೆಯ ಮೇಲೆ ಮಾಜಿ ರಾಜ್ಯಸಭಾ ಸದಸ್ಯ ಕೆ.ಬಿ.ಶಾಣಪ್ಪ, ಮುಕ್ರಮ್ ಖಾನ್ ಸೇರಿದಂತೆ ಹಲವರು ಇದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…