ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರಸಿದ್ಧ ಸೂಫಿ ಸಂತ ಹಜರತ್ ಖಾಜಾ ಬಂದಾ ನವಾಜ್ ದರ್ಗಾ (ರ.ಅ) ದರ್ಗಾಕ್ಕೆ ನೂತನವಾಗಿ ನೇಮಕಗೊಂಡಿರುವ ಜೇವರ್ಗಿ ಕ್ಷೇತ್ರದ ಶಾಸಕ ಡಾ. ಅಜಯಸಿಂಗ್ ದರ್ಶನ ಪಡೆದರು. ನಂತರ ಖಾಜಾ ಬಂದಾನವಾಜ್ ದರ್ಗಾದ ಛೋಟಿ ದರ್ಗಾಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಛೋಟಿ ದರ್ಗಾದ ಪಿಠಾಧಿಪತಿಗಳಾದ ನಿಜಾಮ್ ಬಾಬಾ ಅಲ್ ಹುಸೈನಿ ಅವರು ಜೊತೆಗೆ ಇದ್ದರು.
ನಂತರ ಮಾತನಾಡಿದ ಅವರು ತನ್ನ ತಂದೆ ದಿವಂಗತ ಎನ್ ಧರ್ಮಂ ಸಿಂಗ್ ಅವರ ಮೊಟ್ಟ ಮೊದಲ ಬಾರಿಗೆ ಶಾಸಕರಾಗಿ ಖಾಜಾ ಬಂದಾ ನವಾಜ್ ಅವರ ದರ್ಗಾಕ್ಕೆ ಭೇಟಿ ಕೊಟ್ಟಿದರು. ರಾಜ್ಯ ಸರಕಾರದಲ್ಲಿ ಸಮಾಜ ಕಲ್ಯಾಣ ಸೇರಿದಂತೆ ವಿವಿಧೆ ಹುದ್ದೆಗಳಲ್ಲಿ ಕೆಲಸ ಮಾಡಿ ರಾಜ್ಯದ ಮುಖ್ಯಮಂತ್ರಿಯಾಗಿ ದರ್ಗಾಕ್ಕೆ ಭೇಟಿ ಕೊಟ್ಟು ಆಶೀರ್ವಾದ ಪಡೆದಿದರು. ಖಾಜಾ ಬಂದಾ ನವಾಜ್ ದರ್ಗಾ ಮತ್ತು ತನ್ನ ಕುಟುಂಬದ ನಡುವೆ ಇರುವ ನಂಟನ್ನು ಹಂಚಿಕೊಂಡರು.
ಈ ಸಂದರ್ಭದಲ್ಲಿ ಕಲಬುರಗಿ ಮಹಾನಗರ ಪಾಲಿಕೆಯ ಮಾಜಿ ಮಹಾಪೌರರಾದ ಸೈಯದ್ ಅಹ್ಮದ್, ಪಾಲಿಕೆ ಸದಸ್ಯ ಖುಸ್ರೊ ಜಾಗಿರದಾರ್, ಮಜಹರ್ ಆಲಮ್ ಖಾನ್ ಸೇರಿದಂತೆ ಪಕ್ಷದ ಮುಖಂಡರು ಮತ್ತು ಕಾರ್ಯಾಕರ್ತರು ಉಪಸ್ಥಿತರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…