ಕಲಬುರಗಿ: ಪ್ರಧಾನಿ ಮೋದಿ ತಮ್ಮ ಜವಾಬ್ದಾರಿಯನ್ನು ನಿಭಾಯಿಸುವಲ್ಲಿ ವಿಫಲರಾಗಿದ್ದು ಸೈನಿಕರು ಹುತಾತ್ಮರಾಗಿರುವ ವಿಚಾರಗಳಲ್ಲಿ ಭಾವನಾತ್ಮಕವಾಗಿ ಭಾಷಣ ಮಾಡುತ್ತಾ ಜನರನ್ನು ನಿಜವಾದ ಸಮಸ್ಯೆಗಳಿಂದ ದಾರಿ ತಪ್ಪಿಸುತ್ತಿದ್ದಾರೆ ಎಂದು ಖ್ಯಾತ ತೆಲುಗು ನಟಿ ಹಾಗೂ ರಾಜಕಾರಣಿ ವಿಜಯಶಾಂತಿ ಹರಿಹಾಯ್ದರು.
ಮುಧೋಳ ಪಟ್ಟಣದಲ್ಲಿ ಏರ್ಪಡಿಸಲಾಗಿದ್ದ ಕಾಂಗ್ರೇಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಅವರ ಪ್ರಚಾರಸಭೆಯಲ್ಲಿ ಭಾಗವಹಿಸಿ ಮಾತನಾಡಿ, ಈ ಚುನಾವಣೆ ಮೋದಿ ಹಾಗೂ ರಾಹುಲ್ ನಡುವೆ ನಡೆದ ಚುನಾವಣೆಯಾಗಿದ್ದು ದೇಶಕ್ಕೆ ಸುಭದ್ರ ಹಾಗೂ ಜನಪರ ಸರಕಾರಕ್ಕಾಗಿ ಕಾಂಗ್ರೇಸ್ ಪಕ್ಷಕ್ಕೆ ಮತ ನೀಡಿ ಎಂದು ಮನವಿ ಮಾಡಿ ಐಟಿ ರೈಡ್ ಮಾಡಿಸುವ ಮೂಲಕ ತಮ್ಮ ಎದುರಾಳಿಗಳಿಗೆ ಭಯ ಹುಟ್ಟಿಸುತ್ತಾರೆ. ಮೋದಿ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ದೇಶ ಹಿನ್ನಡೆ ಅನುಭವಿಸುತ್ತದೆ ಎಂದರು.
ಬಿಜೆಪಿಯವರು ಮತದಾರರನ್ನು ಓಲೈಸಲು ಎಲ್ಲ ರೀತಿಯ ದಾರಿಗಳನ್ನು ಬಳಸಬಹುದು. ಹಾಗಾಗಿ, ಮತದಾರರು ಅಭಿವೃದ್ದಿಪರ ಇರುವ ಖರ್ಗೆ ಅವರನ್ನು ಗೆಲ್ಲಿಸುವ ಮೂಲಕ ಕಾಂಗ್ರೇಸ್ ಪಕ್ಷದವರನ್ನು ಸೋಲಿಸಿ ಎಂದು ಕರೆಕೊಟ್ಟರು. ನಂತರ ಮಾತನಾಡಿದ ಖರ್ಗೆ ಅವರು ಮೋದಿ ನಿರುದ್ಯೋಗದ ಸಮಸ್ಯೆ ನಿವಾರಿಸುವಲ್ಲಿ ವಿಫಲರಾಗಿದ್ದಾರೆ ಹಾಗಾಗಿ ಐದು ವರ್ಷಗಳಲ್ಲಿ ಸೃಷ್ಟಿಯಾಗಬೇಕಿದ್ದ 10 ಕೋಟಿ ಉದ್ಯೋಗಗಳು ಸೃಷ್ಠಿಯಾಗಿಲ್ಲ ಎಂದು ಹೇಳಿದರು. ವೇದಿಕೆಯ ಮೇಲೆ ಮಾಜಿ ಸಚಿವ ಡಾ ಶರಣಪ್ರಕಾಶ್ ಪಾಟೀಲ್ ಹಾಗೂ ಮತ್ತಿತರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…