ಬಿಸಿ ಬಿಸಿ ಸುದ್ದಿ

ವಿದ್ಯಾರ್ಥಿಗಳು ಪಠ್ಯಪುಸ್ತಕಕ್ಕೆ ಸೀಮಿತ ಬೇಡ

ಆಳಂದ; ಇಂದಿನ ಯುವಜನತೆ ಪಠ್ಯ ಪುಸ್ತಕಕ್ಕೆ ಸೀಮಿತವಾಗಿದ್ದು, ಸಮಾಜದಲ್ಲಿನ ವಿಚಾರಗಳನ್ನು ಅರಿಯದೇ ಜೀವನ ನಿರ್ವಹಣೆ ಕಷ್ಟಸಾಧ್ಯವಾಗಿ ವಿಚಲಿತರಾಗುತ್ತಿದ್ದಾರೆ ಎಂದು ಎಸ್‍ಆರ್‍ಜಿ ಫೌಂಡೇಶನನ ಆಡಳಿತಾಧಿಕಾರಿ ಡಾ. ರಾಘವೇಂದ್ರ ಚಿಂಚನಸೂರ ಅಭಿಪ್ರಾಯಪಟ್ಟರು.

ಪಟ್ಟಣದ ಜೀವನಜ್ಯೋತಿ ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆಯ ಮಾತೋಶ್ರೀ ಅಂಬವ್ವಾ ರುಕ್ಮಯ್ಯ ಗುತ್ತೇದಾರ ಸ್ಮಾರಕ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಸ್ವಾಗತ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಮನಸ್ಸಿನ ಆಕರ್ಷಣೆಗಳು ತಾತ್ಕಾಲಿಕವಾಗಿದ್ದು, ಅವುಗಳ ಹಿಂದೆ ಹೋದವರು ಜೀವನದಲ್ಲಿ ನೊಂದಿರುವ ನಿದರ್ಶನಗಳು ಹೆಚ್ಚಾಗಿವೆ. ಕಾಲೇಜು ಸಂದರ್ಭದಲ್ಲಿ ಉತ್ತಮ ಸ್ನೇಹ ಗಳಿಸಿಕೊಂಡು ಶೈಕ್ಷಣಿಕ ಪ್ರಗತಿ ಸಾಧಿಸಿದರೆ ಉತ್ತಮ ಜೀವನ ರೂಪಿಸಿಕೊಳ್ಳಬಹುದು ಎಂದರು.

ವಿದ್ಯಾರ್ಥಿಗಳು ರಸ್ತೆ ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು. ಸ್ವಯಂ ಪ್ರೇರಣೆಯಿಂದ ಸಮಾಜಮುಖಿ ಕಾರ್ಯಗಳಲ್ಲಿ ಭಾಗವಹಿಸಬೇಕು. ಶಿಕ್ಷಣದ ನಂತರದಲ್ಲಿ ಉತ್ತಮ ಜೀವನ ರೂಪಿಸಿಕೊಳ್ಳುವಂತೆ ಸೂಚಿಸಿದರು. ಸಂಸ್ಥೆಯ ಬಿ ಎಡ್ ಕಾಲೇಜಿನ ಪ್ರಾಚಾರ್ಯ ಅಶೋಕರೆಡ್ಡಿ ಮಾತನಾಡಿ, ವಿದ್ಯಾರ್ಥಿಗಳು ಮೊಬೈಲ್ ಬಳಕೆ ಬಿಟ್ಟು ಅಧ್ಯಯನಶೀಲರಾಗಬೇಕು. ಮೊಬೈಲ್ ಬಳಕೆಯಿಂದ ಮನಸ್ಸು ಹಾಳಾಗುತ್ತದೆ ಮನಸ್ಸಿನ ಏಕಾಗ್ರತೆಗಾಗಿ ಯೋಗ, ಧ್ಯಾನ ದಿನನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ವಿದ್ಯಾರ್ಥಿಗಳು ಶ್ರದ್ಧೆಯಿಂದ ಓದಿದರೆ ಮಾತ್ರ ಉತ್ತಮ ಅಂಕ ಗಳಿಸಬಹುದು. ದುಶ್ಚಟಗಳಿಂದ ದೂರವಿದ್ದು, ನಿತ್ಯ ಲಿಂಗಪೂಜೆ, ಯೋಗಾಭ್ಯಾಸ ರೂಢಿಸಿಕೊಳ್ಳಬೇಕು ಎಂದರು.

ಪ್ರತಿಯೊಬ್ಬ ವಿದ್ಯಾರ್ಥಿ ಉತ್ತಮವಾಗಿ ಓದಿ ಪ್ರಜ್ಞಾವಂತರಾಗಿ ದೇಶಕ್ಕೆ ಮತ್ತು ಕಾಲೇಜಿಗೆ ಕೀರ್ತಿ ತರಬೇಕು. ಆಳಂದ ತಾಲೂಕು ಕಲಬುರಗಿ ಜಿಲ್ಲೆಯಲ್ಲಿಯೇ ಶೈಕ್ಷಣಿಕವಾಗಿ ಮುಂದುವರೆದ ತಾಲೂಕು ಆಗಿದೆ ಇಲ್ಲಿ ವಿದ್ಯಾಭ್ಯಾಸ ಮಾಡಿದವರು ಸರ್ಕಾರದ ವಿವಿಧ ಮಟ್ಟದಲ್ಲಿ ಉನ್ನತ ಹುದ್ದೆ ಅಲಂಕರಿಸಿದ್ದಾರೆ ಎಂದರು.

ಕಾರ್ಯಕ್ರಮದ ವೇದಿಕೆಯಲ್ಲಿ ವಿಕೆಜಿ ಪದವಿ ಕಾಲೇಜು ಪ್ರಾಚಾರ್ಯ ಕಲ್ಯಾಣಿ ಸಾವಳಗಿ, ಶ್ರೀಧರ ಪಾಟೀಲ, ಮಲ್ಲಿನಾಥ ತುಕ್ಕಾಣೆ, ಮಲ್ಲಿಕಾರ್ಜುನ ಬುಕ್ಕೆ, ರಾಜಕುಮಾರ ಚಿಚಕೋಟೆ, ಸಿದ್ದಾರಾಮ ಧೋತ್ರೆ, ಶಶಿಕಾಂತ ಭೂಸಣಗೆ, ಶರಣಬಸಪ್ಪ ಶಿರೂರೆ, ಸಂತೋಷ ಕುಲಕರ್ಣಿ, ಜ್ಯೋತಿ ವಿಶಾಖ್ ಇದ್ದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಥಮ ಹಾಗೂ ದ್ವೀತಿಯ ವರ್ಷದ ಪಿಯು ವಿದ್ಯಾರ್ಥಿಗಳು, ಬೋಧಕ ಮತ್ತ ಬೊಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಉಪನ್ಯಾಸಕ ಚೆನ್ನಬಸಪ್ಪ ಹೊತಗಲ್ ಸ್ವಾಗತಿಸಿದರೆ, ಜಗದೇವಿ ಬಿರಾದಾರ ವಂದಿಸಿದರು. ಮಲ್ಲಿಕಾರ್ಜುನ ಶೃಂಗೇರಿ, ಲಕ್ಷ್ಮೀ ಬಿರಾದಾರ ವಂದಿಸಿದರು. ಪ್ರಾಚಾರ್ಯ ಡಾ. ಅಪ್ಪಾಸಾಬ ಬಿರಾದಾರ ಅಧ್ಯಕ್ಷತೆ ವಹಿಸಿದ್ದರು.

emedialine

Recent Posts

ಸಿದ್ದರಾಮಯ್ಯ ಅವರದು ಹೆದರುವ ರಕ್ತವಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ಕಲಬುರಗಿ: ಮುಡಾ ಹಗರಣದ ತನಿಖೆಗೆ ಮುಖ್ಯಮಂತ್ರಿಗಳೇ ನ್ಯಾಯಾಂಗ ಸಮಿತಿ ರಚಿಸಿ ತನಿಖೆಗೆ ಆದೇಶ ನೀಡಿದ್ದಾರೆ. ನಲವತ್ತು ವರ್ಷ ರಾಜಕಾರಣ ಮಾಡಿಕೊಂಡು…

2 mins ago

ನ್ಯಾಯಮೂರ್ತಿ ಡಾ. ಶಿವರಾಜ ವಿ. ಪಾಟೀಲರ ನುಡಿಮುತ್ತುಗಳು ಜೀವನದಲ್ಲಿ ಅಳವಡಿಸಿಕೊಳ್ಳಿ

ಕಲಬುರಗಿ: ನಗರದ ಜಸ್ಟಿಸ್ ಶಿವರಾಜ ವಿ. ಪಾಟೀಲ ಪ್ರತಿಷ್ಠಾನ ಮತ್ತು ಸರ್ವಜ್ಞ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯ ಕಲಬುರಗಿಯಲ್ಲಿ ಶ್ರಾವಣ…

19 hours ago

ಛಾಯಾಚಿತ್ರ ಪ್ರದರ್ಶನ ಭಾಷೆಯಷ್ಟೇ ಪ್ರಬಲ ಮಾಧ್ಯಮ

ಕಲಬುರಗಿ : ಒಂದು ಛಾಯಾಚಿತ್ರ ನೂರು ಪದಗಳಲ್ಲಿ ಹೇಳಬಹುದಾದೊಂದನ್ನು ಪರಿಣಾಮಕಾರಿ ಹೇಳುತ್ತದೆ, ಅದು ಭಾಷೆಯಷ್ಟೇ ಪ್ರಬಲ ಮಾಧ್ಯಮ ಎಂದು ಹಿರಿಯ…

19 hours ago

ಕಲಬುರಗಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು 29 ರಂದು: ಸರ್ವಾಧ್ಯಕ್ಷೆ ಲೇಖಕಿ ಪ್ರಮೀಳಾ ಜಾನಪ್ಪಗೌಡಗೆ ಸನ್ಮಾನ

ಕಲಬುರಗಿ: ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ಆಗಷ್ಟ್ 29 ರಂದು ಹಮ್ಮಿಕೊಂಡಿರುವ ತಾಲೂಕಾ 8ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ…

19 hours ago

18 ವರ್ಷ ಮೇಲ್ಪಟ್ಟ ಅರ್ಹರು ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಡಿ.ಸಿ.ಮನವಿ

ಕಲಬುರಗಿ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ದಿ.01-01-2025 ಅರ್ಹತಾ ದಿನವನ್ನಾಗಿ ಪರಿಗಣಿಸಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯವು ಇದೇ…

20 hours ago

ನಾಳೆ ಕಲಬುರಗಿಗೆ ಉಪ ಮುಖ್ಯಮಂತ್ರಿ ಆಗಮನ: ಜಿಲ್ಲಾಧಿಕಾರಿಗಳಿಂದ ಸ್ಥಳ ಪರಿಶೀಲನೆ

ಕಲಬುರಗಿ: ರಾಜ್ಯದ "ಮುಖ್ಯಮಂತ್ರಿಗಳು ಹಾಗೂ ಜಲಸಂಪನ್ಮೂಲ ಸಚಿವರಾದ ಡಿ.ಕೆ.ಶಿವಕುಮಾರ ಅವರು ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಕಲಬುರಗಿ ನಗರದ ಪಿ.ಡಿ.ಎ.…

20 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420